ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ವರ್ಷ ಮರಾಠಾ ಕೋಟಾ ನೀಡುವಂತೆ ಇಲ್ಲ: ಸುಪ್ರೀಂಕೋರ್ಟ್ ಸೂಚನೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 9: ಪ್ರಸಕ್ತ ವರ್ಷ ಉದ್ಯೋಗ ಹಾಗೂ ಶಿಕ್ಷಣ ಪ್ರವೇಶಗಳಲ್ಲಿ ಮರಾಠಾ ಕೋಟಾ ಅನ್ವಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಬುಧವಾರ ಮಧ್ಯಂತರ ಆದೇಶ ಹೊರಡಿಸಿದೆ. ಈ ಪ್ರಕರಣದ ಹೆಚ್ಚಿನ ವಿಚಾರಣೆ ನಡೆಸಲು ವಿಶಾಲ ಪೀಠವೊಂದನ್ನು ರಚಿಸುವಂತೆ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಲಾಗಿದೆ.

ನ್ಯಾಯಮೂರ್ತಿ ಎಲ್. ನಾಗೇಶ್ವರ್ ರಾವ್ ನೇತೃತ್ವದ ನ್ಯಾಯಪೀಠ, ಸ್ನಾತಕೋತ್ತರ ವೈದ್ಯಕೀಯ ಪದವಿ ಕೋರ್ಸ್‌ಗಳಿಗೆ ಮರಾಠಾ ಕೋಟಾದಡಿ ಈಗಾಗಲೇ ಪಡೆದಿರುವ ಪ್ರವೇಶಗಳು ಅಬಾಧಿತವಾಗಿರದೆ ಎಂದು ಹೇಳಿದೆ.

ಒಳಮೀಸಲಾತಿಯಲ್ಲಿ ಕ್ಷೌರಿಕ ಸಮುದಾಯಕ್ಕೆ ಆದ್ಯತೆ ನೀಡಿ ಒಳಮೀಸಲಾತಿಯಲ್ಲಿ ಕ್ಷೌರಿಕ ಸಮುದಾಯಕ್ಕೆ ಆದ್ಯತೆ ನೀಡಿ

ಮರಾಠರಿಗೆ ಉದ್ಯೋಗ ಹಾಗೂ ಶೈಕ್ಷಣಿಕ ದಾಖಲಾತಿಗಳಲ್ಲಿ ಮೀಸಲಾತಿ ನೀಡುವ ಸಂಬಂಧ ಮಹಾರಾಷ್ಟ್ರ ಸರ್ಕಾರ ಕಳೆದ ವರ್ಷ ರೂಪಿಸಿದ್ದ ಕಾನೂನನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

 Supreme Court Says No Maratha Quota For College Admission, Jobs For This Year

ಶೇ 16 ಮೀಸಲಾತಿ ನೀಡುವುದು ಸಮರ್ಥನೀಯವಲ್ಲ ಎಂದಿದ್ದರೂ ಈ ಕಾನೂನನ್ನು ಬಾಂಬೆ ಹೈಕೋರ್ಟ್ 2019ರಲ್ಲಿ ಎತ್ತಿಹಿಡಿದಿತ್ತು. ಸರ್ಕಾರಿ ಸ್ವಾಮ್ಯದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶಾತಿ ವೇಳೆ ನೀಡುವ ಮೀಸಲಾತಿ ಶೇ 13 ಹಾಗೂ ಉದ್ಯೋಗಗಳಲ್ಲಿ ಶೇ 12ರ ಕೋಟಾವನ್ನು ಮೀರಬಾರದು ಎಂದು ಹೇಳಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು.

ಏನಿದು ಒಳಮೀಸಲಾತಿ ವಿವಾದ? ಇಲ್ಲಿದೆ ಸಂಪೂರ್ಣ ಮಾಹಿತಿ! ಏನಿದು ಒಳಮೀಸಲಾತಿ ವಿವಾದ? ಇಲ್ಲಿದೆ ಸಂಪೂರ್ಣ ಮಾಹಿತಿ!

2020ರ ಸೆ. 15ರವರೆಗೂ ಹೊಸದಾಗಿ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದ ಬಳಿಕ ಈ ಪ್ರಕರಣವನ್ನು ಸುಪ್ರೀಂಕೋರ್ಟ್ ಮುಂದೂಡಿತ್ತು.

English summary
The Supreme Court has said, there will be no maratha quota for jobs or college admission for now.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X