ಪಶ್ಚಿಮ ಬಂಗಾಳ, ಪಂಜಾಬ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್
ನವದೆಹಲಿ, ಜು.27: ಕೋವಿಡ್ ಸಾಂಕ್ರಾಮಿಕ ರೋಗದಲ್ಲಿ ಅನಾಥ ಮಕ್ಕಳ ಸಂಖ್ಯೆಯ ಬಗ್ಗೆ ತನ್ನ ಡೇಟಾವನ್ನು ನವೀಕರಿಸುವಲ್ಲಿನ ವಿಳಂಬದ ಬಗ್ಗೆ ಪಶ್ಚಿಮ ಬಂಗಾಳ ಮತ್ತು ಪಂಜಾಬ್ ಸೇರಿದಂತೆ ಹಲವಾರು ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ತರಾಟೆಗೆ ತೆಗೆದುಕೊಂಡಿದೆ.
''ಕೋವಿಡ್ ಸಂದರ್ಭದಲ್ಲಿ ಅನಾಥ ಮಕ್ಕಳ ಕುರಿತಾದ ಡೇಟಾವನ್ನು ಬಾಲ್ ಸ್ವರಾಜ್ ವೆಬ್‌ಸೈಟ್‌ನಲ್ಲಿ ಇನ್ನೂ ಏಕೆ ಅಪ್‌ಲೋಡ್ ಮಾಡಿಲ್ಲ,'' ಎಂದು ಜಮ್ಮು ಕಾಶ್ಮೀರ, ಪಂಜಾಬ್ ಮತ್ತು ಪಶ್ಚಿಮ ಬಂಗಾಳ ಸರ್ಕಾರವನ್ನು ನ್ಯಾಯಾಲಯ ಕೇಳಿದೆ.
''ಸರಿಯಾದ ಡೇಟಾವನ್ನು ಅಪ್‌ಲೋಡ್ ಮಾಡಿ ಎನ್‌ಸಿಪಿಸಿಆರ್‌ಗೆ ಕಳುಹಿಸಲಾಗಿದೆ,'' ಎಂದು ಪಶ್ಚಿಮ ಬಂಗಾಳದ ವಕೀಲರು ವಾದಿಸುತ್ತಿದ್ದಂತೆ, ನ್ಯಾಯಾಲಯವು, ''ಹಾಗಾದರೆ ಇಡೀ ರಾಜ್ಯದಲ್ಲಿ ಕೇವಲ 27 ಮಕ್ಕಳು ಮಾತ್ರ ಅನಾಥರಾಗಿದ್ದಾರೆಂದು ನೀವು ಹೇಳುತ್ತೀರಾ? ನಿಮ್ಮ ಈ ಅಂಕಿ ಅಂಶ ಸರಿಯೇ'' ಎಂದು ಸರ್ಕಾರವನ್ನು ಪ್ರಶ್ನಿಸಿದೆ.

"ನೀವು ಇತರ ರಾಜ್ಯಗಳಲ್ಲಿನ ಅಂಕಿಅಂಶಗಳನ್ನು ನೋಡಿದ್ದೀರಿ. ನಿಮ್ಮ ರಾಜ್ಯದಲ್ಲಿ ಕೋವಿಡ್ ಸೋಂಕು ಇರಲೇ ಇಲ್ಲ ಎಂಬುವುದು ಅಲ್ಲ. ಈ ಅಂಕಿಅಂಶಗಳನ್ನು ನಂಬಲು ನಾವು ನಂಬಲಾಗದು. ಏನು ಮಾಡಬೇಕೆಂದು ರಾಜ್ಯಕ್ಕೆ ಹೇಗೆ ತಿಳಿಯುತ್ತಿಲ್ಲ ಎಂಬುದು ನಮಗೆ ಅರ್ಥವಾಗುತ್ತಿಲ್ಲ," ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗೆಯೇ ಮಕ್ಕಳ ಹಕ್ಕುಗಳು ಮತ್ತು ಕಳ್ಳಸಾಗಣೆ ನಿಯಂತ್ರಣ ಕಾರ್ಯದರ್ಶಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದೆ.
