ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳದಲ್ಲಿ ಕೊರೊನಾ ಎಚ್ಚರಿಕೆ ಗಂಟೆ; 11ನೇ ತರಗತಿ ಪರೀಕ್ಷೆಗೆ ಸುಪ್ರೀಂ ತಡೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 3: ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಇದರ ನಡುವೆಯೂ ಹನ್ನೊಂದನೇ ತರಗತಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಸೆಪ್ಟೆಂಬರ್ 6ರಿಂದ 11ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕವಾಗಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು.

ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ 5 ರಾಜ್ಯಗಳಿವು...ಅತಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವ 5 ರಾಜ್ಯಗಳಿವು...

ನ್ಯಾಯಮೂರ್ತಿ ಎ.ಎಂ.ಖಾನ್‌ವಿಲ್ಕರ್ ಈ ಸಂಬಂಧ ಮಾತನಾಡಿದ್ದು, 'ಕೇರಳದಲ್ಲಿ ಕೊರೊನಾ ಪರಿಸ್ಥಿತಿ ಎಚ್ಚರಿಕೆ ಗಂಟೆಯಾಗಿದೆ. ಇಂಥ ಸಂದರ್ಭದಲ್ಲಿ ಈ ವಯಸ್ಸಿನ ಮಕ್ಕಳನ್ನು ಅಪಾಯಕ್ಕೆ ದೂಡಲು ಸಾಧ್ಯವಿಲ್ಲ' ಎಂದು ಹೇಳಿದ್ದಾರೆ.

 Supreme Court Puts Interim Stay On Decision To Hold Class XI Exams From Sept 6 In Kerala

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದಲೂ ಪ್ರತಿನಿತ್ಯ ಮೂವತ್ತು ಸಾವಿರಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ. ದೇಶದ ದಿನನಿತ್ಯದ ಕೊರೊನಾ ಪ್ರಕರಣಗಳಲ್ಲಿ ಕೇರಳ ಒಂದರದ್ದೇ 70% ಪಾಲು ಇದೆ. ಇಂಥ ಸಂದರ್ಭದಲ್ಲಿ ಮಕ್ಕಳನ್ನು ಅಪಾಯಕ್ಕೆ ದೂಡಲು ಆಗುವುದಿಲ್ಲ ಎಂದು ನ್ಯಾಯಾಲಯ ಉಲ್ಲೇಖಿಸಿದೆ.

ಸದ್ಯಕ್ಕೆ ಈ ಸಂಬಂಧ ಮಧ್ಯಂತರ ತಡೆ ಆದೇಶ ನೀಡಲಾಗಿದೆ. ಸೆಪ್ಟೆಂಬರ್ 13ಕ್ಕೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿದ್ದಾರೆ.

ಕೇರಳದಲ್ಲಿ ಕೊರೊನಾ ಏರಿಕೆ; ಕರ್ನಾಟಕ, ತಮಿಳುನಾಡಿಗೆ ಕೇಂದ್ರದ ಸೂಚನೆಕೇರಳದಲ್ಲಿ ಕೊರೊನಾ ಏರಿಕೆ; ಕರ್ನಾಟಕ, ತಮಿಳುನಾಡಿಗೆ ಕೇಂದ್ರದ ಸೂಚನೆ

ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಗೆ ಆಫ್‌ಲೈನ್ ಪರೀಕ್ಷೆ ನಡೆಸುವ ವಿಷಯದಲ್ಲಿ ಕೇರಳ ಹೈಕೋರ್ಟ್ ಮಧ್ಯ ಪ್ರವೇಶ ನಿರಾಕರಣೆ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿತು.

ಅರ್ಜಿಯಲ್ಲಿ, ಈ ವಯಸ್ಸಿನವರಿಗೆ ಲಸಿಕೆಯೂ ದೊರೆಯದ ಇಂಥ ಸಂದರ್ಭದಲ್ಲಿ ಪರೀಕ್ಷೆಯನ್ನು ಆಯೋಜಿಸುವುದು ಅಪಾಯಕಾರಿ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಉತ್ತುಂಗದಲ್ಲಿರುವ ಈ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಲ್ಲ ಎಂದು ಅರ್ಜಿಯಲ್ಲಿ ನಮೂದಿಸಲಾಗಿತ್ತು.

 Supreme Court Puts Interim Stay On Decision To Hold Class XI Exams From Sept 6 In Kerala

ರಾಜ್ಯದಲ್ಲಿ ಸುಮಾರು ಮೂರು ಲಕ್ಷ ವಿದ್ಯಾರ್ಥಿಗಳು 11ನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಲಸಿಕೆ ಪಡೆದಿಲ್ಲ. ಈ ವಯಸ್ಸಿನವರು ಸೋಂಕಿಗೆ ತುತ್ತಾಗುವ ಸಾಧ್ಯತೆಯೂ ಅಧಿಕವಿದೆ ಎಂದು ವಕೀಲ ಪ್ರಶಾಂತ್ ಪದ್ಮನಾಭನ್ ವಾದಿಸಿದರು.

