ಅಯೋಧ್ಯಾ ವಿವಾದ: ಸುಪ್ರೀಂ ಕೋರ್ಟಿನಲ್ಲಿಂದು ವಿಚಾರಣೆ
ನವದೆಹಲಿ, ಜನವರಿ 10: ಬಹುವಿವಾದಿತ ಅಯೋಧ್ಯಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣವನ್ನು ಐವರು ನ್ಯಾಯಮೂರ್ತಿಗಳ ನ್ಯಾಯಪೀಠ ಇಂದು(ಜನವರಿ 10) ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಸಲಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಎ.ಬೋಬಡೆ, ಎನ್.ವಿ.ರಮಣ, ಯು.ಯು.ಲಲಿತ್ ಹಾಗೂ ಡಿ.ವೈ.ಚಂದ್ರಚೂಡ್ ಈ ಪೀಠದಲ್ಲಿ ಇರಲಿದ್ದಾರೆ.
ಈ ವಿವಾದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದ್ದು, ಜ.4 ರಂದು ನಡೆಯಬೇಕಿದ್ದ ವಿಚಾರಣೆಯನ್ನು ಜ.10 ಕ್ಕೆ ಮುಂದೂಡಿತ್ತು.

ಈ ಅರ್ಜಿಗಳ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂಬ ಮನವಿಗೆ ಪ್ರತಿಕ್ರಿಯೆ ನೀಡಿದ್ದ ಸುಪ್ರೀಂ ಕೋರ್ಟ್, "ಯಾವ ಪ್ರಕರಣಕ್ಕೆ ಎಷ್ಟು ಮಹತ್ವ ನೀಡಬೇಕು ಎಂಬುದು ತನಗೆ ಗೊತ್ತು" ಎಂದು ಪ್ರಕರಣದ ವಿಚಾರಣೆಯನ್ನು ಮುಂದೂಡಿತ್ತು.
ರಾಮ ಮಂದಿರ ನಿರ್ಮಾಣಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಕೇಳಿ ಬಂದಿದೆ. ಸಂಘ ಪರಿವಾರ, ಹಿಂದೂ ಸಂಘಟನೆಗಳು ಸುಗ್ರೀವಾಜ್ಞೆ ಅಥವಾ ಕಾನೂನನ್ನು ಜಾರಿಗೆ ಒತ್ತಾಯಿಸಿವೆ.
2.77 ಎಕರೆ ವಿಸ್ತೀರ್ಣದ ಭೂಮಿಯನ್ನು ಸದ್ಯಕ್ಕೆ ಸುನ್ನಿ ವಕ್ಫ್ ಬೋರ್ಡ್, ನಿರ್ಮೋಹಿ ಅಖಾರ ಹಾಗು ರಾಮ್ ಲಲ್ಲಾ ಸಮಾನಾಗಿ ಹೊಂದಿವೆ.












Click it and Unblock the Notifications