ಬೆಂಗಳೂರಿನಲ್ಲಿ ಅಕ್ರಮ ಸಕ್ರಮ: ತಡೆಯಾಜ್ಞೆ ತೆರವಿಗೆ ಸುಪ್ರೀಂ ನಕಾರ
ನವದೆಹಲಿ, ಜನವರಿ 29: ಬೆಂಗಳೂರು ಅಕ್ರಮ ಸಕ್ರಮಕ್ಕೆ ಸಂಬಂಧಿಸಿದಂತೆ ತಾನು ನೀಡಿದ್ದ ತಡೆ ತೆರವುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಬಹುದಿನಗಳಿಂದ ನೆನಗುದಿಗೆ ಬಿದ್ದಿರುವ ಬೆಂಗಳೂರಿನ ಅಕ್ರಮ-ಸಕ್ರಮ ಪ್ರಕರಣದ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಕೊನೆಗೂ ಸಕಾರಾತ್ಮಕವಾಗಿ ಸ್ಪಂದಿಸಿದೆ. ನಿಗದಿಯಾಗಿರುವಂತೆ ಮಾರ್ಚ್ 31ಕ್ಕೆ ವಿಚಾರಣೆ ನಡೆಸುಉದಾಗಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿರುವ ಪೀಠ ತಿಳಿಸಿದೆ. ಸುಪ್ರೀಂಕೋರ್ಟ್ ರಾಜ್ಯದಲ್ಲಿನ ಕಟ್ಟಡಗಳ ಅಕ್ರಮ ಸಕ್ರಮ ಮಾಡಲು ಮುಂದಾಗಿತ್ತು. ಆದರೆ ಇದನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು.
ಬೆಂಗಳೂರಿನಲ್ಲಿರುವ ಕಟ್ಟಡಗಳಲ್ಲಿನ ಅಕ್ರಮವನ್ನು ಸಕ್ರಮ ಮಾಡಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಮ್ಮ ಬೆಂಗಳೂರು ಫೌಂಡೇಶನ್ ಮೇಲ್ಮನವಿ ಸಲ್ಲಿಸಿತ್ತು. ಆದರೆ ಪ್ರಕರಣದ ವಿಚಾರಣೆ ವಿಳಂಬವಾಗಿತ್ತು. ಹೀಗಾಗಿ ಬಿಬಿಎಂಪಿ ಪ್ರಕರಣದ ಶೀಘ್ರ ವಿಚಾರಣೆಗೆ ಮನವಿ ಮಾಡಿತ್ತು. ಇದಕ್ಕೆ ಒಪ್ಪಿದ ಸುಪ್ರೀಂಕೋರ್ಟ್ ಶೀಘ್ರ ವಿಚಾರಣೆಗೆ ಮುಂದಾಗಿದೆ.

ಕರ್ನಾಟಕ ಟೌನ್ ಮತ್ತು ಕಂಟ್ರಿ ಪ್ಲಾನಿಂಗ್ ಕಾಯ್ದೆಗೆ ತಿದ್ದುಪಡಿ ಕಟ್ಟಡ ನಿರ್ಮಾಣದಲ್ಲಿನ ಶೇ.50 ರಷ್ಟು ಅಕ್ರಮವನ್ನು ಸಕ್ರಮಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ನಮ್ಮ ಬೆಂಗಳೂರು ಪ್ರತಿಷ್ಠಾನ ಕೋರಿಕೆಯಂತೆ ರಾಜ್ಯ ಹೈಕೋರ್ಟ್ ಆದೇಶಕ್ಕೆ ಕಳೆದ ವರ್ಷದ ಜನವರಿಯಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು.
ನಮ್ಮ ಬೆಂಗಳೂರು ಪ್ರತಿಷ್ಠಾನದ ಅರ್ಜಿಯನ್ನು ಮನ್ನಿಸಿ ಸುಪ್ರೀಂ ಕೋರ್ಟ್ ಅಕ್ರಮ ಸಕ್ರಮಕ್ಕೆ ಮಧ್ಯಂತರ ತಡೆ ನೀಡಿತ್ತು. ಈ ತಡೆಯನ್ನು ತೆರವು ಮಾಡಬೇಕು ಅಥವಾ ತಿದ್ದುಪಡಿ ಮಾಡಬೇಕು ಎಂದು ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿತ್ತು. ಆದರೆ ಇದನ್ನು ನಮ್ಮ ಬೆಂಗಳೂರು ಪ್ರತಿಷ್ಠಾನ ಬಲವಾಗಿ ವಿರೋಧಿಸಿದೆ. ಇದೀಗ ಈಗಾಗಲೇ ನಿಗದಿಯಾದಂತೆ ಮಾರ್ಚ್ 21ಕ್ಕೆ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.












Click it and Unblock the Notifications