ರಫೇಲ್ ವಿವಾದ: ಅರ್ಜಿ ವಿಚಾರಣೆಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

ನವದೆಹಲಿ, ಅಕ್ಟೋಬರ್ 29: ರಫೇಲ್ ಒಪ್ಪಂದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಮತ್ತೊಂದು ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಹೊಸ ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿತು.

ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ಅರ್ಜಿಗಳು ಬಂದಿದ್ದು, ಅವುಗಳ ವಿಚಾರಣೆ ನಡೆಸುತ್ತಿರುವಾಗ ಹೊಸ ಅರ್ಜಿಯನ್ನು ವಿಚಾರಣೆ ನಡೆಸುವ ಅಗತ್ಯವೇನಿದೆ ಎಂದು ರಂಜನ್ ಗೊಗೊಯ್ ಪ್ರಶ್ನಿಸಿದರು.

Supreme court rejected to hear new plea on Rafale deal

ರಫೇಲ್ ಒಪ್ಪಂದದ ಕುರಿತಾಗಿ ವಿವಿಧ ಸಂಘಟನೆಗಳು, ವ್ಯಕ್ತಿಗಳು ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರಸರ್ಕಾರದ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ. ಈ ಮೊದಲು ವಿಚಾರಣೆ ಆರಂಭಿಸಿದ್ದ ನ್ಯಾಯಪೀಠ, ಪ್ರಕರಣದ ನಿರ್ಧಾರ ಕೈಗೊಳ್ಳುವಿಕೆಯ ಪ್ರಕ್ರಿಯೆಯ ವಿವರವನ್ನು ಅ. 29ರ ಒಳಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು.

ಅದರಂತೆ ಕೇಂದ್ರ ಸರ್ಕಾರ ಶನಿವಾರ (ಅ.27) ಸುಪ್ರೀಂಕೋರ್ಟ್‌ಗೆ ರಫೇಲ್ ಒಪ್ಪಂದದ ಪ್ರಕ್ರಿಯೆಯ ವಿವರಗಳನ್ನು ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+