• search
  • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪೆಗಾಸಸ್ ಬೇಹುಗಾರಿಕೆ ಕುರಿತು ತನಿಖೆಗೆ ಸುಪ್ರೀಂಕೋರ್ಟ್ ತಜ್ಞರ ಸಮಿತಿ ರಚನೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 23: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ತಜ್ಞರ ಸಮಿತಿಯೊಂದನ್ನು ರಚಿಸಲಿದೆ. ಮುಂದಿನ ವಾರ ಈ ಕುರಿತು ವಿವರವಾದ ಆದೇಶ ನಿರೀಕ್ಷಿಸಲಾಗಿದೆ ಎಂದು ಮುಖ್ಯ ನ್ಯಾಯಾಧೀಶರು ಗುರುವಾರ ತಿಳಿಸಿದ್ದಾರೆ.

ಪೆಗಾಸಸ್ ವಿಷಯದಲ್ಲಿ ಈ ವಾರ ತನಿಖಾ ಸಮಿತಿಯನ್ನು ಸ್ಥಾಪಿಸಲು ಆದೇಶ ಹೊರಡಿಸಲು ಬಯಸಿರುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮಣ ಮುಕ್ತ ನ್ಯಾಯಾಲಯದಲ್ಲಿ ಹಿರಿಯ ವಕೀಲ ಸಿ.ಯು. ಸಿಂಗ್ ಅವರಿಗೆ ಹೇಳಿದ್ದಾರೆ. ಆದಾಗ್ಯೂ, ತಮ್ಮ ಮನಸ್ಸಿನಲ್ಲಿರುವ ಕೆಲವು ತಜ್ಞರು ವೈಯಕ್ತಿಕ ಕಾರಣಗಳಿಂದ ಸಮಿತಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ ಎಂದು ಅವರು ಹೇಳಿದರು.

ಪೆಗಾಸಸ್ ಹಗರಣ: ಅಫಿಡವಿಟ್ ಸಲ್ಲಿಸುವುದಿಲ್ಲ ಎಂದ ಕೇಂದ್ರಪೆಗಾಸಸ್ ಹಗರಣ: ಅಫಿಡವಿಟ್ ಸಲ್ಲಿಸುವುದಿಲ್ಲ ಎಂದ ಕೇಂದ್ರ

ಮುಂದಿನ ವಾರದಲ್ಲಿ ಆದೇಶ ಬರಬಹುದು ಎಂದು ಸಿಜೆಐ ರಮಣ ಹೇಳಿದ್ದಾರೆ. "ನಾವು ಮುಂದಿನ ವಾರದೊಳಗೆ ತಾಂತ್ರಿಕ ತಜ್ಞರ ತಂಡದ ಸದಸ್ಯರನ್ನು ಅಂತಿಮಗೊಳಿಸಲು ಮತ್ತು ಆದೇಶಗಳನ್ನು ಹೊರಡಿಸಲು ಸಾಧ್ಯವಾಗುತ್ತದೆ" ಎಂದು ಸಿಜೆಐ ರಮಣ ತಿಳಿಸಿದ್ದಾರೆ.

ಜಾಗತಿಕ ವರದಿಯಲ್ಲಿ ಇಸ್ರೇಲ್ ತಂತ್ರಾಂಶದ ದುರ್ಬಳಕೆ ಉಲ್ಲೇಖ:

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಪೆಗಾಸಸ್ ಅರ್ಜಿದಾರರಿಗೆ ಈ ಮೊದಲು ಸೂಚನೆ ನೀಡಿದ್ದ ಕೋರ್ಟ್:

ಇಸ್ರೇಲಿನ ಪೆಗಾಸಸ್ ತಂತ್ರಾಂಶದ ಬಳಸಿ ಬೇಹುಗಾರಿಕೆ ನಡೆಸಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿ ಬಹಿರಂಗವಾಗಿ ಚರ್ಚಿಸದಂತೆ ಸುಪ್ರೀಂಕೋರ್ಟ್ ಈಗಾಗಲೇ ಆದೇಶಿಸಿದೆ. ಕಳೆದ ಆಗಸ್ಟ್ 10ರಂದು ಹಿರಿಯ ಪತ್ರಕರ್ತ ಎನ್ ರಾಮ್, ಶಶಿಕುಮಾರ್, ಸಿಪಿಎಂ ಸಂಸದ ಜಾನ್ ಬ್ರಿತ್ತಾಸ್ ಹಾಗೂ ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್ ವಿ ರಮಣ್ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠವು ಈ ಹಿಂದೆ ವಿಚಾರಣೆ ನಡೆಸಿತು. ನ್ಯಾಯಾಲಯಕ್ಕೆ ನೀಡಿರುವ ಅರ್ಜಿಯ ಅಂಶವನ್ನು ಒಳಗೊಂಡ ಒಂದು ಪ್ರತಿಯನ್ನು ಕೇಂದ್ರ ಸರ್ಕಾರಕ್ಕೆ ನೀಡುವಂತೆ ಅರ್ಜಿದಾರರಿಗೆ ಕೋರ್ಟ್ ಸೂಚಿಸಿತ್ತು.

"ವಿರೋಧ ಪಕ್ಷ ನಾಯಕರು, ಹಿರಿಯ ಪತ್ರಕರ್ತರು ಸೇರಿದಂತೆ ಯಾರೇ ಆಗಿರಲಿ, ಒಂದು ಬಾರಿ ಸರ್ವೋಚ್ಛ ನ್ಯಾಯಾಲಯದ ಮೊರೆ ಹೋದ ಮೇಲೆ ನೀವು ಹೇಳುವುದೇನೇ ಇದ್ದರೂ ಅದನ್ನು ಕೋರ್ಟಿನಲ್ಲಿ ಪ್ರಸ್ತಾಪಿಸಬೇಕು. ಸಾಮಾಜಿಕ ಜಾಲತಾಣ ಸೇರಿದಂತೆ ಬೇರೆ ಯಾವುದೇ ವೇದಿಕೆಯಲ್ಲಿ ಪೆಗಾಸಸ್ ಬಗ್ಗೆ ಅರ್ಜಿದಾರರು ಚರ್ಚಿಸುವಂತಿಲ್ಲ," ಎಂದು ಕೋರ್ಟ್ ಸೂಚನೆ ನೀಡಿದೆ. ಕೇಂದ್ರ ಸರ್ಕಾರದಿಂದ ಉತ್ತರ ನೀಡುವುದಕ್ಕೆ ಸಾಲಿಸಿಟರ ಜನರಲ್ ತುಷಾರ್ ಮೆಹ್ತಾ ಮತ್ತಷ್ಟು ಸಮಯಾವಕಾಶ ನೀಡುವಂತೆ ನ್ಯಾಯಾಲಯದ ಎದುರು ಮನವಿ ಸಲ್ಲಿಸಿದರು.

ಇಸ್ರೇಲ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ:

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

English summary
Supreme Court order to set up expert panel to probe Pegasus Scandal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X