ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಡ್ತಿ ಮೀಸಲು: ಎಸ್‌ಸಿ ಎಸ್‌ಟಿ ನೌಕರರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂಕೋರ್ಟ್

|
Google Oneindia Kannada News

ನವದೆಹಲಿ, ಮೇ 10: ರಾಜ್ಯ ಸರ್ಕಾರಿ ನೌಕರಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಸರ್ಕಾರದ ಕಾಯ್ದೆಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

ಇದರಿಂದ ಜೇಷ್ಠತೆ ಆಧಾರದಲ್ಲಿ ಬಡ್ತಿಯಲ್ಲಿ ಮೀಸಲಾತಿ ಬಯಸಿರುವ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ನೌಕರರಿಗೆ ಸಂತಸ ನೀಡಿದೆ. ಆದರೆ, ಸೇವಾ ಹಿರಿತನದ ಆಧಾರದಲ್ಲಿ ಬಡ್ತಿ ಪಡೆದುಕೊಳ್ಳುವ ಸಾಮಾನ್ಯ ವರ್ಗದ ನೌಕರರಿಗೆ ಹಿನ್ನಡೆಯುಂಟಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟಎಸ್‌ಸಿ ಎಸ್‌ಟಿ ಬಡ್ತಿ ಮೀಸಲಾತಿಗೆ ಅನುಮೋದನೆ ನೀಡಿದ ಸಚಿವ ಸಂಪುಟ

ಎಸ್‌ಸಿ, ಎಸ್‌ಟಿ ಬಡ್ತಿ ಮೀಸಲಾಯಿ ಕಾಯ್ದೆಯ ಅನುಷ್ಠಾನಕ್ಕೆ ಫೆಬ್ರವರಿಯಲ್ಲಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಕಾಯ್ದೆಗೆ ರಾಷ್ಟ್ರಪತಿಗಳ ಅನುಮೋದನೆ ಕೂಡ ದೊರಕಿತ್ತು. ಆದರೆ, ಇದನ್ನು ಪ್ರಶ್ನಿಸಿ ಬಿ.ಕೆ. ಪವಿತ್ರಾ ಹಾಗೂ ಇತರರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ತೀರ್ಪಿಗೆ ಅನುಗುಣವಾಗಿ ಕಾಯ್ದೆಯನ್ನು ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿತ್ತು. ಈಗ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರದ ಕಾಯ್ದೆಯನ್ನು ಎತ್ತಿ ಹಿಡಿದಿದೆ.

ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದು: ಕರ್ನಾಟಕಕ್ಕೆ ಸುಪ್ರೀಂ ಆದೇಶ ಬಡ್ತಿಯಲ್ಲಿ ಎಸ್ಸಿ, ಎಸ್ಟಿ ಮೀಸಲಾತಿ ರದ್ದು: ಕರ್ನಾಟಕಕ್ಕೆ ಸುಪ್ರೀಂ ಆದೇಶ

ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆಗೆ ಫೆ. 27ರಂದು ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಬಡ್ತಿ ಮೀಸಲಾತಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೊನೆಯ ಹಂತದ್ದಲ್ಲಿದೆ. ಈ ಕುರಿತು ತೀರ್ಪು ನೀಡುವ ಮುನ್ನವೇ ರಾಜ್ಯ ಸರ್ಕಾರ ಕಾಯ್ದೆ ಜಾರಿಗೆ ತಂದಿರುವುದು ಸರಿಯಲ್ಲ ಎಂದು ನ್ಯಾಯಪೀಠ ಹೇಳಿತ್ತು.

ಖಾಸಗಿ ಕ್ಷೇತ್ರಗಳಲ್ಲಿಯೂ SC/ST ಮೀಸಲಾತಿಗೆ ಮುಂದಾದ ಕೇಂದ್ರ?ಖಾಸಗಿ ಕ್ಷೇತ್ರಗಳಲ್ಲಿಯೂ SC/ST ಮೀಸಲಾತಿಗೆ ಮುಂದಾದ ಕೇಂದ್ರ?

ಈ ಕಾಯ್ದೆ ಜಾರಿಯಿಂದ ಸರ್ಕಾರಿ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 6,000 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಬಡ್ತಿಯಲ್ಲಿ ಜೇಷ್ಠತೆ ಆಧಾರದಲ್ಲಿ ಬಡ್ತಿ ಪಡೆಯಲು ಅನುಕೂಲವಾಗಲಿದೆ.

