ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯೆ ವಿವಾದ: ವಿಚಾರಣೆಯನ್ನು ಜ.10ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

|
Google Oneindia Kannada News

ನವದೆಹಲಿ, ಜನವರಿ 04: ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಜನವರಿ 10 ಕ್ಕೆ ಮುಂದೂಡಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾ. ಎಸ್ ಕೆ ಕೌಲ್ ಅವರಿರುವ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಬೇಕಿತ್ತು. ಕಳೆದ ಅಕ್ಟೋಬರ್ ನಲ್ಲೇ ತ್ವರಿತವಾಗಿ ವಿಚಾರಣೆ ನಡೆಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ1859ರಿಂದಲೂ ಬಗೆಹರಿಯದ ರಾಮಜನ್ಮ ಭೂಮಿ ವಿವಾದ

ಆದರೆ ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ನ್ಯಾಯಾಲಯಕ್ಕೆ ಗೊತ್ತು ಎಂದಿದ್ದ ಸುಪ್ರೀಂ ಕೋರ್ಟ್ ಜನವರಿ 4 ರಿಂದ ವಿಚಾರಣೆ ಮಾಡುವುದಾಗಿ ಹೇಳಿತ್ತು. ಆದರೆ ಮತ್ತೆ ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದೆ.

Supreme Court defers Ayodhya case to Jan 10

ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.

English summary
Supreme Court defers Ayodhya case to Jan 10
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X