ನಿರ್ಭಯಾ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ ಖಾತರಿ

ನವದೆಹಲಿ, ಜನವರಿ 14: ನಿರ್ಭಯಾ ಅತ್ಯಾಚಾರ ಪ್ರಕರಣದ ಇಬ್ಬರು ಅಪರಾಧಿಗಳು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಈ ಮೂಲಕ ಜ.22ರಂದು ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಗಲ್ಲುಶಿಕ್ಷೆ ಜಾರಿಯಾಗುವುದು ಖಾತರಿಯಾಗಿದೆ.

ಅಪರಾಧಿಗಳಾದ ಮುಕೇಶ್ ಸಿಂಗ್ ಮತ್ತು ವಿನಯ್ ಕುಮಾರ್ ಶರ್ಮಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ನ್ಯಾಯಪೀಠ ಅವರ ಮನವಿಯನ್ನು ತಿರಸ್ಕರಿಸಿತು.

ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ, ಅರುಣ್ ಮಿಶ್ರಾ, ಆರ್‌ಎಫ್ ನಾರಿಮನ್, ಆರ್ ಭಾನುಮತಿ ಮತ್ತು ಅಶೋಕ್ ಭೂಷಣ್ ಅವರನ್ನು ಒಳಗೊಂಡ ನ್ಯಾಯಪೀಠ ಮಂಗಳವಾರ ಅಪರಾಧಿಗಳು ತಮ್ಮ ಗಲ್ಲುಶಿಕ್ಷೆ ಜಾರಿ ತೀರ್ಪು ಪ್ರಶ್ನಿಸಿ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು.

Supreme Court Dismisses Curative Plea Of Nirbhaya Gang Rape Case

ಕ್ಯುರೇಟಿವ್ ಅರ್ಜಿಯು ಅಪರಾಧಿಗಳ ಮುಂದೆ ಉಳಿದಿದ್ದ ಏಕೈಕ ಕಾನೂನು ಆಯ್ಕೆಯಾಗಿತ್ತು. ಅದು ಕೂಡ ತಿರಸ್ಕೃತಗೊಂಡಿದೆ. ಪ್ರಕರಣದ ಇನ್ನಿಬ್ಬರು ಅಪರಾಧಿಗಳಾದ ಪವನ್ ಗುಪ್ತಾ ಮತ್ತು ಅಕ್ಷಯ್ ಕುಮಾರ್ ಸಿಂಗ್ ಕ್ಯುರೇಟಿವ್ ಅರ್ಜಿ ಸಲ್ಲಿಸಿರಲಿಲ್ಲ. ಈಗ ಈ ಅಪರಾಧಿಗಳು ಕ್ಷಮಾದಾನಕ್ಕೆ ಕೋರಿ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇದು ಅವರಿಗೆ ನೇಣುಕುಣಿಕೆಯಿಂದ ಪಾರಾಗಲು ಇರುವ ಅಂತಿಮ ಸಾಧ್ಯತೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+