ಸಹಮತದ ಸಲಿಂಗಕಾಮ ಅಪರಾಧವಲ್ಲ ಎಂದ ಸುಪ್ರೀಂ ಕೋರ್ಟ್
Recommended Video

ನವದೆಹಲಿ, ಸೆಪ್ಟೆಂಬರ್ 06:ಐಪಿಸಿ ಸೆಕ್ಷನ್ 377ರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಹಮತದ ಸಲಿಂಗಕಾಮ ಅಪರಾಧವಲ್ಲ ಎಂಬ ತೀರ್ಪು ನೀಡಿದೆ.
ಭಾರತದಲ್ಲಿ ಸಲಿಂಗಕಾಮ ಅಪರಾಧ ಎಂದು ಪರಿಗಣಿಸುವ, ಭಾರತೀಯ ದಂಡಸಂಹಿತೆ(ಐಪಿಸಿ) ಸೆಕ್ಷನ್ 377ರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ
ಹೋಟೆಲ್ ಉದ್ಯಮಿ ಕೇಶವ್ ಸೂರಿ ಅವರು ಸೆಕ್ಷನ್ 377ರ ವಿರುದ್ಧ ಅರ್ಜಿ ಸಲ್ಲಿಸಿದ್ದರು. ನಂತರ ಹಮ್ಸಫರ್ ಟ್ರಸ್ಟ್‌ನ ಅಶೋಕ್ ರಾವ್ ಕವಿ ಮತ್ತು ಆರಿಫ್ ಜಾಫರ್ ಏಪ್ರಿಲ್ 27ರಂದು ಸೆಕ್ಷನ್ ರದ್ದತಿಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ್ದರು. ಮೇ ತಿಂಗಳಿನಿಂದ ನಡೆದ ವಿಚಾರಣೆಯ ತೀರ್ಪು ಇಂದು ಹೊರಬಿದ್ದಿದೆ..
ಕೇಂದ್ರ ಸರ್ಕಾರವೂ ಸೆಕ್ಷನ್ 377 ರದ್ದತಿಯ ಕುರಿತು ಸುಪ್ರೀಂ ಕೋರ್ಟ್ ತನ್ನ ವಿವೇಚನೆಗೆ ತೋಚಿದ್ದನ್ನು ಮಾಡಬಹುದು ಎಂದಿತ್ತು. ಇಬ್ಬರು ವಯಸ್ಕರು ಸಮ್ಮತಿಯಿಂದ ನಡೆಸುವ ಲೈಂಗಿಕ ಕ್ರಿಯೆ ಅಪರಾಧವಲ್ಲ ಎಂದು ಘೋಷಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

Celebrations in Chennai after Supreme Court in a unanimous decision decriminalises #Section377 and legalises homosexuality pic.twitter.com/AqKiGlnO4N
— ANI (@ANI) September 6, 2018












Click it and Unblock the Notifications