2002ರ ಬಡ್ತಿ ಮೀಸಲಾತಿ ಕಾಯ್ದೆ

2002ರ ಬಡ್ತಿ ಮೀಸಲಾತಿ ಕಾಯ್ದೆ

ಮೀಸಲಾತಿ ಅಡಿ ಬಡ್ತಿ ಪಡೆದಿರುವ ಎಸ್‌ಟಿ ಎಸ್‌ಟಿ ನೌಕರರಿಗೆ ಸಾಂದರ್ಭಿಕ ಹಿರಿತನ ನೀಡುವ ಸಲುವಾಗಿ 2002ರಲ್ಲಿ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ಮೀಸಲಾತಿ ಆಧಾರಿತ ಬಡ್ತಿ ನೌಕರರ ಜೇಷ್ಠತಾ ನಿರ್ಣಯ ಕಾಯ್ದೆಯನ್ನು ರೂಪಿಸಿತ್ತು. ಈ ಕಾಯ್ದೆಯನ್ನು ಎಂ. ನಾಗರಾಜ್ ಮತ್ತು ಅನೇಕರು ಆ ವರ್ಷವೇ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಈ ಅರ್ಜಿಯ ಕುರಿತು 2006ರಲ್ಲಿ ತೀರ್ಪು ನೀಡಿದ ಸುಪ್ರೀಂಕೋರ್ಟ್, 1955ರ 77ನೇ ಸಂವಿಧಾನ ತಿದ್ದುಪಡಿ ಕಾಯ್ದೆ, 2000ದ 81ನೇ ತಿದ್ದುಪಡಿ ಕಾಯ್ದೆ, 2000ದ 82ನೇ ಸಂವಿಧಾನ ತಿದ್ದುಪಡಿ ಕಾಯ್ದೆ ಮತ್ತು 2001ರ 85ನೇ ಸಂವಿಧಾನ ತಿದ್ದುಪಡಿ ಕಾಯ್ದೆಗಳ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿ ಹಿಡಿದಿತ್ತು.

ಕಾಯ್ದೆ ಪರ ಹೈಕೋರ್ಟ್ ತೀರ್ಪು

ಕಾಯ್ದೆ ಪರ ಹೈಕೋರ್ಟ್ ತೀರ್ಪು

ಆಯಾ ರಾಜ್ಯಗಳಲ್ಲಿನ ಬಡ್ತಿ ಮೀಸಲಾತಿ ಕಾಯ್ದೆಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸಂಬಂಧಿಸಿದ ಹೈಕೋರ್ಟ್‌ಗಳಲ್ಲಿ ವಿಚಾರಣೆ ನಡೆಸುವಂತೆ ವಾಪಸ್ ಕಳುಹಿಸಲಾಗಿತ್ತು. 2002ರ ಕರ್ನಾಟಕ ಸರ್ಕಾರದ ಕಾಯ್ದೆಯನ್ನು ಎತ್ತಿ ಹಿಡಿದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಬಿ.ಕೆ. ಪವಿತ್ರಾ ಹಾಗೂ ಇತರರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಕಾಯ್ದೆಯಿಂದ ಏನಾಗುತ್ತದೆ?

ಕಾಯ್ದೆಯಿಂದ ಏನಾಗುತ್ತದೆ?

ಈ ಕಾಯ್ದೆಯ ಪ್ರಕಾರ ನೀಡುವ ಕ್ಷಿಪ್ರ ಬಡ್ತಿಯಲ್ಲಿ ನೌಕರರು 45ನೆಯ ವಯಸ್ಸಿಗೆ ಮೂರನೇ ಹಂತ ಮತ್ತು ಎರಡು-ಮೂರು ವರ್ಷದ ಬಳಿಕ ನಾಲ್ಕು, ಐದು ಹಾಗೂ ಆರನೇ ಹಂತದ ಪದೋನ್ನತಿ ಪಡೆಯುತ್ತಾರೆ. ಆದರೆ, ಸಾಮಾನ್ಯ ವರ್ಗದ ನೌಕರರು 56ನೇ ವಯಸ್ಸಿಗೆ ಮೂರನೇ ಹಂತ ತಲುಪುತ್ತಾರೆ. ನಾಲ್ಕನೇ ಹಂತ ತಲುಪುವ ಮುನ್ನವೇ ಅವರು ನಿವೃತ್ತಿ ಹೊಂದುತ್ತಾರೆ. ಇದು ತಾರತಮ್ಯಕ್ಕೆ ಕಾರಣವಾಗುತ್ತದೆ. ಇದರಿಂದ ಮೀಸಲಾತಿ ಪ್ರಾತಿನಿಧ್ಯವು ಶೇ 36ರಿಂದ ಶೇ 100ರವರೆಗೆ ಹೆಚ್ಚುತ್ತದೆ ಎಂದು ಅರ್ಜಿದಾರರು ವಾದಿಸಿದ್ದರು.