ಆದರೆ ಕೇರಳ ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡ ವಕೀಲ ಸಿ.ಕೆ.ಶಶಿ, 'ಎಲ್ಲಾ ಸೂಕ್ತ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ' ಎಂದರು.

ಆದರೆ ಇದನ್ನು ಪ್ರಶ್ನಿಸಿದ ಪೀಠ, ಒಬ್ಬ ವಿದ್ಯಾರ್ಥಿಗೂ ಸೋಂಕು ತಗುಲುವುದಿಲ್ಲ ಎಂಬುದನ್ನು ಖಾತ್ರಿಪಡಿಸಿ. ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿದ್ದು ವರದಿಯಾದರೂ ನೀವೇ ಇದಕ್ಕೆ ಜವಾಬ್ದಾರರಾಗುತ್ತೀರ ಎಂದು ಪೀಠವು ರಾಜ್ಯ ಸರ್ಕಾರ ಪರ ವಕೀಲರಿಗೆ ತಿಳಿಸಿತು. ಇತರೆ ಬದಲಿ ಮಾರ್ಗಗಳನ್ನು ಯೋಚಿಸಿ ಎಂದು ಸೆಪ್ಟೆಂಬರ್ 13ಕ್ಕೆ ವಿಚಾರಣೆ ಮುಂದೂಡಿತು.

ಮಧ್ಯ ಪ್ರವೇಶಿಸಲು ನಿರಾಕರಿಸಿದ್ದ ಕೇರಳ ಹೈಕೋರ್ಟ್
ಕೇರಳ ಹೈಕೋರ್ಟ್ ಈ ವಿಚಾರದಲ್ಲಿ ಮಧ್ಯ ಪ್ರವೇಶಿಸಲು ನಿರಾಕರಿಸಿತ್ತು. ಪರೀಕ್ಷೆ ನಡೆಸುವುದು ರಾಜ್ಯ ಸರ್ಕಾರದ ನೀತಿಗೆ ಸಂಬಂಧಿಸಿದ್ದು ಎಂದು ಹೇಳಿತ್ತು. ಭೌತಿಕವಾಗಿ ಪರೀಕ್ಷೆ ನಡೆಸುವ ಕೇರಳ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ಸಂಬಂಧ ರಾಜ್ಯ ಹೈಕೋರ್ಟ್ ಈ ನಿಲುವು ವ್ಯಕ್ತಪಡಿಸಿತ್ತು. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಳ್ಳದೇ ಪರೀಕ್ಷೆ ನಡೆಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿತ್ತು.

ಕೇರಳದಲ್ಲಿ ಶುಕ್ರವಾರ 32,803 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ದೇಶದ ಒಟ್ಟಾರೆ ಪ್ರಕರಣ 47,092 ಆಗಿದ್ದು, ಕೇರಳ ರಾಜ್ಯದ್ದೇ ಮುಕ್ಕಾಲು ಪಾಲಾಗಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳ ಏರಿಕೆಯಾಗುತ್ತಿದ್ದಂತೆ, ನೆರೆ ರಾಜ್ಯಗಳಾದ ಕರ್ನಾಟಕ, ತಮಿಳುನಾಡಿನ ಗಡಿ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಯನ್ನು ಚುರುಕುಗೊಳಿಸಲು ಕೇಂದ್ರ ಸೂಚನೆ ನೀಡಿದೆ.

ಕೇರಳದಲ್ಲಿ ಕೊರೊನಾ ಪಾಸಿಟಿವಿಟಿ ದರ ಹೆಚ್ಚಾಗಿದ್ದು, ಕೆಲವು ಜಿಲ್ಲೆಗಳಲ್ಲಿ ಶೇ 20ಕ್ಕಿಂತ ಹೆಚ್ಚಾಗಿದೆ. ಇದು ಕೊರೊನಾ ತೀವ್ರ ಹರಡುವಿಕೆಗೆ ಕಾರಣವಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಆರೋಗ್ಯ ಸಚಿವರು ಕೊರೊನಾ ನಿರ್ವಹಣೆಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ. ಪ್ರಕರಣಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಾದ ನಿಯಂತ್ರಣ ಕ್ರಮಗಳು ಹಾಗೂ ಕಾರ್ಯತಂತ್ರದ ಲಾಕ್‌ಡೌನ್ ಕುರಿತು ಪ್ರಸ್ತಾಪ ಮಾಡಲಾಗಿದೆ.

English summary
Supreme Court on Friday stayed a state government decision to hold Class 11 exams, expressing worry over alarming covid situation in kerala
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X