ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಪೆಗಾಸಸ್ ಬೇಹುಗಾರಿಕೆ ಕುರಿತು ತನಿಖೆಗೆ ತಜ್ಞರ ಸಮಿತಿ ರಚಿಸಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಅಕ್ಟೋಬರ್ 27: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಪ್ರಕರಣ ಸಂಬಂಧ ತ್ವರಿತವಾಗಿ ತನಿಖೆ ನಡೆಸುವುದಕ್ಕೆ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಆರ್ ವಿ ರವೀಂದ್ರನ್ ನೇತೃತ್ವದ ಸಮಿತಿಯನ್ನು ರಚಿಸಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟಿಸಿದೆ.

ಬುಧವಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠವು ಪ್ರಕರಣದ ಮೂರು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿತು. ವ್ಯಕ್ತಿಗಳ ಮೇಲೆ ವಿವೇಚನಾರಹಿತ ಬೇಹುಗಾರಿಕೆ ನಡೆಸುವುದಕ್ಕೆ ಅನುಮತಿಸಲಾಗುವುದಿಲ್ಲ ಎಂದು ಕೋರ್ಟ್ ಬುಧವಾರ ಹೇಳಿದೆ.

ಪೆಗಾಸಸ್‌ ಹಗರಣ: ಆರಂಭದಿಂದ ಈವರೆಗೆ ಏನೇನಾಗಿದೆ? ಟೈಮ್‌ಲೈನ್‌ಪೆಗಾಸಸ್‌ ಹಗರಣ: ಆರಂಭದಿಂದ ಈವರೆಗೆ ಏನೇನಾಗಿದೆ? ಟೈಮ್‌ಲೈನ್‌

ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ತನಿಖೆ ನಡೆಸಿ 8 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್‌ವಿ ರವೀಂದ್ರನ್ ನೇತೃತ್ವದ ತಜ್ಞರ ಸಮಿತಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

Supreme Court appoints expert committee under a retired SC judge to probe Pegasus Row

ಅರ್ಜಿ ವಿಚಾರಣೆಗೆ ಒಪ್ಪಿಗೆ ಸೂಚಿಸಿದ್ದ ಸುಪ್ರೀಂಕೋರ್ಟ್:

ಕಳೆದ ಜುಲೈ 30ರಂದು ನಡೆದ ವಿಚಾರಣೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು ಪ್ರಕರಣದಲ್ಲಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರ ಪ್ರಸ್ತಾಪವನ್ನು ಗಮನಿಸಿತು. ಅರ್ಜಿಯಲ್ಲಿ ಆರೋಪಿಸಿದಂತೆ ದೊಡ್ಡ ಮಟ್ಟದ ಬೇಹುಗಾರಿಕೆ ನಡೆದಿದೆಯೇ ಎಂಬುದನ್ನು ಆಲಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಒಪ್ಪಿಕೊಂಡಿತ್ತು.

ಪತ್ರಕರ್ತ ಸಲ್ಲಿಸಿದ ಪಿಐಎಲ್ ನಲ್ಲಿ ಏನಿದೆ?

ಹಿರಿಯ ಪತ್ರಕರ್ತರಾದ ಎನ್ ರಾಮ್ ಮತ್ತು ಶಶಿಕುಮಾರ್ ಸೇರಿದಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಅರ್ಜಿಗಳಲ್ಲಿ ಬೇಹುಗಾರಿಕೆಗೆ ತೀವ್ರ ವಿರೋಧ ವ್ಕಕ್ತಪಡಿಸಲಾಗಿತ್ತು. ಕೇಂದ್ರ ಸರ್ಕಾರವು ಬೇಹುಗಾರಿಕೆ ಮೂಲಕ ಭಾರತದಲ್ಲಿನ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮುಚ್ಚಿ ಹಾಕಲು ಹೊರಟಿದೆ ಎಂದು ದೂಷಿಸಲಾಗಿತ್ತು.

ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ಆರೋಪ:

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದ್ದ ಬೇಹುಗಾರಿಕೆ ಹಗರಣ:

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿತ್ತು.

English summary
Supreme Court directs the expert committee headed by former Supreme Court judge Justice R.V. Raveendran to expeditiously probe the Pegasus allegations and file a report within 8 weeks.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X