ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಗರಿಕ ಸೇವಾ ಪರೀಕ್ಷೆ: ಕೇಂದ್ರ ಸರ್ಕಾರ, ಯುಪಿಎಸ್‌ಸಿಗೆ ಸುಪ್ರೀಂಕೋರ್ಟ್ ನೋಟಿಸ್

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 24: ನಾಗರಿಕ ಸೇವೆಗಳ ಪರೀಕ್ಷೆಯನ್ನು ಮುಂದೂಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರ ಮತ್ತು ಕೇಂದ್ರ ಲೋಕಸೇವಾ ಆಯೋಗಕ್ಕೆ ಸುಪ್ರೀಂಕೋರ್ಟ್ ಗುರುವಾರ ನೋಟಿಸ್ ನೀಡಿದೆ.

ಕೊರೊನಾ ವೈರಸ್ ಸೋಂಕು ತೀವ್ರವಾಗುತ್ತಿರುವ ಹಾಗೂ ದೇಶದ ಅನೇಕ ಕಡೆ ವಿಪರೀತ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಿದರೆ ಅಭ್ಯರ್ಥಿಗಳಿಗೆ ಬಹಳ ಕಷ್ಟವಾಗುತ್ತದೆ. ಹೀಗಾಗಿ ಎರಡು ಮೂರು ತಿಂಗಳ ಮಟ್ಟಿಗೆ ಪರೀಕ್ಷೆಗಳನ್ನು ಮುಂದೂಡುವಂತೆ ಅರ್ಜಿದಾರರು ಕೋರಿದ್ದರು.

UPSC ಇಂಜಿನಿಯರಿಂಗ್ ಅಡ್ಮಿಟ್ ಕಾರ್ಡ್ ಡೌನ್ ಲೋಡ್ ಹೇಗೆ? UPSC ಇಂಜಿನಿಯರಿಂಗ್ ಅಡ್ಮಿಟ್ ಕಾರ್ಡ್ ಡೌನ್ ಲೋಡ್ ಹೇಗೆ?

ಇದಕ್ಕೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಹಾಗೂ ಯುಪಿಎಸ್‌ಸಿಗೆ ಸೂಚನೆ ನೀಡಿದ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ಮತ್ತು ಸಂಜೀವ್ ಖನ್ನ ಅವರನ್ನು ಒಳಗೊಂಡ ನ್ಯಾಯಪೀಠ, ಸೆ. 28ಕ್ಕೆ ವಿಚಾರಣೆಯನ್ನು ನಿಗದಿಪಡಿಸಿತು.

 Supreme Court Issues Notice To UPSC, Centre On Postponement Of Exams

Recommended Video

Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

ಅಕ್ಟೋಬರ್ 4ರಂದು ನಾಗರಿಕ ಸೇವೆಗಳ ಪ್ರಾಥಮಿಕ ಪರೀಕ್ಷೆ ನಡೆಸುವುದರ ವಿರುದ್ಧ ಸುಮಾರು 20 ಯುಪಿಎಸ್‌ಸಿ ಆಕಾಂಕ್ಷಿಗಳು ವಕೀಲ ಅಲಾಖ್ ಅಲೋಕ್ ಶ್ರೀವಾಸ್ತವ ಅವರ ಮೂಲಕ ಅರ್ಜಿ ಸಲ್ಲಿಸಿದ್ದರು. ಪರಿಷ್ಕೃತ ಅವಧಿಯಲ್ಲಿ ಯುಪಿಎಸ್‌ಸಿ ಪರೀಕ್ಷೆಯನ್ನು ನಡೆಸಲು ಉದ್ದೇಶಿಸಿರುವುದು ಸಾರ್ವಜನಿಕ ಸೇವೆಯ ತಮ್ಮ ಆಯ್ಕೆಯ ವೃತ್ತಿಯನ್ನು ಅಭ್ಯಾಸ ಮಾಡುವ 19 (1) (ಜಿ) ಅಡಿಯಲ್ಲಿನ ಸಂವಿಧಾನಾತ್ಮಕ ಹಕ್ಕಿನ ಉಲ್ಲಂಘನೆ ಎಂದು ಅರ್ಜಿದಾರರು ಆರೋಪಿಸಿದ್ದರು.

English summary
The Supreme Court has issued notice to UPSC and centre on plea seeking postponement of civil services exam amid coronavirus cases and floods.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X