ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಮಸೂದೆ ವಿರುದ್ಧ ರೈತರ ಪ್ರತಿಭಟನೆ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ

|
Google Oneindia Kannada News

ನವದೆಹಲಿ, ಜನವರಿ 11: ಕೃಷಿ ಕಾನೂನಿಗೆ ಸಂಬಂಧಿಸಿದ ರೈತರ ಪ್ರತಿಭಟನೆ ಕುರಿತಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ವಿಚಾರಣೆ ನಡೆಸಲಿದೆ. ಮೂರು ಹೊಸ ಕೃಷಿ ಕಾನೂನುಗಳನ್ನು ಸರ್ಕಾರ ರದ್ದುಪಡಿಸುವವರೆಗೂ ತಮ್ಮ ಪ್ರತಿಭಟನೆಯನ್ನು ಮುಂದುವರಿಸುವುದಾಗಿ ಪ್ರತಿಭಟನಾಕಾರಿ ರೈತ ಸಂಘಟನೆಗಳು ಸ್ಪಷ್ಟಪಡಿಸಿವೆ. ಇಂತಹ ಪರಿಸ್ಥಿತಿಯಲ್ಲಿ, ಇಂದಿನ ವಿಚಾರಣೆಯಲ್ಲಿ ದೇಶದ ಗಮನ ಸಳೆದಿದೆ.

ಹೊಸ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ಮತ್ತು ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಚಳವಳಿಗೆ ಸಂಬಂಧಿಸಿದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ಹಲವಾರು ಅರ್ಜಿಗಳನ್ನು ವಿಚಾರಣೆ ನಡೆಸಲಿದೆ.

ಕೇಂದ್ರ ಸರ್ಕಾರದಲ್ಲಿ ರೈತರನ್ನು ಪ್ರತಿನಿಧಿಸುವವರು ಯಾರೂ ಇಲ್ಲ: ಸಚಿನ್ ಪೈಲಟ್ಕೇಂದ್ರ ಸರ್ಕಾರದಲ್ಲಿ ರೈತರನ್ನು ಪ್ರತಿನಿಧಿಸುವವರು ಯಾರೂ ಇಲ್ಲ: ಸಚಿನ್ ಪೈಲಟ್

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಸುಮಾರು 50 ದಿನಗಳಿಂದ ನಡೆಯುತ್ತಿದೆ. ಜನವರಿ 7 ರಂದು ಕೇಂದ್ರ ಮತ್ತು ರೈತ ಸಂಘಟನೆಗಳ ನಡುವಿನ ಎಂಟನೇ ಸುತ್ತಿನ ಮಾತುಕತೆಯಲ್ಲಿ ಇದಕ್ಕೆ ಯಾವುದೇ ಪರಿಹಾರವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಜನವರಿ 15 ರಂದು ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ ಮತ್ತೆ ಸಭೆ ನಡೆಯುತ್ತಿದೆ. ಈ ಮಧ್ಯೆ, ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇಂದು ಮುಖ್ಯವಾಗಿದೆ. ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎಸ್‌.ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಸೋಮವಾರ ನಡೆಸಲಿದೆ.

Supreme Court To Hear Pleas On Farm Laws On Monday

ಹಿಂದಿನ ವಿಚಾರಣೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ, ಸರ್ಕಾರ ಮತ್ತು ರೈತ ಸಂಘಟನೆಗಳ ನಡುವಿನ ಎಲ್ಲಾ ವಿಷಯಗಳು ಚರ್ಚೆಯಲ್ಲಿವೆ ಎಂದು ಸರ್ಕಾರ ಹೇಳಿದೆ. ಶೀಘ್ರದಲ್ಲೇ ಸರ್ಕಾರ ಮತ್ತು ರೈತರ ನಡುವೆ ಸಂಧಾನಗೊಳ್ಳುವ ಸಾಧ್ಯತೆಯಿದೆ ಎಂದು ಸರ್ಕಾರ ಹೇಳಿದೆ.

ಜನವರಿ 7 ರಂದು ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ನಡೆದ ಎಂಟನೇ ಸುತ್ತಿನ ಮಾತುಕತೆಯಲ್ಲಿ ವಿವಾದಾತ್ಮಕ ಕಾನೂನನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರಾಕರಿಸಿತು. ಅದೇ ಸಮಯದಲ್ಲಿ, ಇತರ ರೈತ ಮುಖಂಡರು ತಮ್ಮ ಕೊನೆಯ ಉಸಿರಾಟದವರೆಗೂ ಹೋರಾಡುತ್ತೇವೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

English summary
The Supreme Court is scheduled to hear on Monday a clutch of pleas challenging the new farm laws as well as the ones raising issues related to the ongoing agitation at Delhi borders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X