ಸ್ವಾಮಿ ನಿತ್ಯಾನಂದ ಪುರುಷತ್ವ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಆ.5: ವಿವಾದಿತ ಸ್ವಯಂ ಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ಅವರ ಪುರುಷತ್ವ ಪರೀಕ್ಷೆಗಾಗಿ ಸಿಐಡಿ ಪೊಲೀಸರು ನಿಗದಿ ಪಡಿಸಿದ ಮುಹೂರ್ತ ಮುರಿದು ಬಿದ್ದಿದೆ. ಸುಪ್ರೀಂಕೋರ್ಟ್ ಸೋಮವಾರ ನಿತ್ಯಾನಂದ ಅವರ ಪುರುಷತ್ವ ಪರೀಕ್ಷೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿ, ಮುಂದೂಡಿದೆ.

ನಿತ್ಯಾನಂದನ ವಿರುದ್ಧ ಸಿಐಡಿ ತನಿಖೆ ಹಾಗೂ ಪುರುಷತ್ವ ಪರೀಕ್ಷೆ ನಡೆಸುವಂತೆ ರಾಮನಗರದ ಸಿಜೆಎಂ ಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಆದರೆ ರಾಮನಗರ ಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಮತ್ತು ಇತರೆ ನಾಲ್ವರು ಭಕ್ತರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆ.6 ರಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಆದೇಶಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಿತ್ಯಾನಂದ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಿತ್ಯಾನಂದನ ಪುರುಷತ್ವ ಪರೀಕ್ಷೆಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ ಹಾಜರಾಗಿ ಪುರುಷತ್ವ ಪರೀಕ್ಷೆಗೆ ಒಳಗಾಗುವಂತೆ ಹೈಕೋರ್ಟ್​ ಆದೇಶಿಸಿತು. ಇದಿಗ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.

Supreme Court Stays HC order on Potency Test for Swami Nithyananda

ಆ.6ರಂದು ನಡೆಯಬೇಕಿದ್ದ ಪುರುಷತ್ವ ಪರೀಕ್ಷೆಗೆ ತಡೆಯಾಜ್ಞೆ ನೀಡಿರುವ ಸುಪ್ರೀಂಕೋರ್ಟ್, ರಾಮನಗರ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ. ಆಗಸ್ಟ್ 18ರಂದು ರಾಮನಗರ ನ್ಯಾಯಾಲಯದಲ್ಲಿ ನಡೆಯುವ ವಿಚಾರಣೆಗೆ ನಿತ್ಯಾನಂದ ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಆಗಸ್ಟ್ 18ರಂದು ನಿತ್ಯಾನಂದ ಅವರು ರಾಮನಗರ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ ಎಂದು ನಿತ್ಯಾನಂದ ಪರ ವಕೀಲರು ತಿಳಿಸಿದ್ದಾರೆ.

2011ರಿಂದಲೂ ವಿಚಾರಣೆ ಹಂತದಲ್ಲಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಆರೋಪಿಗಳು ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಅಡ್ಡಿಪಡಿಸುವುದು ಸರಿಯಲ್ಲ. ಪ್ರಕರಣದ ವಿಚಾರಣೆ ಪ್ರಗತಿಯಾಗಬೇಕು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ 1 ವಾರದೊಳಗೆ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಆದೇಶಿಸಿದ್ದು, ಒಂದು ವಾರದ ನಂತರ ನಿತ್ಯಾನಂದನ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ನಿತ್ಯಾನಂದ ಆಶ್ರಮವಾಸಿಯಾಗಿದ್ದ ಆರತಿ ಹಾಗೂ ಇನ್ನಿತರು ನೀಡಿದ್ದ ದೂರನ್ನು ಆಧಾರವಾಗಿಟ್ಟುಕೊಂಡು ಸಿಐಡಿ ಪೊಲೀಸರು ಸಿಆರ್ ಪಿಸಿ 53(ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹೈಕೋರ್ಟ್ ನ್ಯಾ. ವಿ ಜಗನ್ನಾಥನ್ ಅವರಿರುವ ನ್ಯಾಯಪೀಠ ನೀಡಿರುವ ಆದೇಶದ ಪ್ರಕಾರ ಸಿಐಡಿ ಪೊಲೀಸರು ಈ ಕೂಡಲೇ ನಿತ್ಯಾನಂದ ಸ್ವಾಮೀಜಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಬಹುದಾಗಿದೆ.[ಹೋರಾಟಗಾರರನ್ನು ಕೆಣಕಿದ ನಿತ್ಯಾನಂದ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+