Breaking; ಜಹಾಂಗಿರ್‌ಪುರಿ, ಯಥಾಸ್ಥಿತಿ ಕಾಪಾಡಲು ಸುಪ್ರೀಂ ಸೂಚನೆ

ನವದೆಹಲಿ, ಏಪ್ರಿಲ್ 21; ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡ ತೆರವು ಕಾರ್ಯಾಚರಣೆಗೆ ಸುಪ್ರೀಂಕೋರ್ಟ್ ಮತ್ತೆ ತಡೆ ನೀಡಿದೆ. ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡುವಂತೆ ಸೂಚನೆ ನೀಡಲಾಗಿದೆ.

ಬುಧವಾರ ದೆಹಲಿ ಮಹಾನಗರ ಪಾಲಿಕೆಯ ಜಹಾಂಗಿರ್‌ಪುರಿಯಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯ ಆರಂಭಿಸಿತ್ತು. ತಕ್ಷಣ ಈ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್‌ ತಡೆ ನೀಡಿತ್ತು. ಗುರುವಾರ ಮತ್ತೆ ಅರ್ಜಿಯ ವಿಚಾರಣೆ ನಡೆಯಿತು.

Supreme Court Orders To Continue Status Quo In Anti Encroachment Drive At Jahangirpuri

ಅಕ್ರಮ ಕಟ್ಟಡಗಳ ತೆರವು ಕಾರ್ಯಚರಣೆಗೆ ಸುಪ್ರೀಂಕೋರ್ಟ್‌ ತಡೆ ನೀಡಿದ್ದು, ಮುಂದಿನ ಆದೇಶದ ತನಕ ಯಥಾಸ್ಥಿತಿ ಕಾಪಾಡಿಕೊಳ್ಳಬೇಕು. ತೆರವು ಕಾರ್ಯಾಚರಣೆ ವಿಚಾರದಲ್ಲಿ ಚರ್ಚೆಯ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಕೋರ್ಟ್‌ ಹೇಳಿದೆ.

ಅರ್ಜಿಯ ವಿಚಾರಣೆ ವೇಳೆ ಕಪಿಲ್ ಸಿಬಲ್ ಉತ್ತರ ದೆಹಲಿ ಮಹಾನಗರ ಪಾಲಿಕೆ ಕಟ್ಟಡಗಳ ತೆರವು ಕಾರ್ಯಾಚರಣೆ ಮಾಡುವಾಗ ಯಾವುದೇ ನೋಟಿಸ್ ನೀಡಿಲ್ಲ. ಕೋರ್ಟ್ ಆದೇಶದ ಬಳಿಕ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಿದ್ದಾರೆ ಎಂದರು.

ಸಾಲಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ ತನ್ನ ಎರಡೂ ಅರ್ಜಿಯಲ್ಲಿ ಜಮಾತ್ ಉಲ್ಮಾ-ಐ-ಹಿಂದ್ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ತೆರವು ಕಾರ್ಯ ಕೈಗೊಂಡಿದೆ ಎಂದು ಆರೋಪಿಸಿದೆ. ಆದರೆ ಇದು ತಪ್ಪು ಎಂದು ವಾದಿಸಿದರು.

ಅರ್ಜಿಯ ವಿಚಾರಣೆ ವೇಳೆ ಕೋರ್ಟ್ ದೆಹಲಿ ಉತ್ತರ ಮಹಾನಗರ ಪಾಲಿಕೆ, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದೆ. ಕೋರ್ಟ್‌ ಆದೇಶದಿಂದಾಗಿ ದೆಹಲಿ ಪಾಲಿಕೆ ಮುಂದಿನ ಆದೇಶದ ತನಕ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಬೇಕಿದೆ.

ಸುಪ್ರೀಂಕೋರ್ಟ್ ಆದೇಶದ ಬಳಿಕ ಪ್ರತಿಕ್ರಿಯೆ ನೀಡಿದ ದೆಹಲಿ ಉತ್ತರ ಪಾಲಿಕೆ ಮೇಯರ್ ರಾಜಾ ಇಕ್ಬಾಲ್ ಸಿಂಗ್, "ನಾವು ಕೋರ್ಟ್‌ ಆದೇಶವನ್ನು ಪಾಲಿಸುತ್ತೇವೆ. ಕೋರ್ಟ್ ಆದೇಶದ ಬಳಿಕ ಮುಂದಿನ ತೀರ್ಮಾನವನ್ನು ಕೈಗೊಳ್ಳುತ್ತೇವೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+