ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್ ಪರೀಕ್ಷೆಗೆ ಅಡ್ಡಿಯಿಲ್ಲ: ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 9: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಅನ್ನು ಮುಂದೂಡುವ ಅಥವಾ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಪರಿಗಣಿಸಲು ಸುಪ್ರೀಂಕೋರ್ಟ್ ಬುಧವಾರ ನಿರಾಕರಿಸಿದೆ.

ಇದರಿಂದಾಗಿ ಸೆಪ್ಟೆಂಬರ್ 13ಕ್ಕೆ ನಿಗದಿಯಾಗಿರುವ ನೀಟ್, ಯಾವುದೇ ಬದಲಾವಣೆಗಳಿಲ್ಲದೆ ನಡೆಯಲಿದೆ. ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ನೀಟ್ ಪರೀಕ್ಷೆಯನ್ನು ಕೋವಿಡ್ 19 ಸೋಂಕಿನ ಪಿಡುಗಿನ ನಡುವೆಯೇ ನಡೆಸಲು ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠ ಹೇಳಿತು.

ನೀಟ್ ಪರೀಕ್ಷೆಗೆ ಹಾಜರಾಗುವ ಮುನ್ನ ಈ ನಿಯಮಗಳನ್ನು ಓದಿ ನೀಟ್ ಪರೀಕ್ಷೆಗೆ ಹಾಜರಾಗುವ ಮುನ್ನ ಈ ನಿಯಮಗಳನ್ನು ಓದಿ

ನೀಟ್ ಹಾಗೂ ಜೆಇಇ ಪರೀಕ್ಷೆಗಳನ್ನು ನಡೆಸಲು ತೊಂದರೆಯಿಲ್ಲ ಎಂದು ಆಗಸ್ಟ್ 17ರಂದು ನೀಡಿದ್ದ ಆದೇಶವನ್ನು ಪರಾಮರ್ಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ನಾಲ್ಕು ಅರ್ಜಿಗಳನ್ನು ಸೆ. 4ರಂದು ಸುಪ್ರೀಂಕೋರ್ಟ್ ವಜಾಗೊಳಿಸಿತ್ತು. ಇವುಗಳಲ್ಲಿ ಆರು ರಾಜ್ಯಗಳ ಸಚಿವರು ಸಲ್ಲಿಸಿದ್ದ ಒಂದು ಅರ್ಜಿಯೂ ಸೇರಿತ್ತು.

 Supreme Court Refuses To Entertain Pleas On NEET 2020

ಬುಧವಾರ ಮತ್ತೊಂದು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಆರ್‌ಎಸ್ ರೆಡ್ಡಿ ಮತ್ತು ಎಂಆರ್ ಶಾ ಅವರನ್ನು ಒಳಗೊಂಡ ನ್ಯಾಯಪೀಠ, ಪರೀಕ್ಷೆ ನಡೆಸಲು ಅಧಿಕಾರಿಗಳು ಈಗಾಗಲೇ ಎಲ್ಲ ಸಿದ್ಧತೆ ನಡೆಸಿದ್ದಾರೆ ಎಂದಿತು. 'ಈಗ ಎಲ್ಲವೂ ಮುಗಿದಿದೆ. ಪರಾಮರ್ಶೆಯನ್ನೂ ವಜಾಗೊಳಿಸಲಾಗಿದೆ' ಎಂದ ನ್ಯಾಯಪೀಠ, ಜೆಇಇ ಪರೀಕ್ಷೆ ಮುಗಿದುಹೋಗಿದೆ. ನೀಟ್ ಪರೀಕ್ಷೆ ಮಾತ್ರವೇ ಬಾಕಿ ಇದೆ ಎಂದಿತು.

ಜೆಇಇ, ನೀಟ್ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ಜೆಇಇ, ನೀಟ್ ಮುಂದೂಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಜೆಇಇ ಫಲಿತಾಂಶ

ಜೆಇಇ ಮುಖ್ಯ ಪರೀಕ್ಷೆಯ ಫಲಿತಾಂಶದ ಪ್ರಕ್ರಿಯೆ ಶುರುವಾಗಿದೆ. ಶೀಘ್ರದಲ್ಲಿಯೇ ಫಲಿತಾಂಶ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ತಿಳಿಸಿದ್ದಾರೆ.

ಸೆ. 1 ರಿಂದ ಸೆ. 6ರವರೆಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (ಎನ್‌ಟಿಎ) ಜೆಇಇ ಮುಖ್ಯ ಪರೀಕ್ಷೆಗಳನ್ನು ನಡೆಸಿತ್ತು. 'ಸರ್ಕಾರದ ಮೇಲೆ ನಂಬಿಕೆ ಇರಿಸಿ ಪರೀಕ್ಷೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು' ಎಂದು ಪೋಖ್ರಿಯಾಲ್ ಹೇಳಿದ್ದಾರೆ.

English summary
The Supreme Court has refused to entertain the pleas requesting deferment or cancellation of NEET exam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X