ಜೇಷ್ಠತಾ ಪಟ್ಟಿ ತಯಾರಿಗೆ ಸೂಚನೆ

ಜೇಷ್ಠತಾ ಪಟ್ಟಿ ತಯಾರಿಗೆ ಸೂಚನೆ

ಬಡ್ತಿ ಮೀಸಲಾತಿ 2002ರ ಕಾಯ್ದೆಯನ್ನು 2017ರ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ರದ್ದುಪಡಿಸಿತ್ತು. ಹೊಸ ಜೇಷ್ಠತಾ ಪಟ್ಟಿಯನ್ನು ಮೂರು ತಿಂಗಳ ಒಳಗೆ ಸಿದ್ಧಪಡಿಸಬೇಕು ಎಂದು ಆದೇಶ ಹೊರಡಿಸಿತ್ತು. ಹೊಸ ನಿಯಮ ಜಾರಿಗೊಳಿಸುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿತ್ತು. ಇದಕ್ಕೆ ರಾಜ್ಯ ಸರ್ಕಾರ ಕೂಡ ಮುಚ್ಚಳಿಕೆ ಬರೆದುಕೊಟ್ಟಿತ್ತು.

ಸಚಿವ ಸಂಪುಟ ಅನುಮೋದನೆ

ಸಚಿವ ಸಂಪುಟ ಅನುಮೋದನೆ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಡ್ತಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಅದಕ್ಕೆ ರಾಷ್ಟ್ರಪತಿಗಳ ಅನುಮೋದನೆಯೂ ದೊರಕಿತ್ತು. ಆದರೆ, ಅದನ್ನು ಜಾರಿ ಮಾಡಲು ಮುಂದಾಗಿರಲಿಲ್ಲ. 2019ರ ಜನವರಿಯಲ್ಲಿ ಸಮ್ಮಿಶ್ರ ಸರ್ಕಾರದ ರಾಜ್ಯ ಸಚಿವ ಸಂಪುಟ ಈ ಕಾಯ್ದೆಯ ಜಾರಿಗೆ ಅನುಮೋದನೆ ನೀಡಿತ್ತು. ಈ ಕಾಯ್ದೆಯ ಜಾರಿಗೆ ಜೇಷ್ಠತಾ ಪಟ್ಟಿ ತಯಾರಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಲು ಸರ್ಕಾರ ಉದ್ದೇಶಿಸಿತ್ತು.

ಎಸ್‌ಸಿ ಎಸ್‌ಟಿಗಳಿಗೆ ಸಾಮಾಜಿಕ ನ್ಯಾಯ

ನಾನು ಮುಖ್ಯಮಂತ್ರಿಯಾಗಿದ್ದಾಗ ಎಸ್‌ಸಿ/ಎಸ್‌ಟಿ ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಸಂಬಂಧ ನಮ್ಮ ಸರ್ಕಾರ ರೂಪಿಸಿದ್ದ ಕಾಯ್ದೆಯನ್ನು ಎತ್ತಿಹಿಡಿದ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದು ಹಿಂದುಳಿದ ಸಮುದಾಯಗಳಿಂದ ಬಂದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸುತ್ತದೆ ಮತ್ತು ಮಹತ್ವದ ಹುದ್ದೆಗಳನ್ನು ನೀಡಿ ತಾರತಮ್ಯವನ್ನು ತಗ್ಗಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರಿ ಗೆಲುವು ಎಂದ ಇಂದಿರಾ ಜೈ ಸಿಂಗ್

ಎಸ್‌ಸಿ ಎಸ್‌ಟಿ ಸಮುದಾಯಕ್ಕೆ ಭಾರಿ ಗೆಲುವು. ನ್ಯಾಯಮೂರ್ತಿಗಳಾದ ಲಲಿತ್ ಮತ್ತು ಡಿವೈ ಚಂದ್ರಚೂಡ್ ಅವರನ್ನು ಒಳಗೊಂಡ ನ್ಯಾಯಪೀಠವು ಜೇಷ್ಠತೆಯ ಆಧಾರದಲ್ಲಿ ಬಡ್ತಿ ಮೀಸಲಾತಿ ನೀಡುವುದನ್ನು ಎತ್ತಿ ಹಿಡಿದಿದೆ ಎಂದು ಹಿರಿಯ ವಕೀಲೆ ಇಂದಿರಾ ಜೈ ಸಿಂಗ್ ಟ್ವೀಟ್ ಮಾಡಿದ್ದಾರೆ.

English summary
The Supreme Court on Friday upholds the SC ST reservation in promotion act of Karnataka State Government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X