ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಯೋಧ್ಯಾ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಜಾ

|
Google Oneindia Kannada News

ನವದೆಹಲಿ, ಡಿಸೆಂಬರ್ 12: ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್, ಎಸ್‌.ಎ. ನಜೀರ್, ಡಿವೈ ಚಂದ್ರಚೂಡ್ ಮತ್ತು ಸಂಜೀವ್ ಖನ್ನಾ ಅವರನ್ನು ಒಳಗೊಂಡ ಪಂಚ ಸದಸ್ಯರ ಹೊಸ ನ್ಯಾಯಪೀಠ ಗುರುವಾರ ಈ ಅರ್ಜಿಗಳನ್ನು ತಿರಸ್ಕರಿಸಿತು.

ಸುಪ್ರೀಂಕೋರ್ಟ್‌ನಲ್ಲಿ ಇಂದು ಮತ್ತೆ ಅಯೋಧ್ಯೆ ವಿಚಾರಣೆಸುಪ್ರೀಂಕೋರ್ಟ್‌ನಲ್ಲಿ ಇಂದು ಮತ್ತೆ ಅಯೋಧ್ಯೆ ವಿಚಾರಣೆ

ಮುಖ್ಯ ನ್ಯಾಯಮೂರ್ತಿಯಾಗಿದ್ದ ರಂಜನ್ ಗೊಗೊಯ್ ನಿವೃತ್ತರಾಗುವ ಮೊದಲು ಪಂಚ ಸದಸ್ಯರ ಪೀಠ ಅಯೋಧ್ಯಾ ತೀರ್ಪು ಪ್ರಕಟಿಸಿತ್ತು. ಗೊಗೊಯ್ ಅವರ ಸ್ಥಾನಕ್ಕೆ ಪೀಠಕ್ಕೆ ಹೊಸ ನ್ಯಾಯಮೂರ್ತಿಯಾಗಿ ಸಂಜೀವ್ ಖನ್ನಾ ಸೇರ್ಪಡೆಯಾಗಿದ್ದರು.

 Supreme Court Dismisses All Review Petitions Of Ayodhya Verdict

ಸುದೀರ್ಘ ಕಾಲದಿಂದ ನ್ಯಾಯಾಲಯದಲ್ಲಿ ಇದ್ದ ಅಯೋಧ್ಯಾ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಂತಿಮ ಆದೇಶ ನೀಡಿತ್ತು. ಬಾಬ್ರಿ ಮಸೀದಿ ಇದ್ದ ಜಾಗದಲ್ಲಿ ಮಂದಿರವಿತ್ತು ಎಂದು ಅಭಿಪ್ರಾಯಪಟ್ಟಿದ್ದ ನ್ಯಾಯಾಲಯ, ವಿವಾದಿತ 2.77 ಎಕರೆ ಭೂಮಿಯನ್ನು ಅರ್ಜಿದಾರ ರಾಮ್ ಲಲ್ಲಾ ವಿರಾಜಮಾನ್‌ಗೆ ನೀಡಿ ತೀರ್ಪು ನೀಡಿತ್ತು.

ಮುಸ್ಲೀಮರಿಗೆ ಏಕೆ ಜಮೀನು? ಅಯೋಧ್ಯೆ ತೀರ್ಪು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿಮುಸ್ಲೀಮರಿಗೆ ಏಕೆ ಜಮೀನು? ಅಯೋಧ್ಯೆ ತೀರ್ಪು ಪ್ರಶ್ನಿಸಿ ಹಿಂದೂ ಮಹಾಸಭಾ ಅರ್ಜಿ

ನವೆಂಬರ್ 9ರಂದು ನೀಡಲಾಗಿದ್ದ ತೀರ್ಪು ಪ್ರಶ್ನಿಸಿ ಒಟ್ಟು 18 ಮರುಪರಿಶೀಲನಾ ಅರ್ಜಿಗಳನ್ನು ಸಲ್ಲಿಸಲಾಗಿತ್ತು. ಸುಮಾರು 40 ನಾಗರಿಕ ಕಾರ್ಯಕರ್ತರು ಮೂಲ ಅರ್ಜಿದಾರರು ಅಲ್ಲದಿದ್ದರೂ ಅರ್ಜಿ ಸಲ್ಲಿಸಿದ್ದರು. ಸಂವಿಧಾನಪೀಠದ ಸರ್ವಾನುಮತದ ಆದೇಶವು ಅಸಮರ್ಪಕವಾಗಿದೆ. ಮುಸ್ಲಿಮರ ಭಾವನೆ ಹಾಗೂ ಹಕ್ಕುಗಳನ್ನು ಕಸಿದುಕೊಂಡಿದೆ. ಹೀಗಾಗಿ ಮರುಪರಿಶೀಲನೆ ಮಾಡಬೇಕು ಎಂದು ಅರ್ಜಿ ಸಲ್ಲಿಸಿದ್ದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹಾಗೂ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು.

5 ಎಕರೆ ಭೂಮಿ ನಮಗೆ ಕೊಡಿ, ರಾಮನ ಹೆಸರಲ್ಲಿ ಆಸ್ಪತ್ರೆ ಕಟ್ತೀವಿ: ಶಿಯಾ ಮಂಡಳಿ5 ಎಕರೆ ಭೂಮಿ ನಮಗೆ ಕೊಡಿ, ರಾಮನ ಹೆಸರಲ್ಲಿ ಆಸ್ಪತ್ರೆ ಕಟ್ತೀವಿ: ಶಿಯಾ ಮಂಡಳಿ

ಮುಸ್ಲಿಮರಿಗೆ ಮಸೀದಿ ನಿರ್ಮಾಣಕ್ಕಾಗಿ ಐದು ಎಕರೆ ಜಮೀನು ನೀಡಬೇಕು ಎಂದ ಆದೇಶವನ್ನು ಪ್ರಶ್ನಿಸಿ ಹಿಂದೂ ಸಂಘಟನೆಯೊಂದು ಅರ್ಜಿ ಸಲ್ಲಿಸಿತ್ತು. ಅಯೋಧ್ಯಾ ವಿವಾದದ ಮೂಲ ಅರ್ಜಿದಾರರಲ್ಲಿ ಒಬ್ಬರಾದ ನಿರ್ಮೋಹಿ ಅಖಾರ, ತನ್ನ ಪಾತ್ರದ ಬಗ್ಗೆ ಸ್ಪಷ್ಟನೆ ಕೋರಿತ್ತು.

English summary
The Supreme Court on Thursday dismissed all petitions seeking review of its Ayodhya verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X