ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಲಭೂಷಣ್ ಪ್ರಕರಣ: ತೀರ್ಪನ್ನು ಮುಕ್ತಕಂಠದಿಂದ ಸ್ವಾಗತಿಸಿದ ಸುಷ್ಮಾ ಸ್ವರಾಜ್

|
Google Oneindia Kannada News

ನವದೆಹಲಿ, ಜುಲೈ 17: ಕುಲಭೂಷಣ್ ಜಾಧವ್ ಗೆ ಪಾಕಿಸ್ತಾನ ನೀಡಿದ್ದ ಗಲ್ಲುಶಿಕ್ಷೆಯನ್ನು ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯದ ತೀರ್ಪನ್ನು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ವಾಗತಿಸಿದರು.

"ನಾನು ಅಂತಾರಾಷ್ಟ್ರೀಯ ನ್ಯಾಯಾಲಯದ ಈ ತೀರ್ಪನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ಇದು ಭಾರತಕ್ಕೆ ಸಿಕ್ಕ ಬಹುದೊಡ್ಡ ಜಯ" ಎಂದು ಸುಷ್ಮಾ ಟ್ವೀಟ್ ಮಾಡಿದ್ದಾರೆ.

ಕುಲಭೂಷಣ್ ಜಾಧವ್ ಪ್ರಕರಣ: ಯಾವಾಗ ಏನೇನಾಯ್ತು? Timelineಕುಲಭೂಷಣ್ ಜಾಧವ್ ಪ್ರಕರಣ: ಯಾವಾಗ ಏನೇನಾಯ್ತು? Timeline

ಸುಷ್ಮಾ ಸ್ವರಾಜ್ ಅವರು ವಿದೇಶಾಂಗ ಸಚಿವರಾಗಿದ್ದ ಸಮಯದಲ್ಲೇ ಕುಲಭೂಷಣ್ ಜಾದವ್ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ಯಲಾಗಿತ್ತು.

Sushma Swaraj welcomes ICJ verdict of Kulbhushan Jadhav

"ಜಾಧವ್ ಪ್ರಕರಣವನ್ನು ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಕೊಂಡೊಯ್ಯುವ ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ" ಎಂದು ಸಹ ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದಾರೆ.

Live Updates ಜಾಧವ್ ಗಲ್ಲುಶಿಕ್ಷೆ ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯLive Updates ಜಾಧವ್ ಗಲ್ಲುಶಿಕ್ಷೆ ಅಮಾನತು ಮಾಡಿದ ಅಂತಾರಾಷ್ಟ್ರೀಯ ನ್ಯಾಯಾಲಯ

"ಅಂತಾರಾಷ್ಟ್ರೀಯ ನ್ಯಾಯಾಲಯದ ಮುಂದೆ ಈ ಪ್ರಕರಣವನ್ನು ಅತ್ಯಂತ ಪರಿಣಾಮಕಾರಿಯಾಗಿ ಮತ್ತು ಯಶಸ್ವಿಯಾಗಿ ಹಾಜರುಪಡಿಸಿದ ನ್ಯಾ.ಸಾಳ್ವೆ ಅವರಿಗೂ ನನ್ನ ಧನ್ಯವಾದಗಳು. ಕುಲಭೂಷಣ್ ಜಾಧವ್ ಅವರ ಕುಟುಂಬಕ್ಕೆ ಈ ತೀರ್ಪು ಸಾಕಷ್ಟು ನೆಮ್ಮದಿ, ನಿರಾಳತೆ ನೀಡಿದೆ ಎಂದು ಭಾವಿಸುತ್ತೇನೆ" ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮೂಲಕ ಹೇಳಿದ್ದಾರೆ.

English summary
Former minister for External affairs Sushma Swaraj on twitter wholeheartedly welcomes verdict of International Court of Justice in the case of Kulbhushan Jadhav.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X