ಕತುವಾ ಪ್ರಕರಣ ಪಠಾಣ್ ಕೋಟ್ ಕೋರ್ಟಿಗೆ ವರ್ಗಾವಣೆ: ಸುಪ್ರೀಂ

ನವದೆಹಲಿ, ಮೇ 07: ದೇಶದ ಗಮನವನ್ನು ತನ್ನತ್ತ ಸೆಳೆದ ಕತುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಪಂಜಾಬಿನ ಪಠಾಣ್ ಕೋಟ್ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಪ್ರಕರಣವನ್ನು ಜಮ್ಮು ಕಾಶ್ಮೀರದಿಂದ ಆಚೆ ವಿಚಾರಣೆ ನಡೆಸಬೇಕು ಎಂಬ ಕೂಗು ಕೇಳಿಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಇಂದು(ಮೇ 07) ಈ ಆದೇಶ ಪ್ರಕಟಿಸಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠ ಈ ಆದೇಶ ಹೊರಡಿಸಿದ್ದು, ಪ್ರಕರಣದ ಮುಂದಿ ವಿಚಾರಣೆ ಜುಲೈ 9 ರಂದು ನಡೆಯಲಿದೆ.

ಜಮ್ಮು ಕಾಶ್ಮೀರದ ಕತುವಾ ಎಂಬಲ್ಲಿ ಜನವರಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಹಲವು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಆಕೆಯನ್ನು ದೇವಾಲಯದಲ್ಲಿ ಕೂಡಿಡಲಾಗಿತ್ತು ಎಂದೂ ಆರೋಪಿಸಲಾಗಿದೆ. ನಂತರ ಆಕೆಯನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.

Supreme Court transfers Kathua case to Pathankot Court

ಈ ಪ್ರಕರಣ ದೇಶದಾದ್ಯಂತ ಆಕ್ರೋಶ ಹುಟ್ಟಿಸಿದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ ಪೋಕ್ಸೋ (Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತಂದಿದೆ. 12 ವರ್ಷ ಅಥವಾ ಅದಕ್ಕಿಂತ ಕೆಳಗಿನ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+