ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ನಬ್ ಗೋಸ್ವಾಮಿ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

|
Google Oneindia Kannada News

ನವದೆಹಲಿ,ನವೆಂಬರ್ 27: ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ವಿಸ್ತರಿಸಿದೆ.

2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರ ಜಾಮೀನು ಅವಧಿಯನ್ನು ವಿಸ್ತರಿಸಿದೆ.

ಎಲ್ಲ ಭಾಷೆಗಳಲ್ಲೂ ಚಾನೆಲ್ ಮಾಡುತ್ತೇನೆ: ಅರ್ನಬ್ ಗೋಸ್ವಾಮಿಎಲ್ಲ ಭಾಷೆಗಳಲ್ಲೂ ಚಾನೆಲ್ ಮಾಡುತ್ತೇನೆ: ಅರ್ನಬ್ ಗೋಸ್ವಾಮಿ

ಅಲ್ಲದೆ ಈ ಪ್ರಕರಣದಲ್ಲಿ ಇತರೆ ಇಬ್ಬರು ಆರೋಪಿಗಳಾದ ನೀತೀಶ್ ಸರ್ದಾ ಮತ್ತು ಫಿರೋಜ್ ಮೊಹಮ್ಮದ್ ಶೇಖ್ ಅವರಿಗೆ ತಲಾ 50,000 ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಉನ್ನತ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು ಮತ್ತು ಅವರು ಸಾಕ್ಷ್ಯಗಳನ್ನು ಹಾಳು ಮಾಡಬಾರದು ಮತ್ತು ತನಿಖೆಗೆ ಸಹಕರಿಸಬೇಕು ಎಂದು ನಿರ್ದೇಶನ ನೀಡಿದೆ.

Supreme Court Extends Republic TV Editor-In-Chief Arnab Goswami’s Interim Bail

ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಅರ್ನಬ್‌ ಮತ್ತು ಇತರ ಇಬ್ಬರು ವ್ಯಕ್ತಿಗಳಿಗೆ ನೀಡಿರುವ ಮಧ್ಯಂತರ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು, ಈ ವೇಳೆ ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು ಹೇಳಿದೆ.

ಆಡಳಿತ ನಡೆಸುವವರಿಂದ ಕ್ರಿಮಿನಲ್‌ ಕಾನೂನುಗಳು ದುರ್ಬಳಕೆ ಆಗದಂತೆ ನ್ಯಾಯಾಂಗ ನೋಡಿಕೊಳ್ಳಬೇಕು. ಜತೆಗೆ ಕ್ರಿಮಿನಲ್ ಕಾನೂನುಗಳು ನಾಗರಿಕರಿಗೆ ಕಿರುಕುಳ ನೀಡುವ ಅಸ್ತ್ರವಾಗಿ ಬಳಕೆಯಾಗಿಲ್ಲ ಎಂಬುದನ್ನು ನ್ಯಾಯಾಂಗ ಖಚಿತಪಡಿಸಿಕೊಳ್ಳಬೇಕು.

ರಾಜ್ಯ ಸರ್ಕಾರವು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ತೋರಿಸಿದ ಪ್ರಜೆಗೆ ಈ ನ್ಯಾಯಾಲಯದ ಬಾಗಿಲುಗಳನ್ನು ಮುಚ್ಚಲಾಗುವುದಿಲ್ಲ ಎಂದು ಪೀಠ ಇದೇ ವೇಳೆ ತಿಳಿಸಿದೆ. ಅಲ್ಲದೆ ಜಾಮೀನು ಅರ್ಜಿಗಳನ್ನು ನಿರ್ವಹಿಸುವಲ್ಲಿನ ವಿಳಂಬದ ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ನ್ಯಾಯಾಲಯಗಳ ಅವಶ್ಯಕತೆಯಿದೆ ಎಂದು ಹೇಳಿದೆ.

ವಾಸ್ತುಶಿಲ್ಪಿ-ಒಳಾಂಗಣ ವಿನ್ಯಾಸಕ ಅನ್ವಯ್ ನಾಯಕ್ ಮತ್ತು ಅವರ ತಾಯಿ 2018 ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ನಬ್ ಮತ್ತು ಇತರರನ್ನು ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ನವೆಂಬರ್ 4 ರಂದು ಅಲಿಬಾಗ್ ಪೊಲೀಸರು ಬಂಧಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ.11ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ವೈಯಕ್ತಿಕ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿದರೆ ಅದು 'ನ್ಯಾಯದ ವಿಡಂಬನೆ ಆಗುತ್ತದೆ ಎಂದು ಹೇಳಿ ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ನೀಡಿತ್ತು.

English summary
The Supreme Court on Friday said the interim bail to journalist Arnab Goswami and two others in an abetment to suicide case will continue till the Bombay High Court disposes of their plea, and stated that the judiciary should ensure criminal law does not become a weapon for selective harassment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X