ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೆಹಬೂಬಾ ಮುಫ್ತಿ: ತಾಯಿ-ಮಗಳ ಭೇಟಿಗೆ ಸುಪ್ರೀಂಕೋರ್ಟ್ ಒಪ್ಪಿಗೆ

|
Google Oneindia Kannada News

ನವದೆಹಲಿ,ಸೆಪ್ಟೆಂಬರ್ 5: ಬಂಧನದಲ್ಲಿರುವ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯನ್ನು ಭೇಟಿ ಮಾಡಲು ಮಗಳು ಇಲ್ತಿಜಾಗೆ ಸುಪ್ರೀಂಕೋರ್ಟ್ ಗುರುವಾರ ಸಮ್ಮತಿ ಸೂಚಿಸಿದೆ.

ಜಮ್ಮು ಕಾಶ್ಮೀರದಲ್ಲಿ ವಿಧಿ 370 ರದ್ದತಿ ಮಾಡುವ ಸಂದರ್ಭದಲ್ಲಿ ಮೆಹಬೂಬಾ ಮುಫ್ತಿ, ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ರಾಜಕೀಯ ಮುಖಂಡರುಗಳನ್ನು ಗೃಹಬಂಧನದಲ್ಲಿಡಲಾಗಿತ್ತು. ಕುಟುಂಬದವರಿಗೂ ಕೂಡ ಅವರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ.

ಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ: ಮುಫ್ತಿ, ಅಬ್ದುಲ್ಲಾ ಬಂಧನಕಾಶ್ಮೀರದಲ್ಲಿ ಉದ್ವಿಗ್ನ ವಾತಾವರಣ: ಮುಫ್ತಿ, ಅಬ್ದುಲ್ಲಾ ಬಂಧನ

ಇದೀಗ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಜಾ ಜಾವೇದ್‌ಗೆ ತಾಯಿಯನ್ನು ನೋಡಲು ಅವಕಾಶ ಮಾಡಿಕೊಡಲಾಗಿದೆ. ಇಲ್ತಿಜಾ ಜಾವೇದ್ ತಾಯಿಯನ್ನು ನೋಡಲು ಅವಕಾಶ ಮಾಡಿಕೊಡಿ ಎಂದು ಸುಪ್ರೀಂಕೋರ್ಟ್‌ಗೆ ಬುಧವಾರ ಮನವಿ ಮಾಡಿದ್ದರು.

Supreme Court Allowed Mehbooba Mufti Daughter To Meet Her Mother

ಗುರುವಾರ ಈ ವಿಚಾರಣೆಯನ್ನು ಕೈಗೆತ್ತಿಕೊಂಡ ಪೀಠ ಇಲ್ತಿಜಾ ಅವರಿಗೆ ತಾಯಿಯನ್ನು ನೋಡಲು ಅವಕಾಶ ಮಾಡಿಕೊಟ್ಟಿದೆ. ಆಗಸ್ಟ್ನಲ್ಲಿ ಇಲ್ತಿಜಾ ಗೃಹ ಸಚಿವ ಅಮಿತ್ ಶಾ ಗೆ ಪತ್ರ ಬರೆದು ತಮ್ಮ ಆಕ್ರೋಶ ಹೊರಹಾಕಿದ್ದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಜಮ್ಮು ಕಾಶ್ಮೀರ ರಾಜ್ಯವಾಗಿರದೆ ಕೇಂದ್ರಾಡಳಿತ ಪ್ರದೇಶವಾಗಿದೆ. ಭಾರತದ ಕಾನೂನು ಜಮ್ಮು ಕಾಶ್ಮೀರಕ್ಕೂ ಕೂಡ ಒಳಪಡುತ್ತದೆ.

English summary
Supreme Court Allowed Mehbooba Mufti Daughter Iltija Javed To Meet Her Mother, who is under detention following the restrictions imposed in the region.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X