ನಾಗರಿಕ ಸೇವಾ ಪರೀಕ್ಷೆ: ಕೇಂದ್ರ ಸರ್ಕಾರ, ಯುಪಿಎಸ್ಸಿಗೆ ಸುಪ್ರೀಂಕೋರ್ಟ್ ನೋಟಿಸ್
ನವದೆಹಲಿ, ಸೆಪ್ಟೆಂಬರ್ 24: ನಾಗರಿಕ ಸೇವೆಗಳ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗಕ್ಕೆ ಸುಪ್ರೀಂಕೋರ್ಟ್ ಗುರುವಾರ ನೋಟಿಸ್ ನೀಡಿದೆ.
ಕೊರೊನಾ ವೈರಸ್ ಸೋಂಕು ತೀವ್ರವಾಗುತ್ತಿರುವ ಹಾಗೂ ದೇಶದ ಅನೇಕ ಕಡೆ ವಿಪರೀತ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಿದರೆ ಅಭ್ಯರ್ಥಿಗಳಿಗೆ ಬಹಳ ಕಷ್ಟವಾಗುತ್ತದೆ. ಹೀಗಾಗಿ ಎರಡು ಮೂರು ತಿಂಗಳ ಮಟ್ಟಿಗೆ ಪರೀಕ್ಷೆಗಳನ್ನು ಮುಂದೂಡುವಂತೆ ಅರ್ಜಿದಾರರು ಕೋರಿದ್ದರು.
ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಹಾಗೂ ಯುಪಿಎಸ್ಸಿಗೆ ಸೂಚನೆ ನೀಡಿದ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ಸಂಜೀವ್ ಖನ್ನ ಅವರನ್ನು ಒಳಗೊಂಡ ನ್ಯಾಯಪೀಠ, ಸೆ. 28ಕ್ಕೆ ವಿಚಾರಣೆಯನ್ನು ನಿಗದಿಪಡಿಸಿತು.

ಅಕ್ಟೋಬರ್ 4ರಂದು ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆ ನಡೆಸುವುದರ ವಿರುದ್ಧ ಸುಮಾರು 20 ಯುಪಿಎಸ್ಸಿ ಆಕಾಂಕ್ಷಿಗಳು ವಕೀಲ ಅಲಾಖ್ ಅಲೋಕ್ ಶ್ರೀವಾಸ್ತವ ಅವರ ಮೂಲಕ ಅರ್ಜಿ ಸಲ್ಲಿಸಿದ್ದರು. ಪರಿಷ್ಕೃತ ಅವಧಿಯಲ್ಲಿ ಯುಪಿಎಸ್ಸಿ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿರುವುದು ಸಾರ್ವಜನಿಕ ಸೇವೆಯ ತಮ್ಮ ಆಯ್ಕೆಯ ವೃತ್ತಿಯನ್ನು ಅಭ್ಯಾಸ ಮಾಡುವ 19 (1) (ಜಿ) ಅಡಿಯಲ್ಲಿನ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆ ಎಂದು ಅರ್ಜಿದಾರರು ಆರೋಪಿಸಿದ್ದರು.
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications