ಚೌಕಿದಾರ್ ಚೋರ್ ಹೇಳಿಕೆ: ರಾಹುಲ್ ಗಾಂಧಿಗೆ ಸುಪ್ರೀಂ ತರಾಟೆ
ನವದೆಹಲಿ, ನವೆಂಬರ್ 14: "ಚೌಕಿದಾರ್ ಚೋರ್ ಹೈ" ಎಂಬ ರಾಹುಲ್ ಗಾಂಧಿ ಹೇಳಿಕೆಯ ವಿರುದ್ಧ ಸಲ್ಲಿಸಲಾಗದ್ದ ನಿಂದನಾ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, "ರಾಹುಲ್ ಗಾಂಧಿ ಅವರು ಮಾತನಾಡುವಾಗ ಎಚ್ಚರಿಕೆಯಿಂದಿರಬೇಕು" ಎಂದಿದೆ.
ರಫೇಲ್ ತೀರ್ಪಿನ ಮರುಪರಿಶೀಲನೆಗೆ ಒಪ್ಪಿಕೊಂಡ ಸುಪ್ರೀಂ ಕೋರ್ಟ್ ಆದೇಶನ್ನು ಸ್ವಾಗತಿಸಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಮಾತಿನ ಬರದಲ್ಲಿ, "ಚೌಕಿದಾರ ಚೋರ್ ಹೈ" ಎಂದಿದ್ದರು.
ನವೆಂಬರ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ ಹೊರಬೀಳಲಿರುವ ಐತಿಹಾಸಿಕ ತೀರ್ಪುಗಳು
ಅವರ ಈ ಹೇಳಿಕೆಯ ವಿರುದ್ಧ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ನಿಂದನಾ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ಕುರಿತು ಇಂದು ಆದೇಶ ನೀಡಿದ ಸುಪ್ರೀಂ ಕೋರ್ಟ್ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿತು.
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮಾಯಾವನೆ ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್, "ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಇಂಥ ಹೇಳಕೆ ನೀಡುವಾಗ ಎಚ್ಚರಿಕೆಯಿಂದರಬೇಕು" ಎಂದಿದೆ.