ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಚೌಕಿದಾರ್ ಚೋರ್ ಹೈ' ಅಂದ ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ನೋಟಿಸ್

|
Google Oneindia Kannada News

ನವದೆಹಲಿ, ಏಪ್ರಿಲ್ 15: ರಫೇಲ್ ಒಪ್ಪಂದದ ಕುರಿತಂತೆ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

'ಚೌಕಿದಾರ್ ಚೋರ್ ಹೈ' ಎಂದು ಮೋದಿ ಅವರನ್ನು ಗೇಲಿ ಮಾಡುವಾಗ ರಾಹುಲ್ ಗಾಂಧಿ ವಿನಾಕಾರಣ ಸುಪ್ರೀಂಕೋರ್ಟ್‌ಅನ್ನು ಉಲ್ಲೇಖಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ನ್ಯಾಯಪೀಠ, ತಮ್ಮ ಹೇಳಿಕೆಗೆ ವಿವರಣೆ ನೀಡುವಂತೆ ಸೂಚಿಸಿದೆ.

ರಫೇಲ್ ತೀರ್ಪು: ಮತ್ತೊಮ್ಮೆ 'ಚೌಕಿದಾರ್ ಚೋರ್' ಎಂದ ರಾಹುಲ್ ಗಾಂಧಿರಫೇಲ್ ತೀರ್ಪು: ಮತ್ತೊಮ್ಮೆ 'ಚೌಕಿದಾರ್ ಚೋರ್' ಎಂದ ರಾಹುಲ್ ಗಾಂಧಿ

ಏಪ್ರಿಲ್ 10ರಂದು ರಫೇಲ್ ಒಪ್ಪಂದದ ಕುರಿತು ತೀರ್ಪು ಮರುಪರಿಶೀಲನೆಗೆ ಕೋರಿದ್ದ ಅರ್ಜಿಗಳ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಸೂಚಿಸಿತ್ತು. ಈ ಸಂದರ್ಭದಲ್ಲಿ ಅದು ಕೇಂದ್ರ ಸರ್ಕಾರದ ಆಕ್ಷೇಪವನ್ನು ವಜಾಗೊಳಿಸಿತ್ತು. ಇದನ್ನು ಮೋದಿ ವಿರುದ್ಧ ವಾಗ್ದಾಳಿಗೆ ಬಳಸಿಕೊಂಡಿದ್ದ ರಾಹುಲ್ ಗಾಂಧಿ, 'ಚೌಕಿದಾರ್ ಚೋರ್ ಹೈ' ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂಬುದಾಗಿ ಹೇಳಿಕೆ ನೀಡಿದ್ದರು.

ಇದರ ವಿರುದ್ಧ ಸುಪ್ರೀಂಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಬಿಜೆಪಿ ಸಂಸದೆ ಮಿನಾಕ್ಷಿ ಲೇಖಿ, ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ತೀರ್ಪನ್ನು ಉದ್ದೇಶಪೂರ್ವಕವಾಗಿ ತಿರುಚಿದ್ದಾರೆ ಎಂದು ಆರೋಪಿಸಿದ್ದರು.

ರಾಹುಲ್ ಗಾಂಧಿ ಹೇಳಿಕೆ ಸರಿಯಲ್ಲ

ರಾಹುಲ್ ಗಾಂಧಿ ಹೇಳಿಕೆ ಸರಿಯಲ್ಲ

ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ನ್ಯಾಯಪೀಠ, ಸುಪ್ರೀಂಕೋರ್ಟ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಯಾವುದೇ ಹೇಳಿಕೆಯನ್ನು ಪ್ರಸ್ತಾಪಿಸಿಲ್ಲ ಎಂದು ಹೇಳಿತು.

ರಾಹುಲ್ ಆರೋಪ ಮಾಡಿರುವ ವಿಚಾರದ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ವಿಚಾರಣೆ ನಡೆಸುತ್ತಿಲ್ಲ. ಅದು ರಫೇಲ್ ಪ್ರಕರಣದ ದಾಖಲೆಗಳ ಬಗ್ಗೆ ಮಾತ್ರ ವಿಚಾರಣೆ ನಡೆಸಿದೆ. ಆದರೆ, ರಾಹುಲ್ ಗಾಂಧಿ ಅವರು ಮಾಧ್ಯಮ/ಸಾರ್ವಜನಿಕವಾಗಿ ರಫೇಲ್ ತೀರ್ಪಿನ ಕುರಿತು ಸುಪ್ರೀಂಕೋರ್ಟ್ ಅನ್ನು ಉಲ್ಲೇಖಿಸಿರುವುದು ಸರಿಯಲ್ಲ ಎಂದು ಕಿರಿಕಾರಿತು.

