ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಡಿಯೂರಪ್ಪ ವಿರುದ್ಧದ ಕೇಸ್ ವಿಚಾರಣೆ ಮುುಂದೂಡಿದ 'ಸುಪ್ರೀಂ'

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೇಸ್ ವಿಚಾರಣೆ ನ. 14ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್. ಬಿಎಸ್ ವೈ ಸಿಎಂ ಆಗಿದ್ದಾಗಿನ 15 ಅಕ್ರಮ ಡಿನೋಟಿಫಿಕೇಷನ್ ಗಳ ಕೇಸ್.

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 21: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ 15 ಅಕ್ರಮ ಡಿನೋಟಿಫಿಕೇಷನ್ ಪ್ರಕರಣಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನ. 14ಕ್ಕೆ ಮುಂದೂಡಿದೆ.

ಅಂದಹಾಗೆ, ಈ ಪ್ರಕರಣ ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಡಿನೋಟಿಫಿಕೇಷನ್ ಪ್ರಕರಣವಲ್ಲ. ಸದ್ಯಕ್ಕೆ ಅದು ರಾಜ್ಯ ಹೈಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಸೆ. 21ರಂದು ಶಿವರಾಮ ಕಾರಂತ ಬಡಾವಣೆ ಪ್ರಕರಣದ ತೀರ್ಪು ಹೊರಬೀಳುವ ಸಾಧ್ಯತೆಗಳಿವೆ.

Supreme Court adjourns the hearing of the de-notifications case against BS Yeddyurappa

ಹಾಗಾಗಿ, ಸುಪ್ರೀಂ ಕೋರ್ಟ್ ನಲ್ಲಿರುವ ಪ್ರಕರಣಗಳು ಹಳೆಯ ಪ್ರಕರಣಗಳು. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಕಾಲದಲ್ಲಿ 15 ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆಂದು ಸಿಎಜಿ ಸಲ್ಲಿಸಿದ್ದ ವರದಿಯ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಾಲಯ ದಾಖಲಿಸಿಕೊಂಡಿದ್ದ ಪ್ರಕರಣಗಳವು.

ಆ ಎಲ್ಲಾ ಪ್ರಕರಣಗಳನ್ನು, ಕರ್ನಾಟಕ ಹೈಕೋರ್ಟ್ ನ ನ್ಯಾ. ರತ್ನಮಾಲಾ ಅವರಿದ್ದ ನ್ಯಾಯಪೀಠ ವಜಾಗೊಳಿಸಿದೆ. ನ್ಯಾಯಪೀಠದ ಈ ಆದೇಶವನ್ನು ಪ್ರಶ್ನಿಸಿದ್ದ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಆ ಮೇಲ್ಮನವಿಯ ವಿಚಾರಣೆಯನ್ನೇ ಈಗ ಸುಪ್ರೀಂ ಕೋರ್ಟ್ ಮುಂದೂಡಿದೆ.

English summary
Supreme Court has adjourned the hearing of the case against former Chief Minister BS Yeddyurappa, on Nov 14, says the sources.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X