• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಇಬ್ಬರು ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

|

ನವದೆಹಲಿ, ಜುಲೈ 24: ಕರ್ನಾಟಕ ವಿಧಾನಸಭೆಯಲ್ಲಿ ಸೋಮವಾರ ಸಂಜೆ 5 ಗಂಟೆಯೊಳಗೆ ಸ್ಪೀಕರ್ ವಿಶ್ವಾಸಮತ ಯಾಚನೆ ನಡೆಸಬೇಕೆಂದು ಕೋರಿ ಪಕ್ಷೇತರ ಶಾಸಕರಾದ ಶಂಕರ್ ಮತ್ತು ನಾಗೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಮುಂದೂಡಿದೆ.

ಪಕ್ಷೇತ್ರ ಶಾಸಕರಾದ ಎನ್‌ ನಾಗೇಶ್ ಹಾಗೂ ಆರ್‌ ಶಂಕರ್ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.ಮಂಗಳವಾರ ಸಂಜೆ ಎಚ್‌ಡಿ ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಈ ಅರ್ಜಿ ವಿಚಾರಣೆಗೆ ಬಂದರೂ ಮಹತ್ವ ಕಳೆದುಕೊಳ್ಳಲಿದೆ.

ಇದಕ್ಕೂ ಮೊದಲು ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಗೊಗೊಯ್ ನೇತೃತ್ವದ ಪೀಠ ವಿಧಾನಸಭೆ ಸ್ಪೀಕರ್ ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸುವ ನಿರೀಕ್ಷೆ ಹೊಂದಿರುವುದಾಗಿ ತಿಳಿಸಿತ್ತು. ಆದರೆ ವಿಶ್ವಾಸಮತಕ್ಕೆ ಯಾಚನೆ ಪ್ರಕ್ರಿಯೆ ಮುಗಿಸಿದೆ.

ವಿಶ್ವಾಸಮತ ಯಾಚನೆ ಪ್ರಕ್ರಿಯೆಯೂ ನಡೆದಿದೆ. ಇದೀಗ ಎಚ್‌ಡಿ ಕುಮಾರಸ್ವಾಮಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಹೀಗಾಗಿ ಅರ್ಜಿ ವಿಚಾರಣೆ ನಡೆಸುವುದರಲ್ಲಿ ಯಾವುದೇ ಹುರುಳಿಲ್ಲ ಹಾಗಾಗಿ ವಿಚಾರಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ನಿರ್ದಿಷ್ಟ ಸಮಯವನ್ನು ತಿಳಿಸಿಲ್ಲ.

ಕೇವಲ 5 ಮತಗಳಿಂದ ಎಚ್‌ಡಿ ಕುಮಾರಸ್ವಾಮಿ ಸೋತಿದ್ದರು.ಮತ್ತೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವವರೆಗೂ ಕುಮಾರಸ್ವಾಮಿ ಕೇರ್ ಟೇಕರ್ ಚೀಫ್ ಮಿನಿಸ್ಟರ್ ಆಗಿರುತ್ತಾರೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

English summary
Supreme Court adjourned the rebel mlas petition even after the vote of confidence motion.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X