ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸುಪ್ರೀಂ ನಿಂದ ಮತ್ತೊಂದು ಮಹತ್ವದ ತೀರ್ಪು: RTI ಅಡಿ CJI ಕಚೇರಿ

|
Google Oneindia Kannada News

ನವದೆಹಲಿ, ನವೆಂಬರ್ 13: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ(CJI)ಗಳ ಕಚೇರಿ ಮಾಹಿತಿ ಹಕ್ಕು(ಆರ್ ಟಿಐ) ಕಾಯ್ದೆಯಡಿ ಬರುತ್ತದೆಯೇ, ಇಲ್ಲವೇ ಎಂಬ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿದೆ.

ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀ ಕೋರ್ಟ್ ಹೇಳಿದೆ.

ಆರ್ ಟಿಐ ಕಾಯ್ದೆಯ ಪರಿಧಿಯೊಳಗೆ ಸಿಜೆಐ ಕಚೇರಿ ಸುಪ್ರೀಂನತ್ತ ಎಲ್ಲರ ಚಿತ್ತಆರ್ ಟಿಐ ಕಾಯ್ದೆಯ ಪರಿಧಿಯೊಳಗೆ ಸಿಜೆಐ ಕಚೇರಿ ಸುಪ್ರೀಂನತ್ತ ಎಲ್ಲರ ಚಿತ್ತ

Supreme Court Verdict On CJI office Comes Under RTI Act

ಈ ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ರಂಜನ್ ಗೊಗೊಯ್ ನೇತೃತ್ವದ ಪಂಚಸದಸ್ಯ ಪೀಠ ಇಂದು ಮಧ್ಯಾಹ್ನ 2 ಗಂಟೆಗೆ ತೀರ್ಪು ನೀಡಿದ್ದು, ದೆಹಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ.

ಅಯೋಧ್ಯೆ: ರಾಮಲಲ್ಲಾ ವಕೀಲರಿಗೆ ಸಿಜೆಐ ಗೊಗೊಯ್ ನೀಡಿದ್ದ ಅಪರೂಪದ ಆಫರ್ಅಯೋಧ್ಯೆ: ರಾಮಲಲ್ಲಾ ವಕೀಲರಿಗೆ ಸಿಜೆಐ ಗೊಗೊಯ್ ನೀಡಿದ್ದ ಅಪರೂಪದ ಆಫರ್

ಸಿಜೆಐ ಸಾರ್ವಜನಿಕ ಆಸ್ತಿಯಾಗಿದ್ದು, ಅವರ ಕಚೇರಿ ಆರ್ ಟಿಐ ಕಾಯ್ದೆ ವ್ಯಾಪ್ತಿಗೆ ಬರುತ್ತದೆ. ನ್ಯಾಯಾಂಗದ ಸ್ವಾತಂತ್ರ್ಯವು ನ್ಯಾಯಾಧೀಶರ ಖಾಸಗಿ ಹಕ್ಕು ಅಲ್ಲ. ಅದು ಅವರ ಮೇಲೆ ಸಂವಿಧಾನವು ಹೊರಿಸಿರುವ ಗುರುತರ ಜವಾಬ್ದಾರಿ ಎಂದು ದೆಹಲಿ ಹೈಕೋರ್ಟ್ ಹೇಳಿತ್ತು.

ಈ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾ.ರಂಜನ್ ಗೊಗೊಯ್, ನ್ಯಾ.ಎನ್ ವಿ ರಮಣ, ನ್ಯಾ.ಡಿವೈ ಚಂದ್ರಚೂಡ್, ನ್ಯಾ. ದೀಪಕ್ ಗುಪ್ತ ಹಾಗೂ ನ್ಯಾ.ಸಂಜೀವ್ ಖನ್ನ ಅವರಿದ್ದ ಪೀಠ, ಈ ಮಹತ್ವದ ಆದೇಶ ನೀಡಿದೆ.

ಅಯೋಧ್ಯಾ ತೀರ್ಪು: ಗಮನಿಸಬೇಕಾದ ಕುತೂಹಲಕಾರಿ 10 ಸಂಗತಿಗಳುಅಯೋಧ್ಯಾ ತೀರ್ಪು: ಗಮನಿಸಬೇಕಾದ ಕುತೂಹಲಕಾರಿ 10 ಸಂಗತಿಗಳು

2017 ರಲ್ಲಿ ಆರ್ ಟಿಐ ಕಾರ್ಯಕರ್ತ ಸುಭಾಷ್ ಚಂದ್ರ ಅಗರವಾಲ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಆಸ್ತಿವಿವರದ ಮಾಹಿತಿ ನೀಡುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಈ ಮಾಹಿತಿ ಹಂಚಿಕೊಳ್ಳಲು ನಿರಾಕರಿಸಿ, ಸಿಜೆಐ ಕಚೇರಿ ಮಾಹಿತಿ ಹಕ್ಕು ಕಾಯ್ದೆಯಡಿ ಬರುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

English summary
Supreme Court Verdict On CJI office Comes Under RTI Act,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X