ಡಿಕೆಶಿಗೆ ಬಿಗ್ ರಿಲೀಫ್: ಸುಪ್ರೀಂ ನಲ್ಲಿ ED ಮೇಲ್ಮನವಿ ಅರ್ಜಿ ವಜಾ

ನವದೆಹಲಿ, ನವೆಂಬರ್ 15: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಶುಕ್ರವಾರ ಸುಪ್ರೀಂಕೋರ್ಟ್‌ನಲ್ಲಿ ವಜಾಗೊಂಡಿದೆ.

ಇ.ಡಿ. ಅರ್ಜಿಯನ್ನು ನ್ಯಾ.ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ವಜಾಗೊಳಿಸುತ್ತಿದ್ದಂತೆಯೇ ಮಾಜಿ ಸಚಿವ, ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ದೊರೆತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ಟೋಬರ್ 23 ರಂದು ದೆಹಲಿ ಹೈಕೋರ್ಟ್ ಡಿಕೆ ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ನೀಡುವಾಗ ಅಕ್ರಮ ಹಣ ವರ್ಗಾವಣೆ ಕಾಯ್ದೆಯ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ದೂರಿ ಜಾರಿ ನಿರ್ದೇಶನಾಲಯ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇದರಿಂದಾಗಿ ಮತ್ತೆ ಬಂಧನ ಭೀತಿ ಎದುರಿಸುತ್ತಿದ್ದ ಡಿಕೆಶಿ ಅವರಿಗೆ ಇದೀಗ ಭಾರೀ ರಿಲೀಫ್ ದೊರೆತಂತಾಗಿದೆ.

Supreme Court Rejects ED Plea Against Bail for DK Shivakumar

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ. ಕೆ. ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಇದಕ್ಕೂ ಮೊದಲು ಆಗಸ್ಟ್ 30ರಿಂದ ಸತತ ನಾಲ್ಕು ದಿನ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ಅವರನ್ನು ವಿಶೇಷ ನ್ಯಾಯಾಲಯವು ಇ.ಡಿ ವಶಕ್ಕೆ ಒಪ್ಪಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+