ರಾಹುಲ್ ಗಾಂಧಿಗೆ ನೋಟಿಸ್

ಬಳಿಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ನೋಟಿಸ್ ಜಾರಿ ಮಾಡಿದ ಕೋರ್ಟ್, ಮುಂದಿನ ಸೋಮವಾರ (ಏಪ್ರಿಲ್ 22) ವೇಳೆಗೆ ರಾಹುಲ್ ಗಾಂಧಿ ಅವರು ಸುಪ್ರೀಂಕೋರ್ಟ್ ಹೆಸರು ಉಲ್ಲೇಖ ಮಾಡಿರುವುದಕ್ಕೆ ವಿವರಣೆ ನೀಡಬೇಕು ಎಂದು ಸೂಚಿಸಿ, ಮುಂದಿನ ವಿಚಾರಣೆಯನ್ನು ಅಂದಿಗೆ ನಿಗದಿಪಡಿಸಿದೆ.

ರಫೇಲ್ ತೀರ್ಪು: ಕೇಂದ್ರಕ್ಕೆ ಹಿನ್ನಡೆ, ಸತ್ಯಮೇವ ಜಯತೆ ಎಂದ ಕಾಂಗ್ರೆಸ್!ರಫೇಲ್ ತೀರ್ಪು: ಕೇಂದ್ರಕ್ಕೆ ಹಿನ್ನಡೆ, ಸತ್ಯಮೇವ ಜಯತೆ ಎಂದ ಕಾಂಗ್ರೆಸ್!

ಪರಿಶೀಲನೆಗೆ ಒಪ್ಪಿರುವ ಕೋರ್ಟ್

ಪರಿಶೀಲನೆಗೆ ಒಪ್ಪಿರುವ ಕೋರ್ಟ್

ರಕ್ಷಣಾ ಸಚಿವಾಲಯದಿಂದ ರಫೇಲ್ ಒಪ್ಪಂದದ ದಾಖಲೆಗಳನ್ನು ನಕಲು ಮಾಡಿ ಸೋರಿಕೆ ಮಾಡಲಾಗಿದೆ. ಹೀಗಾಗಿ ತೀರ್ಪು ಮರುಪರಿಶೀಲನಾ ಅರ್ಜಿಯನ್ನು ಪರಿಗಣಿಸಬಾರದು ಎಂದು ಕೇಂದ್ರ ಸರ್ಕಾರವು, ಅರುಣ್ ಶೌರಿ, ಯಶವಂತ್ ಸಿನ್ಹಾ, ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಅರ್ಜಿಗಳಿಗೆ ಆಕ್ಷೇಪ ವ್ಯಕ್ತಪಡಿಸಿತ್ತು. 2018ರ ಡಿಸೆಂಬರ್‌ನಲ್ಲಿ ಸುಪ್ರೀಂಕೋರ್ಟ್, ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾಹಿತಿಗಳನ್ನು ಒದಗಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಮಾನ್ಯ ಮಾಡಿರಲಿಲ್ಲ. ಈ ತೀರ್ಪನ್ನು ಮತ್ತೆ ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಲಾಗಿತ್ತು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು.

ರಾಹುಲ್ ಗಾಂಧಿ ಹೇಳಿದ್ದೇನು?

ರಾಹುಲ್ ಗಾಂಧಿ ಹೇಳಿದ್ದೇನು?

"ರಫೇಲ್ ವಿವಾದದ ಕುರಿತ ದಾಖಲೆಗಳನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಇಂದು ನೀಡಿದ ತೀರ್ಪಿನಿಂದ ಚೌಕಿದಾರ ಚೋರ ಎಂಬುದು ಸಾಬೀತಾಗಿದೆ. ಇದರಿಂದಾಗಿ ಮತ್ತಷ್ಟು ಭ್ರಷ್ಟಾಚಾರದ ಪ್ರಕರಣಗಳು ಹೊರಬರಲಿವೆ. ಇದು ನ್ಯಾಯದ ಗೆಲುವು. ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಇದು ಅತ್ಯಂತ ಪ್ರಮುಖ ದಿನ.

ನೀವು ಭ್ರಷ್ಟಾಚಾರ ಮಾಡಿದ್ದೀರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಾನು ಈಗಲೂ ಮೋದಿಯವರಿಗೆ ಸವಾಲೆಸೆಯುತ್ತೇನೆ. ನನ್ನೊಂದಿಗೆ ಚರ್ಚೆಗೆ ಬನ್ನಿ. ಪ್ರೀತಿಯಿಂದ ಚರ್ಚಿಸೋಣ. ಈ ದೇಶದ ಜನರಿಗೆ ರಫೇಲ್ ಬಗ್ಗೆ ತಿಳಿಯಬೇಕಿದೆ. ಭ್ರಷ್ಟಾಚಾರದ ಬಗ್ಗೆ ತಿಳಿಯಬೇಕಿದೆ. ಅಪನಗದೀಕರಣದ ಬಗ್ಗೆ ತಿಳಿಯಬೇಕಿದೆ" ಎಂದು ರಾಹುಲ್ ಗಾಂಧಿ ಹೇಳಿದ್ದರು.

ರಫೇಲ್ ಒಪ್ಪಂದ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ ರಫೇಲ್ ಒಪ್ಪಂದ: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರಕ್ಕೆ ಹಿನ್ನಡೆ

English summary
The Supreme Court on Monday issued a notice to Congress President Rahul Gandhi to wrongly attributed Supreme Court on his Chowkidar Chor Hai comment and sought his explanation before Aprill 22. The contempt petition was filed by BJP MP Meenakshi Lekhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X