ಗುಂಪುಗೂಡಿ ನಿರುದ್ದೇಶವಾಗಿ ಹಲ್ಲೆ ಮಾಡಿದರೂ ಅಪರಾಧ: ಸುಪ್ರೀಂ ಕೋರ್ಟ್

ನವದೆಹಲಿ, ಜುಲೈ 3: ಗೋರಕ್ಷಣೆ ಪ್ರಕರಣದ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ಆದೇಶವೊಂದನ್ನು ನೀಡಿದೆ. ಗುಂಪಿನಿಂದ ಹಲ್ಲೆಗಳಾಗುವುದು ಕೂಡ ಅಪರಾಧವೇ. ಯಾವುದೇ ಉದ್ದೇಶ ಇಲ್ಲದೇ ಮಾಡಿದಂಥ ಅಪರಾಧವೇ ಆದರೂ ಅದು ಶಿಕ್ಷಾರ್ಹ ಎಂದು ತಿಳಿಸಿದೆ.

ಗೋ ರಕ್ಷಣೆ ಹೆಸರಿನಲ್ಲಿ ನಡೆಯುವ ಹಲ್ಲೆ- ಹತ್ಯೆ, ಮಕ್ಕಳ ಅಪಹರಣ ಮಾಡಲಾಗುತ್ತಿದೆ ಎಂಬ ಗುಮಾನಿ ಮೇಲೆ ಸಾರ್ವಜನಿಕರು ಹಲ್ಲೆ ನಡೆಸಿ, ಅಮಾಯಕರು ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗಿದೆ. ಇವುಗಳನ್ನೆಲ್ಲ ಗಮನದಲ್ಲಿ ಇಟ್ಟುಕೊಂಡು, ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ.

Supreme Court says mob lynching is a crime

ಇನ್ನು ಈ ರೀತಿ ಸಾರ್ವಜನಿಕರು ಗುಂಪಾಗಿ ಸೇರಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚು ಜನರ ಮೇಲೆ ಹಲ್ಲೆ ನಡೆಸಿ, ಹತ್ಯೆ ಮಾಡುವಂಥ ಕೃತ್ಯಗಳನ್ನು ತಡೆಯಲು ಎಲ್ಲ ರಾಜ್ಯ ಸರಕಾರಗಳು ಹಾಗೂ ಕೇಂದ್ರ ಸರಕಾರಕ್ಕೆ ಮಾರ್ಗದರ್ಶಿ ಸೂತ್ರಗಳನ್ನು ನೀಡಬೇಕಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶ ಸೇರಿದಂತೆ ನಾನಾ ರಾಜ್ಯಗಳಲ್ಲಿ ಈ ರೀತಿ ಕೃತ್ಯಗಳನ್ನು ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ ಅಭಿಪ್ರಾಯ ಮಹತ್ವ ಪಡೆದುಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+