ಚಿದಂಬರಂ ನಿರೀಕ್ಷಣಾ ಜಾಮೀನು ಅರ್ಜಿ ಶುಕ್ರವಾರ ವಿಚಾರಣೆಗೆ

ನವದೆಹಲಿ, ಆಗಸ್ಟ್ 21: ಐಎನ್‌ಎಕ್ಸ್‌ ಮೀಡಿಯಾ ಹಗರಣದ ಉರುಳು ಚಿದಂಬರಂ ಅವರ ಕೊರಳಿಗೆ ಗಟ್ಟಿಯಾಗಿ ಸುತ್ತಿಕೊಂಡಿದ್ದು, ಬಿಡುಗಡೆ ಬಯಸಿ ಸುಪ್ರಿಂಕೋರ್ಟ್‌ ನಲ್ಲಿ ಹೂಡಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯೂ ಮುಂದಕ್ಕೆ ಹೋಗಿದೆ.

ಐಎನ್‌ಎಕ್ಸ್‌ ಮೀಡಿಯಾ ಹಗರಣದ ಪ್ರಮುಖ ಆರೋಪಿ ಆಗಿರುವ ಪಿ.ಚಿದಂಬರಂ ಅವರಿಗೆ ಈ ಹಿಂದೆ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿತ್ತು. ನಂತರ ಈಗ ಅದೇ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ರದ್ದು ಮಾಡಿದ್ದ ಕಾರಣ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಸುಪ್ರೀಂಕೋರ್ಟ್‌ಗೆ ಪಿ.ಚಿದಂಬರಂ ಅವರು ಮೊರೆ ಹೋಗಿದ್ದರು. ಆದರೆ ಅಲ್ಲಿಯೂ ಅವರಿಗೆ ಹಿನ್ನಡೆ ಆಗಿದ್ದು, ಅವರ ನಿರೀಕ್ಷಣಾ ಜಾಮೀನಿನ ಅರ್ಜಿಯನ್ನು ತ್ವರಿತವಾಗಿ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿದೆ.

Supreme Will Hear P Chidambaram Bail application on Friday

ಸುಪ್ರೀಂಕೋರ್ಟ್ ಈ ವಾರವೆಲ್ಲಾ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಹಾಗಾಗಿ ತುರ್ತಾಗಿ ಇನ್ನಾವುದೇ ಅರ್ಜಿಗಳನ್ನು ವಿಚಾರಣೆಗೆ ತೆಗೆದುಕೊಂಡಿಲ್ಲ. ಇದು ಚಿದಂಬರಂ ಅವರಿಗೆ ಹಿನ್ನಡೆ ಆಗಿದೆ.

ಸಿಬಿಐ ಪ್ರಕಾರ, ಮಾರಿಷಿಯಸ್ ಮೂಲದ- ಮ್ಯಾಕ್ಸಿಸ್ ನ ಸಹವರ್ತಿ ಗ್ಲೋಬಲ್ ಕಮ್ಯೂನಿಕೇಷನ್ ಸರ್ವೀಸಸ್ ಹೋಲ್ಡಿಂಗ್ಸ್ ನಿಂದ ಏರ್ ಸೆಲ್ ಟೆಲಿಕಾಂನಲ್ಲಿ ಎಂಟುನೂರು ಮಿಲಿಯನ್ ಅಮೆರಿಕನ್ ಡಾಲರ್ ನಷ್ಟು ಹೂಡಿಕೆ ಮಾಡಲು ಅನುಮತಿ ಕೇಳಲಾಗಿತ್ತು. ಅದಕ್ಕೆ ಅನುಮತಿ ಪ್ರಧಾನಿ ಅಧ್ಯಕ್ಷರಾಗಿರುವ ಆರ್ಥಿಕ ವ್ಯವಹಾರಗಳ ಸದನ ಸಮಿತಿಯಿಂದ ಬರಬೇಕಿತ್ತು. ಆದರೆ ಹಣಕಾಸು ಸಚಿವಾಲಯವು ಅನುಮತಿ ಕೊಟ್ಟಿತ್ತು. ಆಗ ಅದರ ನೇತೃತ್ವ ವಹಿಸಿದ್ದವರು ಚಿದಂಬರಂ ಇದರ ವಿಚಾರಣೆಯನ್ನು ಸಿಬಿಐ ಮತ್ತು ಇಡಿ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+