ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಗಾಸಸ್ ಬೇಹುಗಾರಿಕೆ: ಅ.27ರಂದು ಸ್ವತಂತ್ರ ತನಿಖೆ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು

|
Google Oneindia Kannada News

ನವದೆಹಲಿ, ಅಕ್ಟೋಬರ್ 26: ಇಸ್ರೇಲ್ ಮೂಲದ ಪೆಗಾಸಸ್ ತಂತ್ರಾಂಶ ಬಳಸಿಕೊಂಡು ಬೇಹುಗಾರಿಕೆ ನಡೆಸಿರುವ ಪ್ರಕರಣ ಸಂಬಂಧ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಅಕ್ಟೋಬರ್ 27ರಂದು ಪ್ರಕಟಿಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 13ರಂದು ಈ ಕುರಿತು ಆದೇಶವನ್ನು ಕಾಯ್ದಿರಿಸಿತ್ತು. ಕೇಂದ್ರವು ಪೆಗಾಸಸ್ ಬೇಹುಗಾರಿಕೆಯನ್ನು ಕಾನೂನುಬಾಹಿರ ವಿಧಾನಗಳ ಮೂಲಕ ನಾಗರಿಕರ ಮೇಲೆ ಬಳಸಿದೆಯೇ ಅಥವಾ ಇಲ್ಲವೇ ಎಂಬುದನ್ನು ಮಾತ್ರ ತಿಳಿಯಬೇಕಿದೆ ಎಂದು ಹೇಳಿದೆ.

ಪೆಗಾಸಸ್‌ ಹಗರಣ: ಆರಂಭದಿಂದ ಈವರೆಗೆ ಏನೇನಾಗಿದೆ? ಟೈಮ್‌ಲೈನ್‌ಪೆಗಾಸಸ್‌ ಹಗರಣ: ಆರಂಭದಿಂದ ಈವರೆಗೆ ಏನೇನಾಗಿದೆ? ಟೈಮ್‌ಲೈನ್‌

ಪೆಗಾಸಸ್ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಾಂತ್ರಿಕ ತಜ್ಞರ ಸಮಿತಿ ರಚಿಸುವ ಬಗ್ಗೆ ಕೋರ್ಟ್ ಹಿಂದೆ ಸೂಚನೆ ನೀಡಿತ್ತು. ಈ ಮೊದಲು ಕೆಲವೇ ದಿನಗಳಲ್ಲಿ ಆದೇಶ ಹೊರಡಿಸುವುದಾಗಿ ಹೇಳಿದ್ದ ಸುಪ್ರೀಂ ಕೋರ್ಟ್, ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ವಿವರವಾದ ಅಫಿಡವಿಟ್ ಸಲ್ಲಿಸುವ ಬಗ್ಗೆ ಸರ್ಕಾರವು ಮರು ಚಿಂತನೆ ನಡೆಸಿದರೆ ಪ್ರಕರಣದ ಬಗ್ಗೆ ಪ್ರಸ್ತಾಪಿಸುವಂತೆ ಸೂಚಿಸಿತ್ತು.

Supreme Court Will Pronounce Order on Oct.27 on Pleas seeking Independent Probe into Pegasus Scandal

ಕೇಂದ್ರ ಸರ್ಕಾರದಿಂದ ಅಫಿಡವಿಟ್ ಸಲ್ಲಿಕೆಗೆ ಸೂಚನೆ:

ಪೆಗಾಸಸ್ ಅನ್ನು ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲು ಬಳಸಲಾಗಿದೆಯೇ ಮತ್ತು ಅದನ್ನು ಕಾನೂನುಬದ್ಧವಾಗಿ ಮಾಡಲಾಗಿದೆಯೇ ಎಂಬುದು ಕೇಂದ್ರ ಸರ್ಕಾರ ಸಲ್ಲಿಸುವ ಅಫಿಡವಿಟ್ ನಿಂದಲೇ ಗೊತ್ತಾಗಬೇಕಿದೆ. ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ವಿವರವಾದ ಅಫಿಡವಿಟ್ ಸಲ್ಲಿಸುವಂತೆ ಕೋರ್ಟ್ ಹೇಳಿದೆ. ಪೆಗಾಸಸ್ ಸಾಲಿನಲ್ಲಿ ಖಾಸಗಿತನದ ಉಲ್ಲಂಘನೆಯ ಕುರಿತು ಪತ್ರಕರ್ತರು ಹಾಗೂ ಇತರರು ಕಳವಳ ವ್ಯಕ್ತಪಡಿಸಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿವರಗಳನ್ನು ತಿಳಿದುಕೊಳ್ಳಲು ಆಸಕ್ತಿ ಹೊಂದಿಲ್ಲ ಎಂದು ಹೇಳಿದೆ.

ವಿವರವಾದ ಅಫಿಡವಿಟ್ ಸಲ್ಲಿಸಲು ಸಾಧ್ಯವಿಲ್ಲ:

ಪೆಗಾಸಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ಅಫಿಡವಿಟ್ ಅನ್ನು ಸಲ್ಲಿಸುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ನಿರ್ದಿಷ್ಟ ಸಾಫ್ಟ್‌ವೇರ್ ಅನ್ನು ಬಳಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ವಿವರವಾದ ಅಫಿಡವಿಟ್ ಸಲ್ಲಿಸಲು ಬಯಸುವುದಿಲ್ಲ. ಏಕೆಂದರೆ ಅದು ರಾಷ್ಟ್ರೀಯ ಹಿತಾಸಕ್ತಿಯ ವಿಷಯವಾಗಿದ್ದು, ಸಾರ್ವಜನಿಕ ಚರ್ಚೆಯ ವಿಷಯವಲ್ಲ ಎಂದು ಕೇಂದ್ರ ಸರ್ಕಾರವು ಸಮರ್ಥಿಸಿಕೊಂಡಿದೆ.

