ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ನಲ್ಲಿ ಅಯೋಧ್ಯೆ ಆಯ್ತು... ಮುಂದಿನದು ಶಬರಿಮಲೆ!

|
Google Oneindia Kannada News

ನವದೆಹಲಿ, ನವೆಂಬರ್ 11: ಸುಪ್ರೀಂ ಕೋರ್ಟ್ ನಲ್ಲಿ ಅಯೋಧ್ಯೆ ವಿವಾದದ ಕುರಿತು ಪ್ರಕಟಗೊಂಡ ಐತಿಹಾಸಿಕ ತೀರ್ಪಿನ ನಂತರ ಇದೀಗ ಶಬರಿಮಮೆ ಕುರಿತ ತೀರ್ಪು ನೀಡಲು ಸುಪ್ರೀಂ ಕೋರ್ಟ್ ಸಿದ್ಧಗೊಂಡಿದೆ.

ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ನವೆಂಬರ್ 17 ರಂದಿ ನಿವೃತ್ತರಾಗಲಿದ್ದು, ಅದಕ್ಕೂ ಮುನ್ನ ನೀಡಬೇಕಿರುವ ಮಹತ್ವದ ತೀರ್ಪುಗಳಲ್ಲಿ ಶಬರಿಮಲೆಯೂ ಸೇರಿದೆ.

ನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿರುವ ಐತಿಹಾಸಿಕ ತೀರ್ಪುಗಳುನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿರುವ ಐತಿಹಾಸಿಕ ತೀರ್ಪುಗಳು

ರಂಜನ್ ಗೊಗೊಯ್ ಅವರ ನಿವೃತ್ತಿ ನಂತರ ಶರದ್ ಅರವಿಂದ್ ಬೊಬ್ಡೆ ಅವರು ಸುಪ್ರೀಂ ಕೋರ್ಟ್ ನ ಮುಂದಿನ ಮುಖ್ಯ ನ್ಯಾಯಮೂರ್ತಿ ಎಂದು ಈಗಾಗಲೇ ಘೋಷಿಸಲಾಗಿದೆ. ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಹೇರಿದ್ದ ನಿಷೇಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಬೇಕಿದೆ.

Supreme Court is all set For Sabarimala Verdict

ದೇವಸ್ಥಾನದ ಆಡಳಿತ ಮಂಡಳಿಯ ನಿಯಮಾವಳಿ ಪ್ರಕಾರ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರು ದೇವಸ್ಥಾನದ ಆವರಣಕ್ಕೆ ಭೇಟಿ ನೀಡಲು ಅವಕಾಶವಿರಲಿಲ್ಲ. ಋತುಮತಿಯಾಗುವ ವಯಸ್ಸಿನ ಹೆಣ್ಣುಮಕ್ಕಳು ದೇವಾಲಯದ ಆವರಣಕ್ಕೆ ಪ್ರವೇಶಿಸಿದರೆ ಮಂದಿರದ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬುದು ದೇವಾಲಯದ ಆಡಳಿತ ಮಂಡಳಿಯ ವಾದವಾಗಿತ್ತು. ಆದರೆ 2018 ರ ಸೆಪ್ಟೆಂಬರ್ ನಲ್ಲಿ ಈ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.

English summary
After Historical Verdict On Ayodhya Issue, Supreme Court is all set For Sabarimala Verdict,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X