• search
 • Live TV
ನವದೆಹಲಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಬೇಕು- ಸುಪ್ರೀಂಕೋರ್ಟ್

|
Google Oneindia Kannada News

ದೆಹಲಿ, ಜೂನ್ 5: ಕೊರೊನಾ ವೈರಸ್ ಲಾಕ್‌ಡೌನ್‌ ಜಾರಿಯಾದ ಬಳಿಕ ದೇಶದಲ್ಲಿ ನಿರುದ್ಯೋಗ ಸೃಷ್ಟಿಯಾಗಿದೆ. ದೇಶದ ಪ್ರಮುಖ ನಗರಗಳಿಗೆ ವಲಸೆ ಬಂದು ಕೆಲಸ ಮಾಡುತ್ತಿದ್ದ ಕಾರ್ಮಿಕರು ಈಗ ಸ್ವಂತ ಊರುಗಳಿಗೆ ವಾಪಸ್ ಹೋಗಿದ್ದಾರೆ. ಇದರಿಂದ ಕೈಗಾರಿಕೆ, ಕಂಪನಿ ಹಾಗೂ ಇನ್ನಿತರ ಕಚೇರಿಗಳು ಬಂದ್ ಆಗಿದ್ದವು.

   ಪ್ರತಿನಿತ್ಯ ಸೈಕಲ್ ತುಳಿಯೋದ್ರಿಂದ ಪರಿಸರ ಹಾಗೂ ಆರೋಗ್ಯಕ್ಕೂ ಪ್ರಯೋಜನ | Oneindia Kannada

   ಲಾಕ್‌ಡೌನ್‌ನಿಂದ ಕಂಪನಿಗಳು, ಗಾರ್ಮೆಂಟ್ಸ್, ಕೈಗಾರಿಕೆಗಳು ನಷ್ಟ ಅನುಭವಿಸಿದ ಹಿನ್ನೆಲೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿರುವ ಘಟನೆಗಳು ವರದಿಯಾಗಿದೆ.

   ಬಿಹಾರದಲ್ಲಿ ಕ್ವಾರಂಟೈನ್ ಅವಧಿ ಮುಗಿಸಿದವರಿಗೆ ಕಾಂಡೋಮ್ ವಿತರಣೆಬಿಹಾರದಲ್ಲಿ ಕ್ವಾರಂಟೈನ್ ಅವಧಿ ಮುಗಿಸಿದವರಿಗೆ ಕಾಂಡೋಮ್ ವಿತರಣೆ

   ಕಾರ್ಮಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ ಸ್ವ-ಇಚ್ಛೆಯಿಂದ ಈ ಬಗ್ಗೆ ಸರ್ಕಾರದ ಬಳಿ ಮಾಹಿತಿ ಕೇಳಿತ್ತು. ''ಕಾರ್ಮಿಕರ ಸಾಗಣೆ ಪ್ರಕ್ರಿಯೆ ಶಾಶ್ವತವಾಗಿ ಮುಂದುವರಿಸಲು ಸಾಧ್ಯವಿಲ್ಲ. 15 ದಿನದಲ್ಲಿ ವಲಸೆ ಕಾರ್ಮಿಕರನ್ನು ಊರುಗಳಿಗೆ ಕಳುಹಿಸಿಕೊಡಿ'' ಎಂದು ರಾಜ್ಯಗಳಿಗೆ ಸುಪ್ರೀಂಕೋರ್ಟ್ ತಿಳಿಸಿದೆ. ಜೊತೆಗೆ ಊರುಗಳಿಗೆ ವಾಪಸ್ ಆಗಿರುವ ''ವಲಸೆ ಕಾರ್ಮಿಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

   ದೇಶಾದ್ಯಂತ ಸುಮಾರು 1 ಕೋಟಿ ವಲಸೆ ಕಾರ್ಮಿಕರನ್ನು ಸ್ವಂತ ಊರುಗಳಿಗೆ ಕಳುಹಿಸಿಕೊಡಲಾಗಿದೆ. ಇದಕ್ಕಾಗಿ ಜೂನ್ 3ನೇ ತಾರೀಕಿನವರೆಗೂ 4200ಕ್ಕೂ ಹೆಚ್ಚು ಶ್ರಮಿಕ್ ರೈಲು ಸಂಚರಿಸಿದೆ ಎಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

   ''ಸುಮಾರು 28 ಲಕ್ಷ ಜನರು ರಾಜ್ಯಕ್ಕೆ ಮರಳಿದ್ದಾರೆ ಮತ್ತು ಅವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ'' ಎಂದು ಬಿಹಾರ ಸರ್ಕಾರಕ್ಕೆ ಹಾಜರಾದ ರಂಜಿತ್ ಕುಮಾರ್ ಸುಪ್ರೀಂ ಕೋರ್ಟ್ಗೆ ತಿಳಿಸಿದ್ದಾರೆ.

   ಈ ಸಂಬಂಧ ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಬಿಹಾರ್ ರಾಜ್ಯ ಸರ್ಕಾರಗಳು ಸುಪ್ರೀಂಕೋರ್ಟ್ನಲ್ಲಿ ಮಾಹಿತಿ ನೀಡಿದ್ದಾರೆ. ಇಲ್ಲಿಯವರೆಗೂ ಎಷ್ಟು ಜನ ವಲಸೆ ಕಾರ್ಮಿಕರನ್ನು ರಾಜ್ಯ ಕಳುಹಿಸಿಕೊಟ್ಟಿದೆ ಎಂದು ಅಂಕಿ ಅಂಶದ ವರದಿ ಸಲ್ಲಿಸಿದ್ದಾರೆ. ವಲಸೆ ಕಾರ್ಮಿಕರ ವಿಷಯಕ್ಕೆ ಸಂಬಂಧಪಟ್ಟಂತೆ ಈ ಪ್ರಕರಣದ ತೀರ್ಪನ್ನು ಜೂನ್ 9ಕ್ಕೆ ಕಾಯ್ದರಿಸಿದೆ.

   English summary
   Supreme Court says, "We propose 15 days time so that states can be permitted to effectuate the completion of transport".
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X