ಈ ಸಂದರ್ಭದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದಲ್ಲಿ ಅನಾಥ ಮಕ್ಕಳ ಸಂಖ್ಯೆಯ ಬಗ್ಗೆ ಪರಿಶೀಲನೆ ಪ್ರಕ್ರಿಯೆ ಇನ್ನೂ ನಡೆಯುತ್ತಿದೆ ಎಂದು ವಕೀಲರು ಹೇಳಿದ್ದಾರೆ. "ಪ್ರಕ್ರಿಯೆ ನಡೆಯುತ್ತದೆ ಎಂಬ ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಬೇಡಿ. ಬಿಟ್ಟರೆ ನೀವು ಪರಿಶೀಲಿಸಲು ವರ್ಷಗಳು ತೆಗೆದುಕೊಳ್ಳುತ್ತೀರಿ. ಮಕ್ಕಳನ್ನು ಅಸಹಾಯಕರಾಗಿ ಬಿಡಲಾಗುತ್ತದೆಯೇ?," ಎಂದು ಮತ್ತೆ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಅಂಕಿಅಂಶಗಳು ಸರಿಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರವನ್ನು ಕೂಡಾ ತರಾಟೆಗೆ ತೆಗೆದುಕೊಂಡಿದೆ. "ನೀವು ತಳಮಟ್ಟದಲ್ಲಿ ಮಾಹಿತಿಯನ್ನು ಪಡೆಯುವ ಮಾರ್ಗಗಳನ್ನು ತರಬೇಕು. ಜಿಲ್ಲಾ ಮಟ್ಟದಲ್ಲಿ ಸಿಡಬ್ಲ್ಯುಸಿಗಳ ಮುಂದೆ ಹಾಜರಾಗುವ ಮಕ್ಕಳ ಮಾಹಿತಿಯನ್ನು ಮಾತ್ರ ಅವಲಂಬಿಸಲಾಗುವುದಿಲ್ಲ," ಎಂದು ಸುಪ್ರೀಂ ಕೋರ್ಟ್ ಪಂಜಾಬ್‌ಗೆ ತಿಳಿಸಿದೆ.
"ಪೋಷಕರನ್ನು ಕಳೆದುಕೊಂಡಿರುವ ಮಕ್ಕಳ ಬಗ್ಗೆ ನಮಗೆ ಮಾಹಿತಿ ಸಿಗದಿದ್ದರೆ, ಅವರನ್ನು ನೋಡಿಕೊಳ್ಳಲು ಯಾವುದೇ ಮಾರ್ಗವಿಲ್ಲ," ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಪಂಜಾಬ್ ಪರ ವಾದಿಸಿದ ವಕೀಲರು, "ನಮ್ಮಲ್ಲಿ 73 ಅನಾಥ ಮಕ್ಕಳಿದ್ದಾರೆ ಎಂಬುದು ನಮ್ಮ ಇಲಾಖೆಗೆ ಖಚಿತವಾಗಿದೆ. ಕೋವಿಡ್‌ನಿಂದಾಗಿ ಪೋಷಕರು ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ 33 ಮಕ್ಕಳ ಡೇಟಾವನ್ನು ಅಪ್‌ಲೋಡ್ ಮಾಡಲಾಗಿದೆ. ಉಳಿದ 40 ಮಂದಿ ಕೋವಿಡ್ ಅಲ್ಲದ ಕಾರಣಗಳಿಂದ ಸಾವನ್ನಪ್ಪಿದರು," ಎಂದು ಹೇಳಿದ್ದಾರೆ.
ಈ ವೇಳೆ ತಳಮಟ್ಟದಲ್ಲಿ ಅನಾಥ ಮಕ್ಕಳ ಸಂಖ್ಯೆಯನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಪಂಜಾಬ್ ಸರ್ಕಾರಕ್ಕೆ ಸೂಚಿಸಿದೆ. ಮತ್ತೊಂದೆಡೆ, ನವೀಕರಿಸಿದ ಮಾಹಿತಿಯನ್ನು ಸಲ್ಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಜಮ್ಮು ಮತ್ತು ಕಾಶ್ಮೀರ ಅಧಿಕಾರಿಗಳಿಗೆ ನಿರ್ದೇಶಿಸಿದೆ.
(ಒನ್‌ಇಂಡಿಯಾ ಸುದ್ದಿ)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications