ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2021ನೇ ಸಾಲಿನ ನೀಟ್ ಫಲಿತಾಂಶ ಪ್ರಕಟಿಸಲು ಅನುಮತಿ ನೀಡಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಅಕ್ಟೋಬರ್ 28: ಪ್ರಸಕ್ತ ಸಾಲಿನ ನೀಟ್ ಫಲಿತಾಂಶ ಪ್ರಕಟಿಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.

ದೇಶಾದ್ಯಂತ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ 2021ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್)ಯ ಫಲಿತಾಂಶ ಪ್ರಕಟಿಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‌ಟಿಎ)ಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ನೀಟ್ ಪಿಜಿ ಕೌನ್ಸೆಲಿಂಗ್‌ ತಡೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆನೀಟ್ ಪಿಜಿ ಕೌನ್ಸೆಲಿಂಗ್‌ ತಡೆಗೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚನೆ

"ನಾವು ಹೈಕೋರ್ಟ್ ತೀರ್ಪಿಗೆ ತಡೆ ನೀಡುತ್ತೇವೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಫಲಿತಾಂಶವನ್ನು ಪ್ರಕಟಿಸಬಹುದು" ಎಂದು ಎನ್‌ಟಿಎ ಪರವಾಗಿ ವಾದಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸುಪ್ರೀಂ ಪೀಠ ತಿಳಿಸಿದೆ.

Supreme Court Clears The Way For Declaration Of NEET-UG Results

ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಸಂಜೀವ್ ಖನ್ನಾ ಮತ್ತು ಬಿಆರ್ ಗವಾಯಿ ಅವರನ್ನೊಳಗೊಂಡ ಸುಪ್ರೀಂ ಪೀಠ, ಎನ್‌ಟಿಎಗೆ ನೀಟ್ ಫಲಿತಾಂಶ ಪ್ರಕಟಿಸದಂತೆ ಮತ್ತು ಪರೀಕ್ಷಾ ಕೇಂದ್ರದಲ್ಲಿ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್ ಶೀಟ್‌ಗಳು ಮಿಶ್ರಣಗೊಂಡ ಇಬ್ಬರು ಆಕಾಂಕ್ಷಿಗಳಿಗೆ ಮರು ಪರೀಕ್ಷೆ ನಡೆಸುವಂತೆ ಬಾಂಬೆ ಹೈಕೋರ್ಟ್‌ ಇತ್ತೀಚಿಗೆ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ.

ಮಹಾರಾಷ್ಟ್ರದ ಇಬ್ಬರು ಪರೀಕ್ಷಾರ್ಥಿಗಳಾದ ವೈಶಾನವಿ ಭೋಪಾಲಿ ಮತ್ತು ಅಭಿಷೇಕ್ ಶಿವಾಜಿ ಅವರ ಪ್ರಶ್ನೆ ಪತ್ರಿಕೆಗಳು ಮತ್ತು ಒಎಂಆರ್‌ ಪ್ರತಿಗಳು ಪರೀಕ್ಷೆಗೂ ಮುನ್ನಾ ಪರೀಕ್ಷಾ ಕೇಂದ್ರದಲ್ಲಿ ಬೆರೆತು ಹೋಗಿದ್ದವು. ಹೀಗಾಗಿ ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಕು. ಈ ಇಬ್ಬರ ಪರೀಕ್ಷಾ ಫಲಿತಾಂಶವನ್ನು ಸೆಪ್ಟೆಂಬರ್‌ 12ರಂದು ನಡೆಸಿದ ಪರೀಕ್ಷೆಯ ಫಲಿತಾಂಶದ ಜತೆಗೇ ಪ್ರಕಟಿಸಬೇಕು ಎಂದು ಹೈಕೋರ್ಟ್‌ ಆದೇಶಿಸಿತ್ತು.

