ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ವಿಚಾರಣೆ ಜ.29 ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

|
Google Oneindia Kannada News

ನವದೆಹಲಿ, ಜನವರಿ 10: ಬಹುವಿವಾದಿತ ಅಯೋಧ್ಯಾ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಜ.29 ಕ್ಕೆ ಮುಂದೂಡಿದೆ.

ಮುಖ್ಯನ್ಯಾಯ ಮೂರ್ತಿ ರಂಜನ್ ಗೊಗೊಯ್ ನೇತೃತ್ವದ ಸುಪ್ರೀಂ ಕೋರ್ಟ್ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ ಇಂದು(ಜನವರಿ 10) ಸುಪ್ರೀಂ ಕೋರ್ಟಿನಲ್ಲಿ ಅಯೋಧ್ಯೆ ವಿಚಾರಣೆಯನ್ನು ನಡೆಸಬೇಕಿತ್ತು.

ಅಯೋಧ್ಯೆ ವಿವಾದ: ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್ಅಯೋಧ್ಯೆ ವಿವಾದ: ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಎ.ಬೋಬಡೆ, ಎನ್.ವಿ.ರಮಣ, ಯು.ಯು.ಲಲಿತ್ ಹಾಗೂ ಡಿ.ವೈ.ಚಂದ್ರಚೂಡ್ ಅವರನ್ನೊಳಗೊಂಡ ಪಂಚಸದಸ್ಯರ ಪೀಠವನ್ನು ಜ. 8 ರಂದು ರಚಿಸಲಾಗಿತ್ತು.

Supreme Court: Ayodhya hearing differed to Jan 29th

ಆದರೆ ನ್ಯಾ.ಯು ಯು ಲಲಿತ್ ಅವರು ಪೀಠದಿಂದ ಹಿಂದೆ ಸರಿದ ಪರಿಣಾಮ ಹೊಸಪೀಠ ರಚಿಸಬೇಕಿದೆ ಎಂದು ಸಿಜೆಐ ರಂಜನ್ ಗೊಗೊಯ್ ತಿಳಿಸಿದ್ದಾರೆ. ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪರವಾಗಿ ಮೊದಲೊಮ್ಮೆ ಯು ಯು ಲಲಿತ್ ವಾದ ಮಂಡಿಸಿದ್ದರು. ಆದ್ದರಿಂದ ಅದೇ ಪ್ರಕರಣದಲ್ಲಿ ಈಗ ವಿಚಾರಣೆ ನಡೆಸುವುದು ಕಷ್ಟ ಎಂದು ಅವರೇ ಪೀಠದಿಂದ ಹಿಂದೆ ಸರಿದಿದ್ದಾರೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

ಈ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದ್ದು, ಜ.4 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಜ.10 ಕ್ಕೆ ಮುಂದೂಡಿತ್ತು.

ಐವರು ನ್ಯಾಯಮೂರ್ತಿಗಳ ಪೀಠದಿಂದ ಜ. 10ಕ್ಕೆ ಅಯೋಧ್ಯಾ ಪ್ರಕರಣ ವಿಚಾರಣೆ ಐವರು ನ್ಯಾಯಮೂರ್ತಿಗಳ ಪೀಠದಿಂದ ಜ. 10ಕ್ಕೆ ಅಯೋಧ್ಯಾ ಪ್ರಕರಣ ವಿಚಾರಣೆ

ಈ ಅರ್ಜಿಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂಬ ಮನವಿಗೆ ಪ್ರತಿಕ್ರಿಯೆ ನೀಡಿದ್ದ ಸುಪ್ರೀಂ ಕೋರ್ಟ್, "ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ತನಗೆ ಗೊತ್ತು" ಎಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು.

ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

English summary
A Constitution Bench of the Supreme Court, head by Chief Justice of India Ranjan Gogoi, today adjourned the hearing on a case to decide the dates for the hearing of the Ayodhya temple-mosque case. The hearing was adjourned to January 29.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X