ನಿರ್ಭಯ ಪ್ರಕರಣ; ಮಾರ್ಚ್ 20ರ ಗಲ್ಲು ಶಿಕ್ಷಗೆ ತಡೆ ಇಲ್ಲ

ನವದೆಹಲಿ, ಮಾರ್ಚ್ 16 : ನಿರ್ಭಯ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮಾರ್ಚ್ 20ರಂದು ಬೆಳಗ್ಗೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಗೊಳಿಸಲಾಗಿದೆ.

ಮುಕೇಶ್ ಸಿಂಗ್ ಹೊಸ ಕ್ಯುರೆಟೀವ್ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ. ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಅಪರಾಧಿ ಮುಂದಿರುವ ಎಲ್ಲಾ ಹಾದಿಗಳು ಮುಚ್ಚಿ ಹೋಗಿವೆ.

ಅಕ್ಷಯ್ ಠಾಕೂರ್ (31), ಪವನ್ ಗುಪ್ತ (25), ವಿನಯ್ ಶರ್ಮಾ (26) ಮತ್ತು ಮುಕೇಶ್ ಸಿಂಗ್ (32) ಇದುವರೆಗೂ ಡೆತ್ ವಾರೆಂಟ್ ಪ್ರಶ್ನಿಸಿ ಹಲವು ಅರ್ಜಿಗಳನ್ನು ಸಲ್ಲಿಸಿದ್ದರು. ಈಗ ಎಲ್ಲಾ ಅರ್ಜಿಗಳು ವಜಾಗೊಂಡಿದ್ದು, ಮಾರ್ಚ್ 20ರಂದು ಗಲ್ಲು ಶಿಕ್ಷೆ ಜಾರಿಯಾಗುವುದು ಬಹುತೇಕ ಖಚಿತವಾಗಿದೆ.

Supreme Court Rejects Nirbhaya Case Convict Petition

ಎಲ್ಲಾ ನಾಲ್ವರು ಅಪರಾಧಿಗಳ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಜಾಗೊಳಿಸಿದ್ದಾರೆ. ದೆಹಲಿ ನ್ಯಾಯಾಲಯ ಎಲ್ಲಾ ಅಪರಾಧಿಗಳನ್ನು ಮಾರ್ಚ್ 20ರಂದು ಗಲ್ಲಿಗೇರಿಸಲು ಡೆತ್ ವಾರೆಂಟ್ ಜಾರಿಗೊಳಿಸಿದೆ.

ಈಗಾಗಲೇ ಮೂರು ಬಾರಿ ವಿವಿಧ ಕಾರಣಗಳಿಗಾಗಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಮಾರ್ಚ್ 20ರ ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸಲು 4ನೇ ಡೆತ್ ವಾರೆಂಟ್ ಜಾರಿಯಾಗಿದೆ. ಈ ಬಾರಿ ಗಲ್ಲು ಶಿಕ್ಷೆ ಜಾರಿಯಾಗುವುದು ಬಹುತೇಕ ಖಚಿತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+