ದೀಪಾವಳಿ ರಜೆಯ ನಂತರ ಈ ಇಬ್ಬರು ವಿದ್ಯಾರ್ಥಿಗಳ ಬಗ್ಗೆ ತೀರ್ಮಾನಿಸುತ್ತೇವೆ. ಅಷ್ಟರಲ್ಲಿ ಈ ಕುರಿತು ಸಂಬಂಧಿಸಿದವರಿಗೆ ಪ್ರತಿಕ್ರಿಯಿಸಲು ನೋಟಿಸ್‌ ಜಾರಿ ಮಾಡುತ್ತೇವೆ. ಈ ಇಬ್ಬರಿಗಾಗಿ ನಾವು 16 ಲಕ್ಷ ವಿದ್ಯಾರ್ಥಿಗಳ ಫಲಿತಾಂಶವನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನೀಟ್ ಪಿಜಿ ಕೌನ್ಸೆಲಿಂಗ್‌ಗೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿತ್ತು. ಒಬಿಸಿ, ಇಡಬ್ಲ್ಯೂಸಿ ಮೀಸಲು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಮುಗಿಯುವವರೆಗೂ ನೀಟ್ ಸ್ನಾತಕೋತ್ತರ ಕೋರ್ಸ್‌ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ತಡೆಹಿಡಿಯಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

ಇಡಬ್ಲ್ಯೂಎಸ್ ಕೋಟಾ ಸೀಟು ಪಡೆಯಲು ಕೇಂದ್ರ ಸರ್ಕಾರದಿಂದ ಆದಾಯ ಮಿತಿ ನಿಗದಿ ಮಾಡಲಾಗಿದ್ದು, ವಾರ್ಷಿಕ 8 ಲಕ್ಷ ರೂ. ಆದಾಯ ಮಿತಿ ನಿಗದಿಯಾಗಿದೆ. ಈ 8 ಲಕ್ಷ ಆದಾಯ ಮಿತಿ ನಿಗದಿಯನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಎಂಡಿಎಸ್ ಕೋರ್ಸ್​ಗಳಿಗೆ ನಡೆಸಬೇಕಾಗಿದ್ದ ಕೌನ್ಸಿಲಿಂಗ್​ಗೆ ತಾತ್ಕಾಲಿಕ ತಡೆ ನೀಡಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿತ್ತು.

ನೀಟ್ ಪಿಜಿ ಫಲಿತಾಂಶವನ್ನು ಈ ಮೊದಲು ಸೆಪ್ಟೆಂಬರ್ 28ರಂದು ಘೋಷಿಸಲಾಯಿತು. ಅಕ್ಟೋಬರ್ 9ರಂದು ನೀಟ್ ಪರೀಕ್ಷೆಯ ಸ್ಕೋರ್ ಕಾರ್ಡ್ ಬಿಡುಗಡೆ ಮಾಡಲಾಗಿತ್ತು. ನೀಟ್ ಪರೀಕ್ಷೆಯನ್ನು ಈ ಬಾರಿ ಇಂಗ್ಲಿಷ್ ಸೇರಿದಂತೆ 10 ಇತರ ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗಿದೆ. ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಕನ್ನಡ, ಮರಾಠಿ, ಒಡಿಯಾ, ತಮಿಳು, ತೆಲುಗು ಮತ್ತು ಉರ್ದು ಭಾಷೆಯಲ್ಲಿ ಪರೀಕ್ಷೆ ನಡೆದಿದೆ.

ನೀಟ್ 2021 ಅರ್ಜಿ ನಮೂನೆಯಲ್ಲಿನ ಪ್ರಕ್ರಿಯೆಯು ಐದು ಹಂತಗಳನ್ನು ಒಳಗೊಂಡಿದೆ. ಅದರಲ್ಲಿ ಪ್ರಮುಖವಾಗಿ, ನೀಟ್ ನೋಂದಣಿ; ಅರ್ಜಿಯನ್ನು ಭರ್ತಿ ಮಾಡುವುದು; ಸ್ಕ್ಯಾನ್ ಮಾಡಿದ ಫೋಟೋ, ಮಾರ್ಕ್‌ಶೀಟ್‌ಗಳು ಮತ್ತು ಪ್ರಮಾಣಪತ್ರಗಳು ಸೇರಿದಂತೆ ದಾಖಲೆಗಳ ಅಪ್‌ಲೋಡ್ ಮಾಡುವುದು ; ಶುಲ್ಕ ಪಾವತಿ ಮತ್ತು ದೃಢೀಕರಣ ಪುಟದ ಪ್ರಿಂಟ್ ಔಟ್ ತೆಗೆದುಕೊಳ್ಳುವುದು ಇದರಲ್ಲಿ ಒಳಗೊಂಡಿರುತ್ತದೆ.

English summary
Supreme Court stays Bombay HC decision to conduct fresh exams for two aspirants who said that they were handed question papers and answer sheets with different serial numbers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X