ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ರೋಗಿಗಳಿಗೆ ಚಿಕಿತ್ಸೆ: ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ

|
Google Oneindia Kannada News

ನವದೆಹಲಿ, ಮೇ 28: ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂಕೋರ್ಟ್‌ ಕೋವಿಡ್ 19 ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

Recommended Video

ಆರ್ಥಿಕ ಸುನಾಮಿ ದೇಶವನ್ನು ಸಂಕಷ್ಟಕ್ಕೆ ದೂಡಿದೆ ಎಂದ ಡಿಕೆಶಿ | DK Shivakumar | Oneindia Kannada

ದೇಶದಲ್ಲಿ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡುವ ಖಾಸಗಿ ಆಸ್ಪತ್ರೆಗಳ ಪಟ್ಟಿ ನೀಡಿ ಎಂದು ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರಕ್ಕೆ ನಿರ್ದೇಶನ ಕೊಟ್ಟಿದೆ.

ಜೂಮ್ ವಿಡಿಯೋ ಕಾಲಿಂಗ್ ಬಂದ್ ಆಗುವ ಸಮಯ ಹತ್ತಿರಜೂಮ್ ವಿಡಿಯೋ ಕಾಲಿಂಗ್ ಬಂದ್ ಆಗುವ ಸಮಯ ಹತ್ತಿರ

ವಕೀಲ ಸಚಿವನ್ ಜೈನ್ ಎನ್ನುವವರು, ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ರೋಗಿಗಳಿಗೆ ಉಚಿತ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

Supreme Court Asks To Center About List Of Private Covid 19 Hospitals

ಬುಧವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ನೇತೃತ್ವದ ತ್ರಿ ಸದಸ್ಯ ಪೀಠ, ಕೋವಿಡ್ 19 ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಏನು ಕ್ರಮ ಕೈಗೊಳ್ಳಲಾಗಿದೆ, ಎಲ್ಲೆಲ್ಲಿ ಚಿಕಿತ್ಸೆ ಲಭ್ಯವಿದೆ ಎಂಬ ಮಾಹಿತಿ ನೀಡಲು ನಿರ್ದೇಶನ ನೀಡಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹೆಚ್ಚಿನ ದರ ವಿಧಿಸಲಾಗುತ್ತಿದೆ ಮತ್ತು ಹಲವು ವಿಮಾ ಕಂಪೆನಿಗಳು ಕೋವಿಡ್‌ಗೆ ವಿಮೆ ಅನ್ವಯವಾಗುವುದಿಲ್ಲ ಎಂದು ಹೇಳುತ್ತಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿತ್ತು. (ಮೂಲ: ಹಿಂದೂಸ್ತಾನ್ ಟೈಮ್ಸ್).

English summary
Supreme Court Ask To Center About List Of Private Covid19 Hospitals. Advocate Sachin Jain Submited the PIL In Supreme Court .
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X