ಸುಪ್ರೀಂ ನಿಂದ ಮತ್ತೊಂದು ಮಹತ್ವದ ತೀರ್ಪು: RTI ಅಡಿ CJI ಕಚೇರಿ
ನವದೆಹಲಿ, ನವೆಂಬರ್ 13: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ(CJI)ಗಳ ಕಚೇರಿ ಮಾಹಿತಿ ಹಕ್ಕು(ಆರ್ ಟಿಐ) ಕಾಯ್ದೆಯಡಿ ಬರುತ್ತದೆಯೇ, ಇಲ್ಲವೇ ಎಂಬ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿದೆ.
ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀ ಕೋರ್ಟ್ ಹೇಳಿದೆ.

ಈ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪಂಚಸದಸ್ಯ ಪೀಠ ಇಂದು ಮಧ್ಯಾಹ್ನ 2 ಗಂಟೆಗೆ ತೀರ್ಪು ನೀಡಿದ್ದು, ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.
ಸಿಜೆಐ ಸಾರ್ವಜನಿಕ ಆಸ್ತಿಯಾಗಿದ್ದು, ಅವರ ಕಚೇರಿ ಆರ್ ಟಿಐ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯವು ನ್ಯಾಯಾಧೀಶರ ಖಾಸಗಿ ಹಕ್ಕು ಅಲ್ಲ. ಅದು ಅವರ ಮೇಲೆ ಸಂವಿಧಾನವು ಹೊರಿಸಿರುವ ಗುರುತರ ಜವಾಬ್ದಾರಿ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.
ಈ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ರಂಜನ್ ಗೊಗೊಯ್, ನ್ಯಾ.ಎನ್ ವಿ ರಮಣ, ನ್ಯಾ.ಡಿವೈ ಚಂದ್ರಚೂಡ್, ನ್ಯಾ. ದೀಪಕ್ ಗುಪ್ತ ಹಾಗೂ ನ್ಯಾ.ಸಂಜೀವ್ ಖನ್ನ ಅವರಿದ್ದ ಪೀಠ, ಈ ಮಹತ್ವದ ಆದೇಶ ನೀಡಿದೆ.
2017 ರಲ್ಲಿ ಆರ್ ಟಿಐ ಕಾರ್ಯಕರ್ತ ಸುಭಾಷ್ ಚಂದ್ರ ಅಗರವಾಲ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿವಿವರದ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿ, ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.












Click it and Unblock the Notifications