"ಸುಲ್ಲಿ ಡೀಲ್ಸ್" ಅಪ್ಲಿಕೇಶನ್ ಸೃಷ್ಟಿಕರ್ತ ಇಂದೋರ್‌ನಲ್ಲಿ ಅರೆಸ್ಟ್
ನವದೆಹಲಿ, ಜನವರಿ 9: ಸುಲ್ಲಿ ಡೀಲ್ಸ್ ಎಂಬ ಅಪ್ಲಿಕೇಶನ್‌ನ ಸೃಷ್ಟಿಕರ್ತ ಎಂದು ಹೇಳಲಾದ ಮಧ್ಯಪ್ರದೇಶದ ವ್ಯಕ್ತಿಯನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಸುಲ್ಲಿ ಡೀಲ್ಸ್ ಆ್ಯಪ್ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಕಳೆದ ವರ್ಷ ಬಿಡುಗಡೆಯಾದ ಸುಲ್ಲಿ ಡೀಲ್ಸ್ ಆ್ಯಪ್‌ನಲ್ಲಿ ಅನುಮತಿಯಿಲ್ಲದೆ ಮಸ್ಲಿಂ ಮಹಿಳೆಯರ ಫೋಟೋಗಳನ್ನು ಹರಾಜಿಗೆ ಪಟ್ಟಿ ಮಾಡಲಾಗಿತ್ತು.
ಆರೋಪಿ ಓಂಕಾರೇಶ್ವರ್ ಠಾಕೂರ್ ಅವರನ್ನು ಮಧ್ಯಪ್ರದೇಶದ ಇಂದೋರ್‌ನಲ್ಲಿ ದೆಹಲಿ ಪೊಲೀಸರ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಸಿಬ್ಬಂದಿಗಳು ಬಂಧಿಸಿದೆ. "ಓಂ ಠಾಕೂರ್ ಅವರನ್ನು ಇಂದೋರ್‌ನಿಂದ ಬಂಧಿಸಲಾಗಿದೆ. ಸುಲ್ಲಿ ಡೀಲ್ ಆ್ಯಪ್ ಪ್ರಕರಣದ ಹಿಂದಿನ ಪ್ರಮುಖ ಸೂತ್ರಧಾರ ಈತ" ಎಂದು ದೆಹಲಿ ಪೊಲೀಸ್ ವಿಶೇಷ ಕೋಶದ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ ಘಟಕದ ಉಪ ಪೊಲೀಸ್ ಆಯುಕ್ತ ಕೆಪಿಎಸ್ ಮಲ್ಹೋತ್ರಾ ಹೇಳಿದ್ದಾರೆ.
26ರ ಹರೆಯದ ಠಾಕೂರ್ ಅವರು ಇಂದೋರ್‌ನ ಐಪಿಎಸ್ ಅಕಾಡೆಮಿಯಲ್ಲಿ ಬಿಸಿಎ ವ್ಯಾಸಂಗ ಮಾಡಿದ್ದಾರೆ ಮತ್ತು ನ್ಯೂಯಾರ್ಕ್ ಸಿಟಿ ಟೌನ್‌ಶಿಪ್‌ನ ನಿವಾಸಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ. ಠಾಕೂರ್ ಅವರು ಗಿಟ್‌ಹಬ್‌ನಲ್ಲಿ 'ಸುಲ್ಲಿ ಡೀಲ್ಸ್' ಕೋಡ್ ಅನ್ನು ಅಭಿವೃದ್ಧಿಪಡಿಸಿದ್ದಾರೆ ಮತ್ತು ಟ್ವಿಟರ್‌ನಲ್ಲಿ ಅಪ್ಲಿಕೇಶನ್ ಅನ್ನು ಹಂಚಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ್ಯಪ್ ಇತ್ತೀಚೆಗಷ್ಟೇ ಸುದ್ದಿಯಾದ ಆದ ನಂತರ ಠಾಕೂರ್ ಅವರು ತಮ್ಮ ಎಲ್ಲಾ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಅಳಿಸಿದ್ದರು. ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದು, ಆತನ ಬಳಿ ಸಿಕ್ಕಿರುವ ಗ್ಯಾಜೆಟ್‌ಗಳನ್ನು ಸ್ಕ್ಯಾನ್ ಮಾಡುತ್ತಿದ್ದಾರೆ. 'ಬುಲ್ಲಿ ಬಾಯಿ' ಆ್ಯಪ್ ಸೃಷ್ಟಿಕರ್ತ ನಿರಾಜ್ ಬಿಷ್ಣೋಯ್ ಅವರನ್ನು ವಿಚಾರಣೆಯ ಸಮಯದಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಠಾಕೂರ್ ಅವರನ್ನು ಗುರುತಿಸಿ ಬಂಧಿಸಿದ್ದಾರೆ. ಬುಲ್ಲಿ ಬಾಯಿ ಆ್ಯಪ್ ಪ್ರಕರಣದಲ್ಲಿ ಬಿಷ್ಣೋಯ್ ಹೊರತುಪಡಿಸಿ ಇತರ ಮೂವರು ಆರೋಪಿಗಳನ್ನು ಸಹ ಬಂಧಿಸಲಾಗಿದೆ.
ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ
ಬುಲ್ಲಿ ಬಾಯಿ ಆಪ್‌ನ ಮಾಸ್ಟರ್ ಮೈಂಡ್ ನೀರಜ್ ಬಿಷ್ಣೋಯ್ ಸದ್ಯ ದೆಹಲಿ ಪೊಲೀಸರ ವಶದಲ್ಲಿದ್ದಾರೆ. ವರದಿಯ ಪ್ರಕಾರ ನೀರಜ್ ಬಿಷ್ಣೋಯ್ ಜೈಲಿನಲ್ಲಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದಾದ ಬಳಿಕ ಪೊಲೀಸರು ನೀರಜ್‌ನ ವೈದ್ಯಕೀಯ ಪರೀಕ್ಷೆ ನಡೆಸಿ ಅವರು ಸುರಕ್ಷಿತವಾಗಿದ್ದಾರೆ ಎಂದು ಖಚಿತಪಡಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಸದ್ಯ ನೀರಜ್ ಸ್ಥಿರವಾಗಿದ್ದಾರೆ. ಈ ಸಂಪೂರ್ಣ ಪ್ರಕರಣದ ತನಿಖೆಗೆ ಸಂಬಂಧಿಸಿದ ಹಿರಿಯ ಅಧಿಕಾರಿಯೊಬ್ಬರು ತನಿಖೆಯನ್ನು ಮುಂದಕ್ಕೆ ಕೊಂಡೊಯ್ಯುವುದು ನೀರಜ್ ಅವರ ಯೋಜನೆಯಾಗಿರಬಹುದು. ಹೀಗಾಗಿ ಆತ್ಮಹತ್ಯೆಗೆ ಯತ್ನಸಿರುವ ಸಾಧ್ಯತೆ ಇದೆ ಎಂದು ಹೇಳಿದರು. ಆದರೆ ವಿಷಯದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸಂಪೂರ್ಣ ಭದ್ರತೆ ಮತ್ತು ಕಾಳಜಿಯೊಂದಿಗೆ ವಿಚಾರಣೆ ನಡೆಸುತ್ತಿದ್ದಾರೆ.
'ಸುಲ್ಲಿ ಡೀಲ್ಸ್' ಮತ್ತು ಇತ್ತೀಚೆಗೆ ರಚಿಸಲಾದ 'ಬುಲ್ಲಿ ಬಾಯಿ' ಅಪ್ಲಿಕೇಶನ್‌ಗಳಲ್ಲಿ ಮುಸ್ಲಿಂ ಮಹಿಳೆಯರ ಒಪ್ಪಿಗೆಯಿಲ್ಲದೆ ಅವರ ಫೋಟೋಗಳನ್ನು ಅಪ್‌ಲೋಡ್ ಮಾಡಲಾಗಿದೆ ಮತ್ತು ಅವರ ವಿರುದ್ಧ ಅನುಚಿತ ಟೀಕೆಗಳನ್ನು ರವಾನಿಸಲಾಗಿದೆ. ಎರಡೂ ಅಪ್ಲಿಕೇಶನ್‌ಗಳು ಕದ್ದ ಫೋಟೋಗಳನ್ನು ಹರಾಜು ಮಾಡಲು ಹೋಸ್ಟಿಂಗ್ ಪ್ಲಾಟ್‌ಫಾರ್ಮ್ 'ಗಿಟ್‌ಹಬ್' ಅನ್ನು ಬಳಸಿಕೊಂಡಿವೆ.












Click it and Unblock the Notifications