ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಬಿಐ ವಿವಾದ: 10 ದಿನಗಳಲ್ಲಿ ವರದಿ ಸಲ್ಲಿಸಲು ಸಿವಿಸಿಗೆ ಸುಪ್ರೀಂಕೋರ್ಟ್ ಸೂಚನೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿರುವ
ಕೇಂದ್ರ ಸರ್ಕಾರದ ಕ್ರಮಕ್ಕೆ ಸಂಬಂಧಿಸಿದಂತೆ 10 ದಿನಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ತಮ್ಮನ್ನು ಕಡ್ಡಾಯ ರಜೆಯ ಮೇಲೆ ತೆರಳುವಂತೆ ನೀಡಿರುವ ಸೂಚನೆಯನ್ನು ರದ್ದುಗೊಳಿಸುವಂತೆ ಮತ್ತು ಹಂಗಾಮಿ ನಿರ್ದೇಶಕರಾಗಿ ನಾಗೇಶ್ವರ್ ರಾವ್ ಅವರನ್ನು ನೇಮಿಸಿರುವುದಕ್ಕೆ ತಡೆ ನೀಡುವಂತೆ ಕೋರಿ ಅಲೋಕ್ ವರ್ಮಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

 ಮೋದಿಗೆ ಸಂಚಕಾರ ತರಲಿದ್ದ ಕೇಸುಗಳ ತನಿಖೆ ಮಾಡುತ್ತಿದ್ದ ಅಲೋಕ್ ಕುಮಾರ್‌ ಮೋದಿಗೆ ಸಂಚಕಾರ ತರಲಿದ್ದ ಕೇಸುಗಳ ತನಿಖೆ ಮಾಡುತ್ತಿದ್ದ ಅಲೋಕ್ ಕುಮಾರ್‌

ಶುಕ್ರವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿ ಸಿವಿಸಿ ತನಿಖೆ ನಡೆಸಿ ನವೆಂಬರ್ 12ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸೂಚಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ, ಸಿವಿಸಿ ಮತ್ತು ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ 12ಕ್ಕೆ ನಿಗದಿಪಡಿಸಲಾಗಿದೆ.

14 ದಿನಗಳಲ್ಲಿ ವರದಿ

14 ದಿನಗಳಲ್ಲಿ ವರದಿ

ಅಲೋಕ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ಕೆ. ಪಟ್ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿ ಇಂದಿನಿಂದ ಎರಡು ವಾರಗಳಲ್ಲಿ ವರದಿ ನೀಡಬೇಕು ಎಂದು ತಿಳಿಸಿದೆ.

ಸಿವಿಸಿ ಪರ ವಕೀಲರು ಮೂರು ವಾರ ಕಾಲಾವಕಾಶ ಕೇಳಿದರು. ದೇಶದ ಹಿತದೃಷ್ಟಿಯಿಂದ ಸಮಯ ನೀಡಲು ಆಗುವುದಿಲ್ಲ. ಈ ಪ್ರಕರಣವನ್ನು ಹೆಚ್ಚು ಸಮಯ ಎಳೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿತು.

ನಿರ್ಧಾರ ತೆಗೆದುಕೊಳ್ಳುವಂತಿಲ್ಲ

ನಿರ್ಧಾರ ತೆಗೆದುಕೊಳ್ಳುವಂತಿಲ್ಲ

ಸಿಬಿಐ ಹಂಗಾಮಿ ನಿರ್ದೇಶಕರಾಗಿ ನೇಮಕವಾಗಿರುವ ನಾಗೇಶ್ವರ್ ರಾವ್ ಸಿಬಿಐಗೆ ಸಂಬಂಧಿಸಿದಂತೆ ಯಾವುದೇ ನಿರ್ಧಾರ ತೆಗೆದುಕೊಳ್ಳುವಂತಿಲ್ಲ. ಅವರು ದೈನಂದಿನ ಕೆಲಸಗಳಲ್ಲಿ ಮಾತ್ರ ಭಾಗಿಯಾಗಬಹುದು. ಅಲ್ಲದೆ, ಅವರು ನೇಮಕವಾದ ಮಧ್ಯರಾತ್ರಿಯ ಸಮಯದಿಂದ ತೆಗೆದುಕೊಂಡ ನಿರ್ಧಾರಗಳ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾಯಮೂರ್ತಿ ಎಸ್‌ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರನ್ನು ಒಳಗೊಂಡ ತ್ರಿಸದಸ್ಯ ನ್ಯಾಯಪೀಠ ಹೇಳಿದೆ.

ಸಿಬಿಐ ಮುಖ್ಯಸ್ಥ ಅಲೋಕ್ ಮೇಲೆ ಕಣ್ಗಾವಲು ಸುದ್ದಿಗೆ ರೆಕ್ಕೆಪುಕ್ಕ!ಸಿಬಿಐ ಮುಖ್ಯಸ್ಥ ಅಲೋಕ್ ಮೇಲೆ ಕಣ್ಗಾವಲು ಸುದ್ದಿಗೆ ರೆಕ್ಕೆಪುಕ್ಕ!

ಫಾಲಿ ನಾರಿಮನ್ ವಾದ

ಅಲೋಕ್ ವರ್ಮಾ ಪರ ವಾದ ಮಂಡಿಸಿದ ಫಾಲಿ ಎಸ್ ನಾರಿಮನ್, ಕಡ್ಡಾಯ ರಜೆ ನೀಡಿರುವ ಕ್ರಮವನ್ನು ವಿರೋಧಿಸಿದರು. ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರ ನೇಮಕವಾಗುತ್ತದೆ. ಅವಧಿ ಮುಗಿಯುವ ಒಳಗೇ ಅವರನ್ನು ತೆಗೆದಿದ್ದು ಏಕೆ ಎಂದು ಪ್ರಶ್ನಿಸಿದರು.

ರಾಕೇಶ್ ಅಸ್ಥಾನಾ ಅರ್ಜಿ

ರಾಕೇಶ್ ಅಸ್ಥಾನಾ ಅರ್ಜಿ

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರೂ ತಮ್ಮನ್ನು ಸರ್ಕಾರ ಲಂಚ ಪ್ರಕರಣದ ಆರೋಪದಲ್ಲಿ ಕಡ್ಡಾಯ ರಜೆಯ ಮೇರೆಗೆ ಕಳುಹಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಈ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಕೇಶ್ ಅಸ್ಥಾನಾ ಅವರ ಬಗ್ಗೆ ಯಾವುದೇ ಯೋಚನೆ ಮಾಡುವುದಿಲ್ಲ ಎಂದು ನ್ಯಾಯಪೀಠ ಹೇಳಿತು.

ಸಿಬಿಐ ನಿರ್ದೇಶಕರ ಪದಚ್ಯುತಿ ನ್ಯಾಯಸಮ್ಮತವೆ? ಸುಪ್ರೀಂ ವಿಚಾರಣೆಸಿಬಿಐ ನಿರ್ದೇಶಕರ ಪದಚ್ಯುತಿ ನ್ಯಾಯಸಮ್ಮತವೆ? ಸುಪ್ರೀಂ ವಿಚಾರಣೆ

English summary
Supreme Court on Friday directed CVC to probe the case of CBI Director Alok Verma and submit withinreport with in 10 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X