ಪೆಗಾಸಸ್ ತಂತ್ರಾಂಶದ ದುರ್ಬಳಕೆ ಉಲ್ಲೇಖ:

ಜಾಗತಿಕ ತನಿಖಾ ಸಂಸ್ಥೆಗಳು ಮಾಡಿರುವ ವರದಿಯ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಮಾರಾಟವಾಗಿರುವ ಇಸ್ರೇಲಿನ ಬೇಹುಗಾರಿಕೆ ತಂತ್ರಾಂಶವನ್ನು ಬಳಸಿಕೊಂಡು ವಿರೋಧ ಪಕ್ಷದ ಹಲವು ನಾಯಕರ ಮೇಲೆ ಕಣ್ಗಾವಲು ಇಡಲಾಗಿದೆ. ದೇಶದ ಪ್ರಮುಖ 142ಕ್ಕೂ ಹೆಚ್ಚು ರಾಜಕೀಯ ವ್ಯಕ್ತಿಗಳ ಮೇಲೆ ಬೇಹುಗಾರಿಕೆ ನಡೆಸಲಾಗಿದೆ ಎಂಬ ವರದಿಯ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಅಲ್ಲದೇ, ದೇಶದ 300ಕ್ಕೂ ಹೆಚ್ಚು ಪ್ರಮುಖ ರಾಜಕಾರಣಿಗಳು, ಕೇಂದ್ರ ಸಚಿವರು, ನ್ಯಾಯಾಧೀಶರು ಹಾಗೂ ಪತ್ರಕರ್ತರ ಮೊಬೈಲ್ ಸಂಖ್ಯೆ ಹ್ಯಾಕ್ ಮಾಡಲಾಗಿದೆ. ಈ ಬೇಹಾಗಾರಿಕೆಗೆ ಒಳಗಾದವರ ಪಟ್ಟಿಯಲ್ಲಿ ಸ್ವತಃ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಟಿಎಂಸಿ ಮುಖಂಡ ಅಭಿಷೇಕ್ ಬ್ಯಾನರ್ಜಿ, ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್, ಕೇಂದ್ರ ಸಚಿವರಾದ ಪ್ರಹ್ಲಾದ್ ಪಟೇಲ್ ಮತ್ತು ಅಶ್ವಿನಿ ವೈಷ್ಣವ್ ಜೊತೆಗೆ 40 ಮಂದಿ ಪತ್ರಕರ್ತರ ಹೆಸರು ಕೂಡ ಸೇರಿದೆ.

ಇಸ್ರೇಲ್ ತಂತ್ರಾಂಶವನ್ನು ಬಳಸಿ ಬೇಹುಗಾರಿಕೆ:

ಜಾಗತಿಕ ಸುದ್ದಿ ಸಂಸ್ಥೆಗಳಾಗಿರುವ ವಾಶಿಂಗ್ಟನ್ ಪೋಸ್ಟ್, ದಿ ಗಾರ್ಡಿಯನ್, ಲೇ ಮೊಂಡೆ ಜೊತೆ ಸಹಯೋಗ ಹೊಂದಿರುವ 'ದಿ ವೈರ್' ಪೆಗಾಸಸ್ ಬೇಹುಗಾರಿಕೆ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು. ಮಾಧ್ಯಮ ಪಾಲುದಾರ ಸಂಸ್ಥೆ ಆಗಿರುವ ಪ್ಯಾರಿಸ್ ಮೂಲದ 'ನಾನ್ ಪ್ರಾಫಿಟ್ ಆರ್ಗನೈಸೇಷನ್ ಫಾರ್ಬಿಡನ್ ಸ್ಟೋರೀಸ್ ಮತ್ತು ರೈಟ್ಸ್ ಗ್ರೂಪ್ ಅಮ್ನೆಸ್ಟಿ ಇಂಟರ್ ನ್ಯಾಷನಲ್' ಸಂಸ್ಥೆಗಳು ಈ ಕುರಿತು ತನಿಖೆ ನಡೆಸಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಿವೆ. ಇಸ್ರೇಲ್ ಕಣ್ಗಾವಲು ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ತಂತ್ರಾಂಶವನ್ನು ಬಳಸಿಕೊಂಡು ಜಗತ್ತಿನಾದ್ಯಂತ ಸಾವಿರಾರು ಗಣ್ಯರ ಮೊಬೈಲ್ ಸಂಖ್ಯೆಯನ್ನು ಕದಿಯಲಾಗಿದೆ ಎಂದು ತನಿಖಾ ವರದಿಯಿಂದ ಗೊತ್ತಾಗಿದೆ. ವಿಶ್ವದಲ್ಲಿ ಒಟ್ಟು 50,000ಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳನ್ನು ಕದ್ದುಕೊಳ್ಳಲಾಗಿದೆ ಎಂದು ತಿಳಿದು ಬಂದಿತ್ತು.

English summary
Supreme Court Will Pronounce Order on Oct.27 on Pleas seeking Independent Probe into Pegasus Scandal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X