ವ್ಯಭಿಚಾರ ಅಪರಾಧವಲ್ಲ: ಸುಪ್ರೀಂ ಐತಿಹಾಸಿಕ ತೀರ್ಪು

Recommended Video

      ವ್ಯಭಿಚಾರ ಆಪಾಧವಲ್ಲ ಎಂಬ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂಕೋರ್ಟ್ | Oneindia Kannada

      ನವದೆಹಲಿ, ಸೆಪ್ಟೆಂಬರ್ 27: ವ್ಯಭಿಚಾರಕ್ಕೆ ಶಿಕ್ಷೆ ವಿಧಿಸುವ ಐಪಿಸಿ(ಭಾರತೀಯ ದಂಡ ಸಂಹಿತೆ)ಯ ಸೆಕ್ಷನ್ 497 ಅನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು(ಸೆ.27) ತೀರ್ಪು ನೀಡಿದೆ. ದೀಪಕ್ ಮಿಶ್ರಾ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಈ ಐತಿಹಾಸಿಕ ತೀರ್ಪು ನೀಡಿದೆ.

      ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ 'ವ್ಯಭಿಚಾರವನ್ನು ಅಪರಾಧ ಎಂದು ಪರಿಗಣಿಸುವ ಸೆಕ್ಷನ್ 497 ಅಸಾಂವಿಧಾನಿಕ' ಎಂದಿದ್ದಾರೆ.

      Supreme courts verdict on Section 497 or Adultery

      'ವ್ಯಭಿಚಾರ ಅಪರಾಧವಾಗುವುದಕ್ಕೆ ಸಾಧ್ಯವಿಲ್ಲ. ಆದರೆ ಅದು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದರೆ ಮಾತ್ರ ಅಪರಾಧವಾಗುತ್ತದೆ' ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

      ವ್ಯಭಿಚಾರವು ಸೆಕ್ಷನ್ 306 ಪ್ರಕಾರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದಲ್ಲಿ ಅದು ಅಪರಾಧವಾಗುತ್ತದೆ. ಇಲ್ಲವೆಂದರೆ ಅದನ್ನು ಅಪರಾಧ ಎಂದು ಪರಿಗಣಿಸಿ, ಶಿಕ್ಷಿಸುವುದು ಸರಿಯಲ್ಲ ಎಂದು ಸುಪ್ರೀಂ ಐತಿಹಾಸಿಕ ತೀರ್ಪು ನೀಡಿದೆ.

      "ಸಮಾನತೆ ಎಂಬುದು ವ್ಯವಸ್ಥೆಯನ್ನು ಆಳುತ್ತಿರುವ ತತ್ತ್ವ. ಪತಿಯು ಪತ್ನಿಯ ಮಾಲೀಕನಲ್ಲ! ಅಂತೆಯೇ ವ್ಯಭಿಚಾರವನ್ನು ಅಪರಾಧವೆಂದು ಪರಿಗಣಿಸುವುದಕ್ಕಾಗುವುದಿಲ್ಲ. ಅದು ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದರೆ ಮಾತ್ರವೇ ಅಪರಾಧ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ಪಟ್ಟಿದೆ.

      ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ಚಂದ್ರಚೂಡ್, ನ್ಯಾ. ನಾರಿಮನ್, ನ್ಯಾ. ಖಾನ್ವಿಲ್ಕರ್ ಅವರ ಅಭಿಪ್ರಾಯಕ್ಕೆ ವಿಭಾಗೀಯ ಪೀಠದಲ್ಲಿನ ಏಕೈಕ ಮಹಿಳಾ ನ್ಯಾ. ಇಂದು ಮಲ್ಹೋತ್ರಾ ಸಹ ದನಿಗೂಡಿಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+