ಆಂಧ್ರ ಸಿಎಂ ಸ್ಥಾನಕ್ಕೆ ಚ್ಯುತಿ?: ಜಗನ್ ಮೋಹನ್ ರೆಡ್ಡಿ ಭವಿಷ್ಯ ಇಂದು ನಿರ್ಧಾರ
ನವದೆಹಲಿ, ನವೆಂಬರ್ 16: ನ್ಯಾಯಮೂರ್ತಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಮೊಕದ್ದಮೆ ಎದುರಿಸುತ್ತಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಭವಿಷ್ಯ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಸುಪ್ರೀಂಕೋರ್ಟ್‌ನ ಎರಡನೇ ಹಿರಿಯ ನ್ಯಾಯಮೂರ್ತಿ ವಿರುದ್ಧ ಹಗರಣದ ಆರೋಪ ಮಾಡಿರುವುದಕ್ಕಾಗಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಿಚಾರಣೆಗೆ ಒಳಪಡಿಸಲಿದೆ.
ನ್ಯಾಯಮೂರ್ತಿ ಉಮೇಶ್ ಲಲಿತ್ ಅವರ ನೇತೃತ್ವದ ನ್ಯಾಯಪೀಠ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾಯಮೂರ್ತಿ ಎನ್‌ವಿ ರಮಣ ವಿರುದ್ಧ ತೀವ್ರ ಖಾರವಾದ ಮತ್ತು ಗಂಭೀರ ಆರೋಪಗಳನ್ನು ಮಾಡಿ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರಿಗೆ ಬಹಿರಂಗ ಪತ್ರ ಬರೆದಿದ್ದಕ್ಕಾಗಿ ಜಗನ್ ಅವರಿಂದ ವಿವರಣೆಯನ್ನು ಸಹ ಕೇಳಲಾಗಿದೆ. ಮುಂದೆ ಓದಿ.

ಜಗನ್ ವಿರುದ್ಧ 20ಕ್ಕೂ ಹೆಚ್ಚು ಪ್ರಕರಣ
ವಕೀಲರಾದ ಜಿಎಸ್ ಮಣಿ, ಪ್ರದೀಪ್ ಕುಮಾರ್ ಯಾದವ್ ಮತ್ತು ಎಸ್‌ಕೆ ಸಿಂಗ್ ಜಂಟಿಯಾಗಿ ಈ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದೆ. ಅಕ್ರಮ ಹಣವರ್ಗಾವಣೆ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅತ್ಯಂತ ಗಂಭೀರ ಸ್ವರೂಪದ 20ಕ್ಕೂ ಹೆಚ್ಚು ಅಪರಾಧ ಪ್ರಕರಣಗಳನ್ನು ಜಗನ್ ಮೋಹನ್ ಎದುರಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ಸ್ಥಾನದಿಂದ ಕಿತ್ತುಹಾಕಿ
ಸುಪ್ರೀಂಕೋರ್ಟ್‌ನಲ್ಲಿ ಎರಡನೇ ಅತ್ಯಂತ ಹಿರಿಯ ನ್ಯಾಯಮೂರ್ತಿಗಳಾಗಿರುವ ಎನ್‌ವಿ ರಮಣ ವಿರುದ್ಧ ಯಾವುದೇ ಆಧಾರಗಳಿಲ್ಲದೆ ಸಾರ್ವಜನಿಕವಾಗಿ ಮತ್ತು ಮಾಧ್ಯಮಗಳಲ್ಲಿ ಆ ಮಟ್ಟದ ಆರೋಪಗಳನ್ನು ಮಾಡಿರುವ ಜಗನ್ ಮೋಹನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ರೆಡ್ಡಿ ಅವರನ್ನು ಸಿಎಂ ಸ್ಥಾನದಿಂದ ತೆಗೆಯಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಕೂಡಲೇ ನಿರ್ಧಾರ ಮಾಡಬೇಕು ಎಂದು ಕೋರಲಾಗಿದೆ.

ವೈಯಕ್ತಿಕ ಲಾಭಕ್ಕಾಗಿ ಆರೋಪ
'ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದು ತಮ್ಮ ಅಧಿಕಾರ ಮತ್ತು ಹುದ್ದೆ ಬಳಸಿಕೊಂಡು ನ್ಯಾಯಾಲಯದಿಂದ ವೈಯಕ್ತಿಕ ಪ್ರಯೋಜನ ಪಡೆದುಕೊಳ್ಳಲು ಅವರು ಉನ್ನತ ನ್ಯಾಯಾಲಯದ ಹಾಲಿ ನ್ಯಾಯಮೂರ್ತಿಗಳ ವಿರುದ್ಧ ಬಹಿರಂಗವಾಗಿ ಸುಳ್ಳು, ಅಪಮಾನಕರ, ಅಸ್ಪಷ್ಟ ಮತ್ತು ರಾಜಕೀಯ ಆರೋಪಗಳನ್ನು ಮಾಡಿದ್ದಾರೆ. ಇದು ಸಾರ್ವಜನಿಕರ ಮನಸಿನಲ್ಲಿ ನ್ಯಾಯಾಂಗದ ಕುರಿತು ಇರುವ ಗೌರವಕ್ಕೆ ಧಕ್ಕೆ ತರುವಂತಿದೆ' ಎಂದು ಆರೋಪಿಸಲಾಗಿದೆ.

ತನಿಖಾ ತಂಡ ರಚನೆಗೆ ಮನವಿ
ನ್ಯಾಯಮೂರ್ತಿ ಎನ್‌ವಿ ರಮಣ ಅವರ ಕುರಿತು ಜಗನ್ ಮಾಡಿರುವ ಅಸ್ಪಷ್ಟ ಆರೋಪಗಳ ಬಗ್ಗೆ ಸೂಕ್ತ ನ್ಯಾಯಾಂಗ ತನಿಖೆ ನಡೆಸಲು ಸುಪ್ರೀಂಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ಆಂತರಿಕ ಸಮಿತಿಯನ್ನು ರಚಿಸುವಂತೆ ಅಥವಾ ಸಿಬಿಐ ಸೇರಿದಂತೆ ಯಾವುದೇ ತನಿಖಾ ಸಂಸ್ಥೆಯ ಮೂಲಕ ವಿವರವಾದ ತನಿಖೆ ನಡೆಸುವಂತೆ ಕೋರಲಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications