Breaking: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿದ ಅರ್ಜಿ ಸೆ.19ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ನವೆಹಲಿ, ಸೆಪ್ಟೆಂಬರ್ 12: ಭಾರತದಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 19ಕ್ಕೆ ಮುಂದೂಡಿಕೆ ಮಾಡಿದೆ.
ಸಿಎಎ ಅನ್ನು ಪ್ರಶ್ನಿಸಿದ ಅರ್ಜಿಗಳ ಕುರಿತು ಸೋಮವಾರ ವಿಚಾರಣೆ ಆರಂಭಿಸಿದ ಸುಪ್ರೀಂಕೋರ್ಟ್, ಈ ಬಗ್ಗೆ ಸೆಪ್ಟೆಂಬರ್ 19ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ.
ಕಳೆದ 2014ರ ಡಿಸೆಂಬರ್ 31ಕ್ಕಿಂತ ಪೂರ್ವದಲ್ಲಿ ಭಾರತದ ನೆರೆಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ನೆಲೆಗಟ್ಟಿನಲ್ಲಿ ಕಿರುಕುಳ ಎದುರಿಸುತ್ತಿರುವ ಆರು ಸಮುದಾಯಗಳ ಜನರಿಗೆ ಭಾರತದ ಪೌರತ್ವವನ್ನು ನೀಡುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ 2019 ಅನ್ನು ಜಾರಿಗೊಳಿಸಲಾಗಿತ್ತು. ಆದರೆ ಇದೇ ಕಾಯ್ದೆಯ ಸುತ್ತ ಹಲವು ವಿವಾದಗಳು ಸೃಷ್ಟಿಯಾಗಿದ್ದವು.

ಅಕ್ರಮ ವಲಸಿಗರಿಗೆ ಭಾರತದ ಪೌರತ್ವ:
ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದವರಿಗೆ ಪೌರತ್ವ ನೀಡುವುದಕ್ಕಾಗಿ ಈ ತಿದ್ದುಪಡಿಯನ್ನು ಜಾರಿಗೊಳಿಸಲಾಗುತ್ತಿತ್ತು. ಆದರೆ ದೇಶದಲ್ಲಿ ಈ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಇಂದಿಗೂ ಕಾಯ್ದೆಯು ಅಧಿಕೃತವಾಗಿ ಜಾರಿಗೆ ಬಂದಿಲ್ಲ. ಭಾರತದ ಪೌರತ್ವಕ್ಕಾಗಿ ಅರ್ಹತೆ ಪಡೆಯಲು ಈ ಮೊದಲು ಕನಿಷ್ಠ 11 ವರ್ಷಗಳ ಕಾಲ ಇಲ್ಲಿಯೇ ವಾಸವಿರಬೇಕಿತ್ತು. ಆದರೆ ಈ ಅವಧಿಯನ್ನು 11 ರಿಂದ 5 ವರ್ಷಗಳಿಗೆ ತಗ್ಗಿಸಲಾಗಿದೆ. ಇದೇ ಕಾರಣದಿಂದಾಗಿ ಈ ಕಾನೂನು ಅಲ್ಪಸಂಖ್ಯಾತ ವಲಸಿಗರಿಗೆ ತಮ್ಮ ಅರ್ಜಿಗಳನ್ನು ತ್ವರಿತವಾಗಿ ಪತ್ತೆಹಚ್ಚಲು ಪೌರತ್ವ ತಿದ್ದುಪಡಿ ಕಾಯ್ದೆಯು ಸಹಾಯ ಮಾಡಬಹುದಿತ್ತು.
ಆನ್‌ಲೈನ್ ಮೂಲಕ ಪೌರತ್ವಕ್ಕಾಗಿ ಅರ್ಜಿ:
ಕಳೆದ 2018ರಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ಆನ್‌ಲೈನ್ ಮೂಲಕ ಪೌರತ್ವಕ್ಕಾಗಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿತು. ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಭಾರತಕ್ಕೆ ಆಗಮಿಸಿದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಪಾರ್ಸಿಗಳು, ಜೈನ ಮತ್ತು ಬೌದ್ಧರಿಗೆ ಭಾರತದ ಪೌರತ್ವ ನೀಡಲು ಏಳು ರಾಜ್ಯಗಳಲ್ಲಿ 16 ಕಲೆಕ್ಟರ್‌ಗಳನ್ನು ನಿಯೋಜಿಸಲಾಗಿತ್ತು.
ಆನ್‌ಲೈನ್ ಮೂಲಕವೇ ಈ ಅರ್ಜಿಗಳನ್ನು ಸ್ವೀಕರಿಸುವಂತೆ ಮಾಡಲಾಗಿತ್ತು. ಕಳೆದ ಮೇ 2021ರಲ್ಲಿ, ಪೌರತ್ವ ತಿದ್ದುಪಡಿ ಕಾಯ್ದೆ 1955ರ ವಿಭಾಗ 5 (ನೋಂದಣಿ) ಮತ್ತು ವಿಭಾಗ 6 (ನೈಸರ್ಗಿಕೀಕರಣ) ಅಡಿಯಲ್ಲಿ ಆರು ಸಮುದಾಯಗಳಿಗೆ ಸೇರಿದ ಅರ್ಜಿದಾರರಿಗೆ ಪೌರತ್ವ ಪ್ರಮಾಣಪತ್ರಗಳನ್ನು ನೀಡಲು ಗುಜರಾತ್, ಛತ್ತೀಸ್‌ಗಢ, ರಾಜಸ್ಥಾನ, ಹರಿಯಾಣ ಮತ್ತು ಪಂಜಾಬ್‌ಗಳಲ್ಲಿ 13 ಜಿಲ್ಲಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯವು ಅಧಿಕಾರ ನೀಡಿತು.












Click it and Unblock the Notifications