ಅಲೋಕ್ ವರ್ಮಾ ಕಡ್ಡಾಯ ರಜೆ ವಿಚಾರ: ಇಂದು ಸುಪ್ರೀಂನಲ್ಲಿ ವಿಚಾರಣೆ
ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೆ ಕಡ್ಡಾಯ ರಜೆ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಇಂದು(ಅ.26) ಸುಪ್ರೀಂ ಕೋರ್ಟ್ ನಡೆಸಲಿದೆ.
ಜೊತೆಗೆ ತಗೆ ಕಡ್ಡಾಯ ರಜೆ ನೀಡಿ, 1986 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ನಾಗೇಶ್ವರ್ ರಾವ್ ಅವರನ್ನು ಹಂಗಾಮಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ತಡೆ ನೀಡುವಂತೆಯೂ ಅಲೋಕ್ ವರ್ಮಾ ಕೋರಿದ್ದಾರೆ. ಈ ಕುರಿತ ವಿಚಾರಣೆಯ್ನೂ ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ ಎಸ್ ಕೆ ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಈ ಅರ್ಜಿಯ ವಿಚಾರಣೆ ನಡೆಸಲಿದೆ.
ಸಿಬಿಐ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧ ಹೊರಿಸಲಾದ ಭ್ರಷ್ಟಾಚಾರ ಆರೋಪದ ಕುರಿತು ವಿಚಾರಣೆ ನಡೆಸುವಂತೆ ಕೋರಿ 'ಕಾಮನ್ ಕಾಸ್' ಎಂಬ ಎನ್ ಜಿಒ ವೊಂದು ಸಲ್ಲಿಸಿದ ಅರ್ಜಿಯ ವಿಚಾರಣೆಯೂ ಇಂದೇ ವಿಚಾರಣೆಗೊಳಪಡಲಿದೆ.
ಸಿಬಿಐ ನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಅಲೋಕ್ ವರ್ಮಾ ಅವರನ್ನು ಬುಧವಾರವಷ್ಟೇ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ. ಜೊತೆಗೆ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರ ವಿರುದ್ಧವೂ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅವರನ್ನೂ ಕಡ್ಡಾಯ ರಜೆಯ ಮೇಲೆ ಕಳಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications