ಸಿಬಿಐ ವಿವಾದ: 10 ದಿನಗಳಲ್ಲಿ ವರದಿ ಸಲ್ಲಿಸಲು ಸಿವಿಸಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿರುವ
ಕೇಂದ್ರ ಸರ್ಕಾರದ ಕ್ರಮಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.
ತಮ್ಮನ್ನು ಕಡ್ಡಾಯ ರಜೆಯ ಮೇಲೆ ತೆರಳುವಂತೆ ನೀಡಿರುವ ಸೂಚನೆಯನ್ನು ರದ್ದುಗೊಳಿಸುವಂತೆ ಮತ್ತು ಹಂಗಾಮಿ ನಿರ್ದೇಶಕರಾಗಿ ನಾಗೇಶ್ವರ್ ರಾವ್ ಅವರನ್ನು ನೇಮಿಸಿರುವುದಕ್ಕೆ ತಡೆ ನೀಡುವಂತೆ ಕೋರಿ ಅಲೋಕ್ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸಿವಿಸಿ ತನಿಖೆ ನಡೆಸಿ ನವೆಂಬರ್ 12ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿದೆ.
ಈ ಸಂಬಂಧ ಕೇಂದ್ರ ಸರ್ಕಾರ, ಸಿವಿಸಿ ಮತ್ತು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 12ಕ್ಕೆ ನಿಗದಿಪಡಿಸಲಾಗಿದೆ.

14 ದಿನಗಳಲ್ಲಿ ವರದಿ
ಅಲೋಕ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ಇಂದಿನಿಂದ ಎರಡು ವಾರಗಳಲ್ಲಿ ವರದಿ ನೀಡಬೇಕು ಎಂದು ತಿಳಿಸಿದೆ.
ಸಿವಿಸಿ ಪರ ವಕೀಲರು ಮೂರು ವಾರ ಕಾಲಾವಕಾಶ ಕೇಳಿದರು. ದೇಶದ ಹಿತದೃಷ್ಟಿಯಿಂದ ಸಮಯ ನೀಡಲು ಆಗುವುದಿಲ್ಲ. ಈ ಪ್ರಕರಣವನ್ನು ಹೆಚ್ಚು ಸಮಯ ಎಳೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.

ನಿರ್ಧಾರ ತೆಗೆದುಕೊಳ್ಳುವಂತಿಲ್ಲ
ಸಿಬಿಐ ಹಂಗಾಮಿ ನಿರ್ದೇಶಕರಾಗಿ ನೇಮಕವಾಗಿರುವ ನಾಗೇಶ್ವರ್ ರಾವ್ ಸಿಬಿಐಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಅವರು ದೈನಂದಿನ ಕೆಲಸಗಳಲ್ಲಿ ಮಾತ್ರ ಭಾಗಿಯಾಗಬಹುದು. ಅಲ್ಲದೆ, ಅವರು ನೇಮಕವಾದ ಮಧ್ಯರಾತ್ರಿಯ ಸಮಯದಿಂದ ತೆಗೆದುಕೊಂಡ ನಿರ್ಧಾರಗಳ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠ ಹೇಳಿದೆ.
|
ಫಾಲಿ ನಾರಿಮನ್ ವಾದ
ಅಲೋಕ್ ವರ್ಮಾ ಪರ ವಾದ ಮಂಡಿಸಿದ ಫಾಲಿ ಎಸ್ ನಾರಿಮನ್, ಕಡ್ಡಾಯ ರಜೆ ನೀಡಿರುವ ಕ್ರಮವನ್ನು ವಿರೋಧಿಸಿದರು. ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರ ನೇಮಕವಾಗುತ್ತದೆ. ಅವಧಿ ಮುಗಿಯುವ ಒಳಗೇ ಅವರನ್ನು ತೆಗೆದಿದ್ದು ಏಕೆ ಎಂದು ಪ್ರಶ್ನಿಸಿದರು.

ರಾಕೇಶ್ ಅಸ್ಥಾನಾ ಅರ್ಜಿ
ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರೂ ತಮ್ಮನ್ನು ಸರ್ಕಾರ ಲಂಚ ಪ್ರಕರಣದ ಆರೋಪದಲ್ಲಿ ಕಡ್ಡಾಯ ರಜೆಯ ಮೇರೆಗೆ ಕಳುಹಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಕೇಶ್ ಅಸ್ಥಾನಾ ಅವರ ಬಗ್ಗೆ ಯಾವುದೇ ಯೋಚನೆ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications