ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking:ಹಿಜಾಬ್ ಆರ್ಜಿ ವಿಚಾರಣೆಗೆ ಪೀಠ ಸ್ಥಾಪನೆ-ಸುಪ್ರೀಂ ಕೋರ್ಟ್

|
Google Oneindia Kannada News

ನವದೆಹಲಿ, ಆ.02: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಗೆ ಪೀಠವನ್ನು ಸ್ಥಾಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ನ್ಯಾಯಾಧೀಶರಲ್ಲಿ ಒಬ್ಬರು ಅನಾರೋಗ್ಯದಿಂದಿರುವ ಕಾರಣ ವಿಳಂಬವಾಗುತ್ತಿದೆ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠದ ಮುಂದೆ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹಿರಿಯ ವಕೀಲ ಮೀನಾಕ್ಷಿ ಅರೋರಾ ಪ್ರಸ್ತಾಪಿಸಿದರು.

ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮಾರ್ಚ್‌ನಲ್ಲಿ ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಅವು ಇನ್ನೂ ಪೂರ್ಣಗೊಂಡಿಲ್ಲ. ವಿಚಾರಣೆಗೆ ಪಟ್ಟಿಮಾಡಬೇಕು ಎಂದು ಒತ್ತಾಯಿಸಿದರು.

Supreme Court To Set Up Bench To Hear Pleas On Hijab

ಇದಕ್ಕೆ ಉತ್ತರಿಸಿರುವ ಪೀಠ "ನಾನು ಪೀಠವನ್ನು ರಚಿಸುತ್ತೇನೆ, ಒಬ್ಬ ನ್ಯಾಯಾಧೀಶರು ಅನಾರೋಗ್ಯದ ಕಾರಣ ವಿಳಂಬವಾಗುತ್ತಿದೆ. ನ್ಯಾಯಾಧೀಶರು ಆರೋಗ್ಯವಾಗಿದಿದ್ದರೇ ವಿಷಯವು ವಿಚಾರಣೆಗೆ ಬರುತ್ತಿತ್ತು" ಎಂದು ಹೇಳಿದರು.

ಹಿಜಾಬ್ ವಿಷಯದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನಡೆಸಲು ಜುಲೈ 13 ರಂದು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿತ್ತು.

Supreme Court To Set Up Bench To Hear Pleas On Hijab

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಕುರಿತು ರಾಜ್ಯದಲ್ಲಿ ದೊಡ್ಡ ವಿವಾದವೇ ಉಂಟಾಗಿತ್ತು. ಈ ಬಗ್ಗೆ ಹಿಜಾಬ್ ಧರಿಸುವುದು ಸಂವಿಧಾನದ 25 ನೇ ವಿಧಿಯ ಅಡಿಯಲ್ಲಿ ರಕ್ಷಿಸಬಹುದಾದ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿತ್ತು. ತೀರ್ಪಿನ ವಿರುದ್ಧ ಹಲವಾರು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿವೆ.

ಉಡುಪಿಯ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

English summary
Supreme Court To Set Up Bench To Hear Pleas Against Karnataka High Court Order On Hijab.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X