ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುನಂದಾ ಪುಷ್ಕರ್ ಸಾವು: ಸಂಸದ ಶಶಿ ತರೂರ್ ವಿರುದ್ಧ ಫೆ. 21ರಿಂದ ವಿಚಾರಣೆ

|
Google Oneindia Kannada News

ನವದೆಹಲಿ, ಫೆಬ್ರವರಿ 4: ಸುನಂದಾ ಪುಷ್ಕರ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ವಿಚಾರಣೆ ದೆಹಲಿ ಸೆಷನ್ಸ್ ಕೋರ್ಟ್‌ನಲ್ಲಿ ಫೆ. 21ರಿಂದ ಆರಂಭವಾಗಲಿದೆ.

ಪತ್ನಿ ಸುನಂದಾ ಪುಷ್ಕರ್ ಅವರನ್ನು ಆತ್ಮಹತ್ಯೆಗೆ ಪ್ರಚೋದಿಸಿದ ಮತ್ತು ಕ್ರೌರ್ಯ ಎಸಗಿದ ಆರೋಪಗಳಲ್ಲಿ ಶಶಿ ತರೂರ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಸುನಂದಾ ಪುಷ್ಕರ್ ಕೇಸ್: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು ಸುನಂದಾ ಪುಷ್ಕರ್ ಕೇಸ್: ಶಶಿ ತರೂರ್ ಗೆ ನಿರೀಕ್ಷಣಾ ಜಾಮೀನು

ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವು ನೀಡುವ ಕುರಿತು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಅವರ ಅರ್ಜಿಯನ್ನು ತಳ್ಳಿಹಾಕಿದ ಪರಿಯಾಲ ಹೌಸ್ ಕೋರ್ಟ್, ಪ್ರಕರಣವನ್ನು ವಿಚಾರಣೆಗೆ ರವಾನಿಸಿತು.

sunanda pushkar case delhi sessions court will began trail against Shashi Tharoor on February 21

ತರೂರ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ 498-A (ಮಹಿಳೆ ವಿರುದ್ಧ ಪತಿ ಅಥವಾ ಸಂಬಂಧಿಕರಿಂದ ಕ್ರೌರ್ಯ) ಮತ್ತು 306 (ಆತ್ಮಹತ್ಯೆಗೆ ಕುಮ್ಮಕ್ಕು) ಸೆಕ್ಷನ್ಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ, ಅವರನ್ನು ಈ ಕೇಸ್‌ನಲ್ಲಿ ಬಂಧಿಸಿಲ್ಲ. ಕಳೆದ ವರ್ಷ ತರೂರ್ ಅವರಿಗೆ ಜಾಮೀನು ನೀಡಲಾಗಿತ್ತು.

ಸುನಂದಾ ಪುಷ್ಕರ್‌ ಕೇಸ್ : ಮತ್ತೊಮ್ಮೆ ಚಾರ್ಜ್ ಶೀಟ್ ಸಲ್ಲಿಕೆ ಸುನಂದಾ ಪುಷ್ಕರ್‌ ಕೇಸ್ : ಮತ್ತೊಮ್ಮೆ ಚಾರ್ಜ್ ಶೀಟ್ ಸಲ್ಲಿಕೆ

2014ರ ಜನವರಿ 17ರ ರಾತ್ರಿ ಸುನಂದಾ ಪುಷ್ಕರ್ ಅವರು ದೆಹಲಿಯ ಐಷಾರಾಮಿ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ತರೂರ್ ಅವರಿದ್ದ ಬಂಗಲೆಯನ್ನು ನವೀಕರಿಸುತ್ತಿದ್ದ ಕಾರಣ ದಂಪತಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು.

English summary
Delhi Patiala house court will began the trail of Congress MP Shashi Tharoor from February 21 in his wife Sunanda Pushkar death case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X