LIVE: ಸಿಬಿಐ ಅಲೋಕ್ ವರ್ಮಾ ವಿವಾದ: ತೀರ್ಪಿನಲ್ಲಿ ಕೇಂದ್ರಕ್ಕೆ ಸುಪ್ರೀಂ ತರಾಟೆ
ನವದೆಹಲಿ, ಜನವರಿ 08: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅವರು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಇಂದು ಪ್ರಕಟಿಸಿದೆ.
ಕೇಂದ್ರ ತನಿಖಾ ದಳ(ಸಿಬಿಐ) ವಿರುದ್ಧ ಕೇಳಿಬಂದ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿತ್ತು.

ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಇಂದು ರಜೆಯ ಮೇಲಿರುವ ಕಾರಣ ಈ ಪ್ರಕರಣದ ತೀರ್ಪನ್ನು ನ್ಯಾ.ಸಂಜಯ್ ಕಿಶನ್ ಕೌಲ್ ಅವರು ಪ್ರಕಟಿಸಲಿದ್ದಾರೆ.
ಅಲೋಕ್ ವರ್ಮಾ ಪ್ರಕರಣದ ಕುರಿತಂತೆ ಕ್ಷಣ ಕ್ಷಣದ ಮಾಹಿತಿಯನ್ನು ಒನ್ ಇಂಡಿಯಾ ಕನ್ನಡ ನೀಡಲಿದೆ.
ಅಲೋಕ್ ವರ್ಮಾ ಅವರು ಸಿಬಿಐ ಮುಖ್ಯಸ್ಥರಾಗಿ ಮುಂದುವರಿಯಬಹುದು. ಆದರೆ ಸದ್ಯಕ್ಕೆ ಯಾವುದೇ ಮಹತ್ವದ ನಿರ್ಣಯ ತೆಗೆದುಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ಅಲೋಕ್ ವರ್ಮಾ ಅವರನ್ನು ಹುದ್ದೆಯಿಂದ ಕೆಳಗಿಳಿಸುವ ಮುನ್ನ ಸಿಜೆಐ, ಪ್ರಧಾನ ಮಂತ್ರಿ ಮತ್ತು ವಿರೋಧ ಪಕ್ಷದ ನಾಯಕನನ್ನು ಒಳಗೊಂಡ ಆಯ್ಕೆ ಸಮಿತಿಯಲ್ಲಿ ಚರ್ಚೆ ನಡೆಯಬೇಕಿತ್ತು: ಸುಪ್ರೀಂ ಕೋರ್ಟ್
ಕೇಂದ್ರ ವಿಚಕ್ಷಣ ದಳದ ಅ.23 ರ ಆದೇಶವನ್ನು ಪಕ್ಕಕ್ಕೆ ಸರಿಸಿ ಅಲೋಕ್ ವರ್ಮಾ ಅವರನ್ನು ಮತ್ತೆ ಸಿಬಿಐ ನಿರ್ದೇಶಕರಾಗಿ ಮುಂದುವರಿಯುವಂತೆ ಆದೇಶಿಸಿದ ಸುಪ್ರೀಂ ಕೋರ್ಟ್
ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳಿಸಿದ ಕೇಂದ್ರ ಸರ್ಕಾರದ ಆದೇಶ ತಪ್ಪು ಎಂದು ಸುಪ್ರೀಂ ಕೋರ್ಟ್
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಲು ಕೇಂದ್ರ ವಿಚಕ್ಷಣಾ ದಳ(CVC)ಕ್ಕೆ ಸುಪ್ರೀಂ ಆದೇಶಿಸಿತ್ತು. ಸಿವಿಸಿ ಸಲ್ಲಿಸಿದ ವರದಿಗೆ ಪ್ರತಿಕ್ರಿಯೆ ನೀಡಲು ಅಲೋಕ್ ವರ್ಮಾ ಅವರಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.
ಸಿಬಿಐ ಬೆಳವಣಿಗೆಯ ನಂತರ ವರ್ಮಾ ಮತ್ತು ಆಸ್ಥಾನ ಇಬ್ಬರನ್ನೂ ಕೇಂದ್ರ ಸರ್ಕಾರ ಕಡ್ಡಾಯ ರಜೆಯ ಮೇಲೆ ಕಳಿಸಿ, ನಾಗೇಶ್ವರ್ ರಾವ್ ಎಂಬುವವರನ್ನು ಹಂಗಾಮಿ ನಿರ್ದೇಶಕರನ್ನಾಗಿ ನೇಮಿಸಿತ್ತು.
ಹೈದರಾಬಾದ್ ಮೂಲದ ಉದ್ಯಮಿಯೊಬ್ಬರಿಂದ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಲಂಚ ಸ್ವೀಕರಿಸಿದ್ದರು ಎಂದು ನಿರ್ದೇಶಕ ಅಲೋಕ್ ವರ್ಮಾ ದೂರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಜಸ್ಟೀಸ್ ರಂಜನ್ ಗೊಗೊಯ್, ಜಸ್ಟೀಸ್ ಎಸ್ ಕೆ ಕೌಲ್ ಮತ್ತು ಕೆಎಂ ಜೋಸೆಫ್ ಅವರಿದ್ದ ನ್ಯಾಯಪೀಠ
ಅರ್ಜಿಯ ವಿಚಾರಣೆಯನ್ನು ನ.20 ರಂದು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್, ನಂತರ ನ.29 ಕ್ಕೆ ಮುಂದೂಡಿತ್ತು. ಡಿ.6ರಂದು ವಿಚಾರಣೆ ನಡೆಸಲಾಗಿತ್ತು.












Click it and Unblock the Notifications