ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಅರುಣ್ ಶೌರಿ ಅಚ್ಚರಿಯ ಹೇಳಿಕೆ

|
Google Oneindia Kannada News

ನವದೆಹಲಿ, ಜೂನ್ 28: 'ಸರ್ಜಿಕಲ್ ಸ್ಟ್ರೈಕ್ ಸುಳ್ಳು, ಅದೊಂದು ನಾಟಕ' ಎನ್ನುವ ಮೂಲಕ ಅಚ್ಚರಿಯ ಹೇಳಿಕೆ ನೀಡಿದ್ದಾರೆ ಮಾಜಿ ಕೇಂದ್ರ ಸಚಿವ ಅರುಣ್ ಶೌರಿ.

ಬಿಜೆಪಿಯ ಮಾಜಿ ನಾಯಕ ಅರುಣ್ ಶೌರಿ, 'ನರೇಂದ್ರ ಮೋದಿ ಸರ್ಕಾರದ ಸರ್ಜಿಕಲ್ ಸ್ಟ್ರೈಕ್ ಬರೀ ಸುಳ್ಳು. ಕಾಶ್ಮೀರ ಮೊದಲು ಹೇಗಿತ್ತೋ ಹಾಗೆಯೇ ಇದೆ. ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೇ ಆದರೆ ಕಾಶ್ಮಿರ ಬದಲಾಗಬೇಕಿತ್ತು. ಅಲ್ಲಿ ಪರಿಸ್ಥಿತಿ ದಿನೇ ದಿನೇ ಉಲ್ಬಣವಾಗುತ್ತಲೇ ಇದೆ' ಎಂದಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ವಿಡಿಯೋ: ಬಿಜೆಪಿಗೆ ಕಾಂಗ್ರೆಸ್ ತಪರಾಕಿಸರ್ಜಿಕಲ್ ಸ್ಟ್ರೈಕ್ ವಿಡಿಯೋ: ಬಿಜೆಪಿಗೆ ಕಾಂಗ್ರೆಸ್ ತಪರಾಕಿ

ಕಾಂಗ್ರೆಸ್ ಮುಖಂಡ ಸೈಫುದ್ದಿ ಸೋಜ್ ಅವರ 'Kashmir: Glimpses of History and the Story of Struggle' ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ಶೌರಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Surgical strike is farzical or fake: Arun Shourie

2016 ರ ಸೆಪ್ಟೆಂಬರ್ ನಲ್ಲಿ ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದ್ದು, ಇದನ್ನೇ ಸರ್ಜಿಕಲ್ ಸ್ಟ್ರೈಕ್ ಎನ್ನಲಾಗಿತ್ತು. ಉರಿಯಲ್ಲಿ ಸೇನಾ ಶಿಬಿರದ ಮೇಲೆ ನಡೆದ ಉಗ್ರರ ದಾಳಿ ಮತ್ತು 20 ಸೈನಿಕರ ಬಲಿದಾನಕ್ಕೆ ಭಾರತ ಈ ರೀತಿ ಪ್ರತೀಕಾರ ತೀರಿಸಿಕೊಂಡಿತ್ತು. ಆದರೆ ಈ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದೇ ಸುಳ್ಳು ಎಂದು ಶೌರಿ ಹೇಳಿದ್ದಾರೆ.

ಉಗ್ರರ ಹುಟ್ಟಡಗಿಸಿದ್ದ ಸರ್ಜಿಕಲ್ ಸ್ಟ್ರೈಕ್‌ನ ವಿಡಿಯೋ ಬಿಡುಗಡೆಉಗ್ರರ ಹುಟ್ಟಡಗಿಸಿದ್ದ ಸರ್ಜಿಕಲ್ ಸ್ಟ್ರೈಕ್‌ನ ವಿಡಿಯೋ ಬಿಡುಗಡೆ

ಈಗಾಗಲೇ ಮಾಧ್ಯಮಗಳಲ್ಲಿ ಸರ್ಜಿಕಲ್ ಸ್ಟ್ರೈಕ್ ನ ವಿಡಿಯೋಗಳೂ ಹರಿದಾಡುತ್ತಿದ್ದು, ಮತ್ತಷ್ಟು ವಿವಾದ ಸೃಷ್ಟಿಸಿತ್ತು.

English summary
Surgical strike against Pakistan by Indian army is farzical or fake, said former BJP leader and Ex union minister Arun Shourie.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X